ಡಾ.ಶಿವರಾಮ ಕಾರಂತ ಬಡಾವಣೆಗೆ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರಿಂದ ಪ್ರತಿಭಟನೆ

ಡಾ.ಶಿವರಾಮ ಕಾರಂತ ಬಡಾವಣೆಗೆ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರಿಂದ ಪ್ರತಿಭಟನೆ
ಪ್ರತಿಭಟನೆಗೆ ಮುಂದಾದ ಗ್ರಾಮಸ್ಥರು

ಡಾ.ಶಿವರಾಮ ಕಾರಂತ ಬಡಾವಣೆ ಹೆಸರಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಭೂಸ್ವಾಧೀನ ವಿಚಾರಕ್ಕೆ ಸಂಬಂಧಿಸಿ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ಗ್ರಾಮಸ್ಥರು ಪ್ರತಿಭಟನೆಗೆ ಮುಂದಾಗಿದ್ದಾರೆ.

shruti hegde

| Edited By: sadhu srinath

Mar 24, 2021 | 4:51 PM

ನೆಲಮಂಗಲ: ಡಾ.ಶಿವರಾಮ ಕಾರಂತ ಬಡಾವಣೆ ಹೆಸರಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ಗ್ರಾಮಸ್ಥರು ಪ್ರತಿಭಟನೆಗೆ ಮುಂದಾಗಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಪ್ರತಿಭಟನೆ ನಡೆಸಿದ್ದಾರೆ.

ಕೆಂಪಾಪುರ, ಸೋಮಶೆಟ್ಟಿಹಳ್ಳಿ, ಲಕ್ಷ್ಮೀಪುರ, ಗಾಣಿಗರಹಳ್ಳಿಯ ಗ್ರಾಮಸ್ಥರು ನಡೆಸುವ ಪ್ರತಿಭಟನೆಯನ್ನು ತಡೆಯಲು ಪೊಲೀಸರು ಸಕಲ ಸಿದ್ಧತೆ ಮಾಡಿಕೊಂಡಿದ್ದರು. ಪ್ರತಿಭಟನೆಗೆ ತೆರಳಿದರೆ ಕೇಸ್ ಹಾಕುವುದಾಗಿ ಪೊಲೀಸರು ಬೆದರಿಕೆ ಹಾಕಿದ್ದಾರೆ. ಈ ರೀತಿಯಾಗಿ ಬೆದರಿಕೆ ಹಾಕುತ್ತಿರುವ ಪೊಲೀಸರ ವಿರುದ್ಧ ಗ್ರಾಮಸ್ಥರಿಂದ ಆರೋಪದ ಮಾತು ಕೇಳಿ ಬಂದಿದೆ. ಸೋಲದೇವನಹಳ್ಳಿ ಪೊಲೀಸರ ವಿರುದ್ಧ ಗ್ರಾಮಸ್ಥರು ಕಿಡಿಕಾರಿದ್ದಾರೆ. ಗ್ರಾಮಗಳಿಗೆ ಜೆಡಿಎಸ್ ಶಾಸಕ ಆರ್.ಮಂಜುನಾಥ್ ಭೇಟಿ ನೀಡಿದ್ದು, ಸರ್ಕಾರದ ನಡೆ ವಿರುದ್ಧ ಶಾಸಕ ಮಂಜುನಾಥ್ ಆಕ್ರೋಶ ಹೊರಹಾಕಿದ್ದಾರೆ.

ಜನರು ಮತ್ತು ರೈತರು ಇಂದು ಬಿಡಿಎಗೆ ಮುತ್ತಿಗೆಗೆ ಮುಂದಾಗಿದ್ದರು. ಪ್ರತಿಭಟನೆಗೆ ಅವಕಾಶ ಕೊಡದೆ ಪ್ರತಿಭಟನೆಕಾರರನ್ನು ಬಸ್​ನಲ್ಲಿ ಬಲವಂತವಾಗಿ ಪೊಲೀಸರು ಕರೆದೊಯ್ದಿದ್ದಾರೆ. ಈ ಕುರಿತಾಗಿ ಪ್ರತಿಭಟನೆಕಾರರು ಮತ್ತು ಪೊಲೀಸರ ಮಧ್ಯೆ ಮಾತಿನ ಚಕಮಕಿ ಏರ್ಪಟ್ಟಿದೆ. ನಮ್ಮ ಜಾಗವನ್ನು ನಮಗೆ ನೀಡಿ ಎಂದು ಜನರು ಒತ್ತಾಯಿಸಿದ್ದಾರೆ. ಬಿಡಿಎ ಮುಂದೆ ಪ್ರತಿಭಟನೆ ನಡೆಸಲು ಪೊಲೀಸರು ತಡೆ ಒಡ್ಡಿದ್ದಾರೆ. ದಾರಿ ಮಧ್ಯವೇ ಪ್ರತಿಭಟನಾಕಾರರನ್ನು ತಡೆದು ಪೊಲೀಸರು ಕೆಲವರನ್ನು ಬಂಧಿಸಿದ್ದಾರೆ.

ಈ ಕುರಿತಂತೆ ಕೋಡಿಹಳ್ಳಿ ಚಂದ್ರಶೇಖರ್ ಹೇಳಿಕೆ ನೀಡಿದ್ದು, ಶಿವರಾಮ ಕಾರಂತ ಬಡಾವಣೆ ವಿಚಾರ 12 ವರ್ಷಗಳ ಹಿಂದೆ ನೋಟಿಫಿಕೇಶನ್ ಆಗಿದೆ. 24 ಅಪಾರ್ಟ್‌ಮೆಂಟ್ ಕಟ್ಟಲು ಬಿಡಿಎ ಅನುಮತಿ ಕೊಟ್ಟಿದೆ. ಲೇಔಟ್ ಮಾಡಲು ಈಗ ಬಿಡಿಎ ಮುಂದಾಗಿದೆ. ಸುಪ್ರೀಂಕೋರ್ಟ್ ಹೇಳುತ್ತಿದೆ ಎಂದು ಬಿಡಿಎ ಜನರಿಗೆ ಕಿರುಕುಳ ಕೊಡುತ್ತಿದೆ. ಜನರಿಗೆ ಕಿರುಕುಳ ಕೊಟ್ಟು ಲೇಔಟ್ ಮಾಡೋದು ಎಷ್ಟು ಸರಿ? ಸತ್ಯಾಗ್ರಹ ತಡೆಯೋದು ಸರಿಯಲ್ಲ. ಶಾಸಕ ವಿಶ್ವನಾಥ್ ಮಾತು ತಪ್ಪಬಾರದು. ವಿರೋಧ ಪಕ್ಷದಲ್ಲಿದ್ದಾಗ ಒಂದು ಮಾತು, ಆಡಳಿತ ಪಕ್ಷದಲ್ಲಿದ್ದಾಗ ಒಂದು ಮಾತನಾಡೋದು ಸರಿಯಲ್ಲ. ಅವರು ಮಾತಿಗೆ ತಪ್ಪಿದ್ದಕ್ಕೆ ಜನ ಇಂದು ಬೀದಿಗೆ ಬಂದಿದ್ದಾರೆ ಎಂದು ಮಾತನಾಡಿದ್ದಾರೆ.

ಇದನ್ನೂ ಓದಿ: ಭೀಕರ ರಸ್ತೆ ಅಪಘಾತ: ಹೆದ್ದಾರಿ ಭೂಸ್ವಾಧೀನ ಅಧಿಕಾರಿ ಸೇರಿ ಇಬ್ಬರ ದುರ್ಮರಣ

ಯಲಹಂಕ ಭೂಸ್ವಾಧೀನಾಧಿಕಾರಿಯಾಗಿದ್ದ ಡಾ. ಸುಧಾ ಮನೆ ACB ರೇಡ್; ಮನೆಯಲ್ಲಿ ‘ಚಿನ್ನದ ಗಣಿ’

Follow us on

Related Stories

Most Read Stories

Click on your DTH Provider to Add TV9 Kannada