ಚಿಕ್ಕೋಡಿಯಲ್ಲಿ ಭೀಕರ ಬರ, ಜಾನುವಾರು ಮಾರಾಟಕ್ಕೆ ಮುಂದಾದ ರೈತರು

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ಭೀಕರ ಬರ ಪರಿಸ್ಥಿತಿಯಿಂದ ನಷ್ಟ ಅನುಭವಿಸಿದ ರೈತರು ಜಾನುವಾರು ಮಾರಾಟಕ್ಕೆ ಮುಂದಾಗಿದ್ದಾರೆ. ಬರ ಪರಿಸ್ಥಿತಿಯಿಂದಾಗಿ ಬೆಳೆ ನಾಶವಾಗಿ ಜಾನುವಾರುಗಳಿಗೆ ಮೇವು ನೀಡಲು ಕಷ್ಟವಾಗುತ್ತಿದೆ ಎಂದು ರೈತರು ಆರೋಪಿಸಿದ್ದಾರೆ.

ಚಿಕ್ಕೋಡಿಯಲ್ಲಿ ಭೀಕರ ಬರ, ಜಾನುವಾರು ಮಾರಾಟಕ್ಕೆ ಮುಂದಾದ ರೈತರು
ಬರಗಾಲ ಹಿನ್ನೆಲೆ ಜಾನುವಾರು ಮಾರಾಟಕ್ಕೆ ಮುಂದಾದ ಚಿಕ್ಕೋಡಿ ರೈತರು
Follow us
TV9 Web
| Updated By: Rakesh Nayak Manchi

Updated on: Nov 06, 2023 | 4:39 PM

ಚಿಕ್ಕೋಡಿ, ನ.6: ಬೆಳಗಾವಿ (Belagavi) ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ಭೀಕರ ಬರ ಪರಿಸ್ಥಿತಿಯಿಂದ ನಷ್ಟ ಅನುಭವಿಸಿದ ರೈತರು ಜಾನುವಾರು ಮಾರಾಟಕ್ಕೆ ಮುಂದಾಗಿದ್ದಾರೆ. ಬರ ಪರಿಸ್ಥಿತಿಯಿಂದಾಗಿ ಬೆಳೆ ನಾಶವಾಗಿ ಜಾನುವಾರುಗಳಿಗೆ ಮೇವು ನೀಡಲು ಕಷ್ಟವಾಗುತ್ತಿದೆ ಎಂದು ರೈತರು ಆರೋಪಿಸಿದರು. ಬರಗಾಲದ ಹಿನ್ನೆಲೆಯಲ್ಲಿ ಚಿಕ್ಕೋಡಿ ತಾಲೂಕಿನ ಹಲವಾರು ಗ್ರಾಮದ ರೈತರು ತಮ್ಮ ಹಸು, ಎಮ್ಮೆಗಳನ್ನು ಜಾನುವಾರು ಸಂತೆಗೆ ತಂದು ಮಾರಾಟ ಮಾಡಿದ್ದಾರೆ.

ಬೆಳಗಾವಿಯ 14 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಹುಕ್ಕೇರಿ, ಚಿಕ್ಕೋಡಿ, ಕಡವಾಡ, ಅಥಣಿ, ರಾಯಬಾಗ, ನಿಪ್ಪಾಣಿ ಭಾಗದಲ್ಲಿ ಭೀಕರ ಬರಗಾಲ ಆವರಿಸಿದೆ. ಅನಿವಾರ್ಯ ಪರಿಸ್ಥಿತಿಯಲ್ಲಿ ಜಾನುವಾರುಗಳನ್ನು ಅಗ್ಗದ ಬೆಲೆಗೆ ಮಾರಾಟ ಮಾಡುತ್ತಿದ್ದೇವೆ ಎಂದು ರೈತರು ಹೇಳಿದ್ದಾರೆ.

ನನ್ನ ಜಾನುವಾರುಗಳನ್ನು ನಾನು ಮಕ್ಕಳಂತೆ ನೋಡಿಕೊಂಡಿದ್ದರಿಂದ ಅವುಗಳನ್ನು ಮಾರಾಟ ಮಾಡಲು ನನಗೆ ಬೇಸರವಾಗಿದೆ. 1 ಲಕ್ಷ ಮೌಲ್ಯದ ಎಮ್ಮೆ 20 ಸಾವಿರ ರೂ.ಗೆ ಮಾರಾಟವಾಗುತ್ತಿದೆ. ಮಳೆಯ ಅಭಾವದಿಂದ ಜಮೀನುಗಳಲ್ಲಿನ ಬೆಳೆಗಳು ನಾಶವಾಗಿವೆ. ಸರಕಾರದಿಂದ ನಮಗೆ ಬೆಂಬಲ ನೀಡುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಇನ್ನೂ ಸಿಕ್ಕಿಲ್ಲ ಎಂದು ಹುಕ್ಕೇರಿಯ ರೈತ ಲಲಿತಾ ಮಾಯಣ್ಣನವರ್ ದೂರಿದರು.

ಇದನ್ನೂ ಓದಿ: ಬೆಳಗಾವಿ ರಾಜಕಾರಣದಲ್ಲಿ ಮತ್ತೆ ತಳಮಳ: ಸಚಿವ ಸತೀಶ್ ಜಾರಕಿಹೊಳಿ

ಅತಿಯಾದ ಲೋಡ್ ಶೆಡ್ಡಿಂಗ್‌ನಿಂದ ಜಮೀನುಗಳಿಗೆ ಬೋರ್‌ವೆಲ್‌ನಿಂದ ನೀರು ಪೂರೈಕೆಗೆ ತೊಂದರೆಯಾಗುತ್ತಿದೆ ಎಂದು ರೈತರು ಆರೋಪಿಸಿದ್ದಾರೆ. ನನ್ನ ಬಳಿ ಆರು ಹಸುಗಳಿವೆ ಮತ್ತು ಬರಗಾಲದ ಕಾರಣ ಅವುಗಳನ್ನು ಸಾಕಲು ಸಾಧ್ಯವಾಗದ ಕಾರಣ ನಾನು ಅವುಗಳಲ್ಲಿ ಎರಡನ್ನು ಮಾರಾಟ ಮಾಡುತ್ತಿದ್ದೇನೆ ಎಂದು ಹುಕ್ಕೇರಿಯ ರೈತ ಶಿವು ಹೇಳಿದರು.

ನಮ್ಮ ತಾಲೂಕನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದರೂ ಯಾವುದೇ ನೆರವು ಸಿಕ್ಕಿಲ್ಲ. ಜಮೀನಿನಲ್ಲಿದ್ದ ಬೆಳೆಗಳು ನಾಶವಾಗಿವೆ. ಬೋರ್‌ವೆಲ್‌ನಿಂದ ನೀರಾವರಿಗೆ ಸರಿಯಾಗಿ ವಿದ್ಯುತ್ ಇಲ್ಲ. ಬರ ಪರಿಸ್ಥಿತಿಯಿಂದಾಗಿ ಜಾನುವಾರುಗಳನ್ನು ಅರ್ಧ ಬೆಲೆಗೆ ಮಾರುತ್ತಿದ್ದೇನೆ ಎಂದರು.

ಸಮರ್ಕಪ ಮಳೆಯಾದ ಹಿನ್ನೆಲೆ 236 ತಾಲೂಕುಗಳ ಪೈಕಿ 216 ತಾಲೂಕುಗಳನ್ನು ಬರಪೀಡಿತ ಎಂದು ಸರಕಾರ ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ.4ರಂದು ಜಿಲ್ಲಾ ಉಸ್ತುವಾರಿ ಸಚಿವರು ಬರಪೀಡಿತ ತಾಲೂಕುಗಳಿಗೆ ಭೇಟಿ ನೀಡಿ ವಿವರವಾದ ವರದಿಯನ್ನು ನವೆಂಬರ್ 15ರಂದು ತಮಗೆ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ