AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ ಧಡೂತಿ ಮಹಿಳೆಯರ ಸಂಖ್ಯೆ!

ಜಿಲ್ಲಾವಾರು ಅಂಕಿ ಅಂಶದ ಪ್ರಕಾರ ಬೆಂಗಳೂರು ನಗರದಲ್ಲಿ ಬೊಜ್ಜು ಹೊಂದಿದ ಮಹಿಳೆಯ ಸಂಖ್ಯೆ ಹೆಚ್ಚಿದೆ. ಬೆಂಗಳೂರಿನ ಒಟ್ಟೂ ಮಹಿಳೆಯರ ಜನಸಂಖ್ಯೆಯಲ್ಲಿ ಶೇ.40ರಷ್ಟು ಮಹಿಳೆಯರಲ್ಲಿ ಬೊಜ್ಜು ಇದೆ. 2015ರ ಸಮೀಕ್ಷೆಯಲ್ಲಿ ಶೇ 32ರಷ್ಟು ಹೆಣ್ಣುಮಕ್ಕಳು ಮಾತ್ರ ಸ್ಥೂಲ ಕಾಯದಿಂದ ಬಳಲುತ್ತಿದ್ದರು.

ರಾಜ್ಯದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ ಧಡೂತಿ ಮಹಿಳೆಯರ ಸಂಖ್ಯೆ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 26, 2020 | 2:18 PM

Share

ಬೆಂಗಳೂರು: ಕೊರೊನಾ ಬಂದ ನಂತರ ಸಾಕಷ್ಟು ಜನರಿಗೆ ಮನೆಯಿಂದಲೇ ಕೆಲಸ ಮಾಡುವ ಆಯ್ಕೆ ಪ್ರಾಪ್ತವಾಗಿದೆ. ಇದು ಅನೇಕರಿಗೆ ವರದಾನವಾಗಿದೆ. ಎಲ್ಲಕ್ಕಿಂತ ಹೆಚ್ಚಾಗಿ ಪ್ರಯಾಣದ ಅವಧಿ ಉಳಿಯುತ್ತದೆ. ಆದರೆ, 24 ಗಂಟೆ ಮನೆಯಲ್ಲೇ ಉಳಿದುಕೊಳ್ಳುವುದರಿಂದ ಸಾಕಷ್ಟು ಜನರಿಗೆ ಬೊಜ್ಜಿನ ಸಮಸ್ಯೆ ಎದುರಾಗುತ್ತಿದೆ. ಈ ಮಧ್ಯೆ ಶಾಕಿಂಗ್​​ ವರದಿಯೊಂದು ಹೊರ ಬಿದ್ದಿದೆ. ಅದೇನೆಂದರೆ, ರಾಜ್ಯದಲ್ಲಿ ಸ್ಥೂಲ ಕಾಯದ ಮಹಿಳೆಯರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆಯಂತೆ.

ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ 2019–20ರ (ಎನ್‌ಎಫ್‌ಎಚ್ಎಸ್‌– 5ನೇ ಸಮೀಕ್ಷೆ) ವರದಿಯಲ್ಲಿ ಈ ಅಂಶ ಬಹಿರಂಗವಾಗಿದೆ. ಕರ್ನಾಟಕದಲ್ಲಿ ಪ್ರಸಕ್ತ ವರ್ಷ ಶೇ 30.1 ಮಹಿಳೆಯರು ಬೊಜ್ಜಿನಿಂದ ಬಳಲುತ್ತಿದ್ದಾರೆ ಎಂದು ವರದಿ ಹೇಳಿದೆ.  2015–16ನೇ (4ನೇ ಸಮೀಕ್ಷೆ) ವರದಿ ‍ಪ್ರಕಾರ ಸ್ಥೂಲಕಾಯದ ಮಹಿಳೆಯರ ಪ್ರಮಾಣ ಕರ್ನಾಟಕದಲ್ಲಿ ಶೇ 23.3 ಇತ್ತು. ನಾಲ್ಕೇ ವರ್ಷಗಳಲ್ಲಿ ಇದರ ಪ್ರಮಾಣ ಶೇ 6.8ರಷ್ಟು ಹೆಚ್ಚಾಗಿದೆ!

ಬೆಂಗಳೂರೇ ಮೊದಲು ಜಿಲ್ಲಾವಾರು ಅಂಕಿ ಅಂಶದ ಪ್ರಕಾರ ಬೆಂಗಳೂರು ನಗರದಲ್ಲಿ ಬೊಜ್ಜು ಹೊಂದಿದ ಮಹಿಳೆಯ ಸಂಖ್ಯೆ ಹೆಚ್ಚಿದೆ. ಬೆಂಗಳೂರಿನ ಒಟ್ಟೂ ಮಹಿಳೆಯರ ಜನಸಂಖ್ಯೆಯಲ್ಲಿ ಶೇ.40ರಷ್ಟು ಮಹಿಳೆಯರಲ್ಲಿ ಬೊಜ್ಜು ಇದೆ. 2015ರ ಸಮೀಕ್ಷೆಯಲ್ಲಿ ಶೇ 32ರಷ್ಟು ಹೆಣ್ಣುಮಕ್ಕಳು ಮಾತ್ರ ಸ್ಥೂಲ ಕಾಯದಿಂದ ಬಳಲುತ್ತಿದ್ದರು. ಯಾದಗಿರಿ ಜಿಲ್ಲೆಯ ಕೊನೆಯ ಸ್ಥಾನದಲ್ಲಿದ್ದು ಶೇ.19 ಮಂದಿ ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಎರಡನೇ ಸ್ಥಾನದಲ್ಲಿ ದಾವಣಗೆರೆ ಇದ್ದರೆ ನಂತರದ ಸ್ಥಾನದಲ್ಲಿ ಮಂಡ್ಯ, ಮೈಸೂರು, ಚಿತ್ರದುರ್ಗ, ರಾಮನಗರ, ಹಾಸನ, ಕೊಡುಗು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿವೆ. ಈ ಜಿಲ್ಲೆಗಳಲ್ಲಿ ಸ್ಥೂಲ ಕಾಯ ಸಮಸ್ಯೆಯಿಂದ ಬಳಲುತ್ತಿರುವವರ ಪ್ರಮಾಣ ಶೇ.36-38ರ ಆಸುಪಾಸಿನಲ್ಲಿದೆ. ಉತ್ತರ ಕರ್ನಾಟಕದ ಬಹುಪಾಲು ಜಿಲ್ಲೆಗಳಲ್ಲಿ ಸ್ಥೂಲಕಾಯದ ಪ್ರಮಾಣ ಶೇ 25ರ ಆಸುಪಾಸಿನಲ್ಲಿದೆ

ದಕ್ಷಿಣಕನ್ನಡದಲ್ಲಿ ಮಾತ್ರ ಇಳಿಕೆ ಬಹುತೇಕ ಜಿಲ್ಲೆಗಳಲ್ಲಿ ಸ್ಥೂಲಕಾಯದವರ ಸಂಖ್ಯೆ ಹೆಚ್ಚುತ್ತಲೇ ಇದೆ. ಆದರೆ, ದಕ್ಷಿಣ ಕನ್ನಡ ಜಿಲ್ಲೆ ಮಾತ್ರ ಇದಕ್ಕೆ ಭಿನ್ನವಾಗಿದೆ. 2015–16ರ ಸಮೀಕ್ಷೆಯಲ್ಲಿ ಶೇ26ರಷ್ಟಿದ್ದ ಸ್ಥೂಲಕಾಯದವರ ಪ್ರಮಾಣ ಈಗ ಶೇ 22.2ಕ್ಕೆ ಇಳಿಕೆ ಆಗಿದೆ.

ಕಾರಣಗಳೇನು? ವಿಲಾಸಿ ಜೀವನಶೈಲಿ, ಕೊಬ್ಬಿನಂಶ ಹಾಗೂ ಸಕ್ಕರೆ ಪದಾರ್ಥಗಳ ಅತಿಯಾದ ಸೇವನೆ, ವೃತ್ತಿ ಬದುಕಿನ ಮೇಲಾಗುವ ಒತ್ತಡ, ದೈಹಿಕ ಶ್ರಮ ಇಲ್ಲದಿರುವುದು, ಅತಿಯಾದ ಪ್ರಯಾಣ ಬೊಜ್ಜಿನ ಸಮಸ್ಯೆಗೆ ಪ್ರಮುಖ ಕಾರಣ.

ಸಮಸ್ಯೆಗಳೇನು? ಬೊಜ್ಜಿನಿಂದಲೇ ಬಹುಪಾಲು ಆರೋಗ್ಯ ಸಮಸ್ಯೆ, ಕಾಯಿಲೆ ಉಂಟಾಗುತ್ತವೆ. ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಕೂಡ ಉಂಟಾಗಬಹುದು. ಅದರಲ್ಲೂ ಮಹಿಳೆಯರಲ್ಲಿನ ಅತಿಯಾದ ಕೊಬ್ಬಿನಿಂದ ಋತುಚಕ್ರದ ಸಮಸ್ಯೆ, ಅಂಡಾಣು ಉತ್ಪಾದನೆ ಕುಂಠಿತ, ಬಂಜೆತನ, ಮಧುಮೇಹ, ಮೂಳೆ ಸವೆತ, ಕೀಲುನೋವು ಮುಂತಾದ ಸಮಸ್ಯೆಗಳಿಗೂ ಕಾರಣವಾಗುತ್ತದೆ ಎಂದು ಸಮೀಕ್ಷೆ ಹೇಳಿದೆ.

ನೀವು ಹೆಚ್ಚು ಕಾಲ ಬದುಕಬೇಕಾ? ಹಾಗಾದ್ರೆ ಈ ಸರಳ ಉಪಾಯಗಳನ್ನ ಅನುಸರಿಸಿ

ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ