ಕಳೆದೊಂದು ವರ್ಷದಲ್ಲಿ ಗಗನ ಚುಂಬಿಸಿದ ಅಗತ್ಯ ವಸ್ತುಗಳ ಬೆಲೆ: ಯಾವುದರ ಬೆಲೆ, ಎಷ್ಟೆಷ್ಟು ಏರಿಕೆ?
ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ದಿನೇ ದಿನೇ ಗಗನಕ್ಕೇರುತ್ತಿವೆ. ಪೆಟ್ರೋಲ್, ಡೀಸೆಲ್ ಮಾತ್ರವಲ್ಲದೇ, ಎಲ್‌ಪಿಜಿ ಗ್ಯಾಸ್ ಸಿಲಿಂಡರ್, ಅಡುಗೆ ಎಣ್ಣೆ, ಬೇಳೆಕಾಳುಗಳ ಬೆಲೆ ಕೂಡ ಗಗನಕ್ಕೇರಿವೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಕಳೆದೊಂದು ವರ್ಷದಲ್ಲಿ ಯಾವ್ಯಾವ ಅಗತ್ಯ ವಸ್ತುಗಳ ಬೆಲೆ ಯಾವ ಮಟ್ಟಿಗೆ ಏರಿಕೆಯಾಗಿದೆ ಎನ್ನುವುದರ ಡೀಟೈಲ್ಸ್ ಇಲ್ಲಿದೆ ನೋಡಿ. ಕಳೆದೊಂದು ವರ್ಷದಲ್ಲಿ ಗಗನಕ್ಕೇರಿದ ಅಗತ್ಯ ವಸ್ತುಗಳ ಬೆಲೆ ದೇಶದಲ್ಲಿ 2020ರ ಮಾರ್ಚ್ ತಿಂಗಳಿನಿಂದಲೇ ಕೊರೊನಾದ ಭಯ, ಸಂಕಷ್ಟ ಶುರುವಾಗಿತ್ತು. ಆದಾದ […]
ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ದಿನೇ ದಿನೇ ಗಗನಕ್ಕೇರುತ್ತಿವೆ. ಪೆಟ್ರೋಲ್, ಡೀಸೆಲ್ ಮಾತ್ರವಲ್ಲದೇ, ಎಲ್‌ಪಿಜಿ ಗ್ಯಾಸ್ ಸಿಲಿಂಡರ್, ಅಡುಗೆ ಎಣ್ಣೆ, ಬೇಳೆಕಾಳುಗಳ ಬೆಲೆ ಕೂಡ ಗಗನಕ್ಕೇರಿವೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಕಳೆದೊಂದು ವರ್ಷದಲ್ಲಿ ಯಾವ್ಯಾವ ಅಗತ್ಯ ವಸ್ತುಗಳ ಬೆಲೆ ಯಾವ ಮಟ್ಟಿಗೆ ಏರಿಕೆಯಾಗಿದೆ ಎನ್ನುವುದರ ಡೀಟೈಲ್ಸ್ ಇಲ್ಲಿದೆ ನೋಡಿ.
ಕಳೆದೊಂದು ವರ್ಷದಲ್ಲಿ ಗಗನಕ್ಕೇರಿದ ಅಗತ್ಯ ವಸ್ತುಗಳ ಬೆಲೆ
ದೇಶದಲ್ಲಿ 2020ರ ಮಾರ್ಚ್ ತಿಂಗಳಿನಿಂದಲೇ ಕೊರೊನಾದ ಭಯ, ಸಂಕಷ್ಟ ಶುರುವಾಗಿತ್ತು. ಆದಾದ ಬಳಿಕ 2 ಲಾಕ್ ಡೌನ್, ನಿರ್ಬಂಧಗಳನ್ನು ದೇಶದ ಜನರು ಅನುಭವಿಸಿದ್ದಾರೆ. ಲಾಕ್ ಡೌನ್ ನಿಂದ ಸಾಕಷ್ಟು ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಖಾಸಗಿ ಕಂಪನಿಗಳ ಉದ್ಯೋಗಿಗಳು ಅರ್ಧ ಸಂಬಳವನ್ನು ಮಾತ್ರ ಪಡೆಯುತ್ತಿದ್ದಾರೆ. ಕೊರೊನಾ, ಲಾಕ್ ಡೌನ್ ಸಂಕಷ್ಟದ ಕಾರಣದಿಂದ ಜನರ ಸಂಬಳ ಏರಿಕೆಯಾಗುತ್ತಿಲ್ಲ. ಆದರೇ, ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ.
ಇದು ಜನರ ಗಾಯದ ಮೇಲೆ ಬರೆ ಎಳೆದಂತಾಗಿದೆ. ಮಧ್ಯಮ ವರ್ಗ, ಕೆಳ ವರ್ಗದ ಜನರು ನಿತ್ಯದ ಮನೆ ಖರ್ಚುವೆಚ್ಚಗಳನ್ನು ನಿಭಾಯಿಸಲಾಗದೇ ಪರದಾಡುತ್ತಿದ್ದಾರೆ. ಮನೆಯ ಪ್ರತಿ ತಿಂಗಳ ಖರ್ಚಿನ ಬಜೆಟ್ ಏರಿಕೆಯಾಗುತ್ತಿರುವುದು ಮಧ್ಯಮ ವರ್ಗ ಕಂಗಾಲಾಗುವಂತೆ ಮಾಡಿದೆ.
ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಇಂದು 25 ರೂಪಾಯಿ ಏರಿಕೆ
ಪ್ರತಿ ತಿಂಗಳ ಮೊದಲ ದಿನವೇ ತೈಲ ಕಂಪನಿಗಳು ಹಾಗೂ ಗ್ಯಾಸ್ ಕಂಪನಿಗಳು ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಏರಿಕೆ ಮಾಡುತ್ತಿವೆ. ಸೆಪ್ಟೆಂಬರ್ 1ರ ಇಂದು ದೇಶದಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು 25 ರೂಪಾಯಿ ಏರಿಕೆ ಮಾಡಿವೆ. ಕಳೆದ 15 ದಿನದ ಅಂತರದಲ್ಲಿ 2ನೇ ಭಾರಿಗೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಾಗಿದೆ.
ಆಗಸ್ಟ್ 18 ರಂದು ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು 25 ರೂಪಾಯಿ ಏರಿಕೆ ಮಾಡಲಾಗಿತ್ತು. ಈಗ ಮತ್ತೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಇಂದು 25 ರೂಪಾಯಿ ಏರಿಕೆ ಮಾಡಲಾಗಿದೆ. ಇದರಿಂದಾಗಿ ಈಗ ಬೆಂಗಳೂರಿನಲ್ಲಿ 14.2 ಕೆಜಿ ತೂಕದ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ 887.5 ರೂಪಾಯಿಗೆ ಏರಿಕೆಯಾಗಿದೆ.
ದೆಹಲಿಯಲ್ಲಿ 884.5 ರೂಪಾಯಿಗೆ ಏರಿಕೆಯಾಗಿದೆ. ಕೋಲ್ಕತ್ತಾದಲ್ಲಿ 911 ರೂಪಾಯಿಗೆ ಏರಿಕೆಯಾಗಿದೆ. ಮುಂಬೈನಲ್ಲಿ 884.5 ರೂಪಾಯಿಗೆ ಗ್ಯಾಸ್ ಸಿಲಿಂಡರ್ ದರ ಏರಿಕೆಯಾಗಿದೆ. ಚೆನ್ನೈನಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ 900.5 ರೂಪಾಯಿಗೆ ಏರಿಕೆಯಾಗಿದೆ. ದೇಶದಲ್ಲಿ 2020ರ ಡಿಸೆಂಬರ್ ನಲ್ಲಿ ಎಲ್.ಪಿ.ಜಿ ಗ್ಯಾಸ್ ಸಿಲಿಂಡರ್ ಬೆಲೆ 594 ರೂಪಾಯಿ ಇತ್ತು. ಈಗ ಕೇವಲ 9 ತಿಂಗಳ ಅವಧಿಯಲ್ಲೇ ಬರೋಬ್ಬರಿ 290 ರೂಪಾಯಿ ಏರಿಕೆಯಾಗಿದೆ.
ಇನ್ನೂ 19 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯು ಇಂದು 75 ರೂಪಾಯಿ ಏರಿಕೆಯಾಗಿದೆ. ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆಯು 1,693 ರೂಪಾಯಿಗೆ ಏರಿಕೆಯಾಗಿದೆ.
ಕಳೆದೊಂದು ವರ್ಷದಲ್ಲಿ ಯಾವ್ಯಾವುದರ ಬೆಲೆ ಏರಿಕೆ?
ಕಳೆದೊಂದು ವರ್ಷದಲ್ಲಿ ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ, ಬೇಳೆಕಾಳುಗಳ ಬೆಲೆ ಏರಿಕೆಯಾಗಿದೆ. ಕಳೆದೊಂದು ವರ್ಷದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 26 ರೂಪಾಯಿ ಏರಿಕೆಯಾಗಿದೆ. ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 25 ರೂಪಾಯಿ ಏರಿಕೆಯಾಗಿದೆ. ಇನ್ನೂ ಅಡುಗೆ ಎಣ್ಣೆ ಬೆಲೆ ಪ್ರತಿ ಲೀಟರ್ ಗೆ 80 ರೂಪಾಯಿ ಏರಿಕೆಯಾಗಿದೆ. ನಿತ್ಯ ಅಡುಗೆಗೆ ಬಳಸುವ ಬೇಳೆಕಾಳುಗಳ ಬೆಲೆ ಪ್ರತಿ ಕೆಜಿಗೆ 50 ರೂಪಾಯಿ ಏರಿಕೆಯಾಗಿದೆ. ಇದರಿಂದಾಗಿ ಅಡುಗೆ ಮನೆಯ ಖರ್ಚುವೆಚ್ಚು ನಿಭಾಯಿಸುವ ಗೃಹಿಣಿಯರು ಪರದಾಡುವಂತಾಗಿದೆ. ಮನೆಗಳಲ್ಲಿ ಮನೆ ನಿರ್ವಹಣೆ, ಅಡುಗೆಮನೆ ಖರ್ಚು ವೆಚ್ಚ ಏರಿಕೆಯಾಗುತ್ತಿದೆ.
ಬೆಲೆ ಏರಿಕೆಯಲ್ಲಿ ಒಂದಕ್ಕೊಂದು ಅಂತರ್ ಸಂಬಂಧ ಇದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾದರೇ, ಉಳಿದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತೆ. ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳದಿಂದ ಸರಕು, ಸಾಗಣೆ ವೆಚ್ಚ ಹೆಚ್ಚಾಗುತ್ತೆ. ಹೀಗಾಗಿ ಅಗತ್ಯ ವಸ್ತುಗಳ ಬೆಲೆಯನ್ನು ಕೂಡ ಏರಿಕೆ ಮಾಡಲಾಗುತ್ತೆ. ಪೆಟ್ರೋಲ್, ಡೀಸೆಲ್ ದರ ಕಡಿಮೆ ಇದ್ದರೇ, ಸರಕು,ಸಾಗಣೆ ವೆಚ್ಚ ಇಳಿಕೆಯಾಗಿ, ಉಳಿದ ಅಗತ್ಯ ವಸ್ತುಗಳ ಬೆಲೆ ಕೂಡ ಇಳಿಕೆ ಮಾಡಲು ಅವಕಾಶವಾಗುತ್ತೆ. ಸರಕು, ಸಾಗಣೆ ವೆಚ್ಚ ಹೆಚ್ಚಾದಷ್ಟು, ಆಯಾ ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡಲಾಗುತ್ತೆ.
LPG Cylinder Price: ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಮತ್ತೆ 25 ರೂಪಾಯಿ ಏರಿಕೆ; ಗ್ಯಾಸ್ ಬಲುಭಾರ
(in spite of corona pandemic essential goods prices skyrocket in india)