Belagavi Session: ರಾಜ್ಯದ 23 ಶಾಲೆಗಳಲ್ಲಿ ಶೌಚಾಲಯ ಇಲ್ಲ; ಶಿಕ್ಷಣ ಸಚಿವರ ಉತ್ತರ ಹೀಗಿದೆ

ರಾಜ್ಯದ ಶೇ 85 ರಷ್ಟು ಶಾಲೆಗಳಲ್ಲಿ ಶೌಚಾಲಯ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಇಲ್ಲ ಎಂಬುದು ಸರ್ಕಾರಕ್ಕೆ ತಿಳಿದಿದೆಯೇ ಎಂದು ಕಾಂಗ್ರೆಸ್ ಶಾಸಕ ಸಚಿವ ತನ್ವೀರ್ ಸೇಠ್ ಪ್ರಶ್ನಿಸಿದರು. ಇವರ ಪ್ರಶ್ನೆಗೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಉತ್ತರ ಹೀಗಿದೆ..

Belagavi Session: ರಾಜ್ಯದ 23 ಶಾಲೆಗಳಲ್ಲಿ ಶೌಚಾಲಯ ಇಲ್ಲ; ಶಿಕ್ಷಣ ಸಚಿವರ ಉತ್ತರ ಹೀಗಿದೆ
ಸಚಿವ ಮಧು ಬಂಗಾರಪ್ಪ
Follow us
ವಿವೇಕ ಬಿರಾದಾರ
|

Updated on: Dec 09, 2023 | 10:02 AM

ಬೆಳಗಾವಿ, ಡಿಸೆಂಬರ್​ 09: ಕರ್ನಾಟಕದ 46,829 ಸರ್ಕಾರಿ ಶಾಲೆಗಳ (Government School) ಪೈಕಿ 23 ಶಾಲೆಗಳಲ್ಲಿ ಮಾತ್ರ ಶೌಚಾಲಯವಿಲ್ಲ (toilets) ಎಂದು ಸರ್ಕಾರ ಶುಕ್ರವಾರ (ಡಿ.09) ಅಧಿವೇಶನದಲ್ಲಿ ತಿಳಿಸಿದೆ. ರಾಜ್ಯದ 5,775 ಶಾಲೆಗಳಲ್ಲಿ ಹೊಸ ಶೌಚಾಲಗಳನ್ನು ನಿರ್ಮಿಸಲು ಡಿಸೆಂಬರ್ 1 ರಂದು ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿತು. ರಾಜ್ಯದ ಶೇ 85 ರಷ್ಟು ಶಾಲೆಗಳಲ್ಲಿ ಶೌಚಾಲಯ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಇಲ್ಲ ಎಂಬುದು ಸರ್ಕಾರಕ್ಕೆ ತಿಳಿದಿದೆಯೇ ಎಂದು ಕಾಂಗ್ರೆಸ್ ಶಾಸಕ ಸಚಿವ ತನ್ವೀರ್ ಸೇಠ್ ಪ್ರಶ್ನಿಸಿದರು.

ಇವರ ಪ್ರಶ್ನೆಗೆ ಉತ್ತರಿಸಿದ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಸ್ತುತ 23 ಶಾಲೆಗಳಲ್ಲಿ ಶೌಚಾಲಯವಿಲ್ಲ. ಉಳಿದ ಶಾಲೆಗಳಲ್ಲಿ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ಸರಕಾರಿ ಶಾಲೆಗಳಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಶೌಚಾಲಯ ನಿರ್ಮಿಸಲಾಗುವುದು. ಎಲ್ಲ ಸರ್ಕಾರಿ ಶಾಲೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇದೆ ಎಂದು ಹೇಳಿದರು.

ಸರಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಶೌಚಾಲಯ ವ್ಯವಸ್ಥೆ ಸುಧಾರಿಸುವ ಪ್ರಯತ್ನದ ಭಾಗವಾಗಿ, ಶಾಲೆಗಳಲ್ಲಿ ಹೊಸ ಶೌಚಾಲಯಗಳ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಮಾಡಿದ ಪ್ರಸ್ತಾವನೆಯನ್ನು ಜಾರಿಗೆ ತರಲು ಡಿಸೆಂಬರ್ 1 ರಂದು ರಾಜ್ಯವು ಆದೇಶ ಹೊರಡಿಸಿದೆ ಎಂದು ಉತ್ತರಿಸಿದರು.

ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಹೇಳಿರುವ ಹಾಗೆ 5,775 ಶಾಲೆಗಳು ಮತ್ತು 150 ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಾಮರ್ಥ್ಯಕ್ಕೆ ಅನುಗುಣವಾಗಿ ಹೊಸ ಶೌಚಾಲಯಗಳನ್ನು ನಿರ್ಮಿಸಲಾಗುವುದು. ಇದು ನೈರ್ಮಲ್ಯವನ್ನು ಉತ್ತೇಜಿಸುತ್ತದೆ ಮತ್ತು ವಿದ್ಯಾರ್ಥಿಗಳ ಆರೋಗ್ಯವನ್ನು ಸುಧಾರಿಸುತ್ತದೆ.

ಇದನ್ನೂ ಓದಿ: ಕಲುಷಿತ ನೀರಿನಿಂದ ಸುದ್ದಿಯಾಗಿದ್ದ ಕವಾಡಿಗರಹಟ್ಟಿಯ ಸರ್ಕಾರಿ ಶಾಲೆ ಈಗ ವಿದ್ಯಾರ್ಥಿಗಳ ಗಮನ ಸೆಳೆಯುತ್ತಿದೆ! ಏನೀ ಬದಲಾವಣೆ?

ಎಂಜಿಎನ್‌ಆರ್‌ಇಜಿಎ ಯೋಜನೆಯ 200 ಕೋಟಿ ರೂಪಾಯಿ ಹಣವನ್ನು ಬಳಸಿಕೊಂಡು ಶಾಲೆಗಳಲ್ಲಿ ಹೊಸ ಶೌಚಾಲಯಗಳನ್ನು ನಿರ್ಮಿಸುವ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಕರ್ನಾಟಕ ಸರ್ಕಾರ ಸೂಚಿಸಿದೆ.

ಕುಡಿಯುವ ನೀರು ಮತ್ತು ಶುದ್ಧ ಶೌಚಾಲಯ ವ್ಯವಸ್ಥೆಗೆ ಪ್ರತಿ ವರ್ಷ ಶಾಲೆಗಳಿಗೆ ಹಣ ಮಂಜೂರು ಮಾಡಲಾಗುತ್ತಿದ್ದು, ಪ್ರಸಕ್ತ ವರ್ಷ 46,829 ಶಾಲೆಗಳಲ್ಲಿ ಮೂಲಭೂತ ಸೌಲಭ್ಯಕ್ಕಾಗಿ 120 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ ಎಂದು ಮಾಹಿತಿ ನೀಡಿದರು.

ಶಾಲಾ ಶೌಚಾಲಯಗಳು ಮತ್ತು ಕುಡಿಯುವ ನೀರಿನ ಸೌಲಭ್ಯಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಶಾಲೆಗಳ ಮುಖ್ಯಸ್ಥರಿಗೆ ವಹಿಸಲಾಗಿದ್ದರೂ, ನವೆಂಬರ್ 8, 2021 ರಂದು ಹೊರಡಿಸಲಾದ ಸರ್ಕಾರದ ಆದೇಶದಂತೆ ನರೇಗಾ ಯೋಜನೆಯ ನಿಧಿಯಿಂದ ಸೌಲಭ್ಯಗಳ ನಿರ್ವಹಣೆಯನ್ನು ಕೈಗೊಳ್ಳಬಹುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Daily Devotional: ನಮಃ ಮಂತ್ರಾಕ್ಷರದ ಅರ್ಥ ಮತ್ತು ಮಹತ್ವ ತಿಳಿಯಿರಿ
Daily Devotional: ನಮಃ ಮಂತ್ರಾಕ್ಷರದ ಅರ್ಥ ಮತ್ತು ಮಹತ್ವ ತಿಳಿಯಿರಿ
Daily horoscope: ವೃಷಭ ರಾಶಿಯವರಿಗೆ ಇಂದು ಧನಯೋಗ
Daily horoscope: ವೃಷಭ ರಾಶಿಯವರಿಗೆ ಇಂದು ಧನಯೋಗ
ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್: ಸಿಎಂ ಘೋಷಣೆ
ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್: ಸಿಎಂ ಘೋಷಣೆ
ಮಾಧ್ಯಮಗೋಷ್ಠಿಯಲ್ಲಿ ಲೈಮ್​ಲೈಟನ್ನು ತನ್ನ ಮೇಲೆ ಎಳೆದುಕೊಂಡಿದ್ದು ಹನುಮಂತು
ಮಾಧ್ಯಮಗೋಷ್ಠಿಯಲ್ಲಿ ಲೈಮ್​ಲೈಟನ್ನು ತನ್ನ ಮೇಲೆ ಎಳೆದುಕೊಂಡಿದ್ದು ಹನುಮಂತು
‘ನನಗೂ ಫ್ಯಾಮಿಲಿ ಇದೆ’: ಮಾಜಿ ಗೆಳತಿ ಕಿರಿಕ್​ ಬಗ್ಗೆ ರಜತ್ ಸ್ಪಷ್ಟನೆ
‘ನನಗೂ ಫ್ಯಾಮಿಲಿ ಇದೆ’: ಮಾಜಿ ಗೆಳತಿ ಕಿರಿಕ್​ ಬಗ್ಗೆ ರಜತ್ ಸ್ಪಷ್ಟನೆ
ಬಿಬಿಎಲ್ ಫೈನಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಮಿಚೆಲ್ ಓವನ್
ಬಿಬಿಎಲ್ ಫೈನಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಮಿಚೆಲ್ ಓವನ್
ಮಾಧ್ಯಮದವರು ಪ್ರಶ್ನೆ ಕೇಳಿದಾಗ ಹನುಮಂತನಿಂದ ಅದೇ ಮುಗ್ಧತೆಯ ಉತ್ತರ!
ಮಾಧ್ಯಮದವರು ಪ್ರಶ್ನೆ ಕೇಳಿದಾಗ ಹನುಮಂತನಿಂದ ಅದೇ ಮುಗ್ಧತೆಯ ಉತ್ತರ!
ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ
ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ
ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?
ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?
ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಹನುಮಂತ ಮೊದಲ ಪ್ರೆಸ್ ಮೀಟ್; ಇಲ್ಲಿದೆ ಲೈವ್
ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಹನುಮಂತ ಮೊದಲ ಪ್ರೆಸ್ ಮೀಟ್; ಇಲ್ಲಿದೆ ಲೈವ್