ಚಿಕ್ಕೋಡಿ, ನ.6: ಬೆಳಗಾವಿ (Belagavi) ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ಭೀಕರ ಬರ ಪರಿಸ್ಥಿತಿಯಿಂದ ನಷ್ಟ ಅನುಭವಿಸಿದ ರೈತರು ಜಾನುವಾರು ಮಾರಾಟಕ್ಕೆ ಮುಂದಾಗಿದ್ದಾರೆ. ಬರ ಪರಿಸ್ಥಿತಿಯಿಂದಾಗಿ ಬೆಳೆ ನಾಶವಾಗಿ ಜಾನುವಾರುಗಳಿಗೆ ಮೇವು ನೀಡಲು ಕಷ್ಟವಾಗುತ್ತಿದೆ ಎಂದು ರೈತರು ಆರೋಪಿಸಿದರು. ಬರಗಾಲದ ಹಿನ್ನೆಲೆಯಲ್ಲಿ ಚಿಕ್ಕೋಡಿ ತಾಲೂಕಿನ ಹಲವಾರು ಗ್ರಾಮದ ರೈತರು ತಮ್ಮ ಹಸು, ಎಮ್ಮೆಗಳನ್ನು ಜಾನುವಾರು ಸಂತೆಗೆ ತಂದು ಮಾರಾಟ ಮಾಡಿದ್ದಾರೆ.
ಬೆಳಗಾವಿಯ 14 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಹುಕ್ಕೇರಿ, ಚಿಕ್ಕೋಡಿ, ಕಡವಾಡ, ಅಥಣಿ, ರಾಯಬಾಗ, ನಿಪ್ಪಾಣಿ ಭಾಗದಲ್ಲಿ ಭೀಕರ ಬರಗಾಲ ಆವರಿಸಿದೆ. ಅನಿವಾರ್ಯ ಪರಿಸ್ಥಿತಿಯಲ್ಲಿ ಜಾನುವಾರುಗಳನ್ನು ಅಗ್ಗದ ಬೆಲೆಗೆ ಮಾರಾಟ ಮಾಡುತ್ತಿದ್ದೇವೆ ಎಂದು ರೈತರು ಹೇಳಿದ್ದಾರೆ.
ನನ್ನ ಜಾನುವಾರುಗಳನ್ನು ನಾನು ಮಕ್ಕಳಂತೆ ನೋಡಿಕೊಂಡಿದ್ದರಿಂದ ಅವುಗಳನ್ನು ಮಾರಾಟ ಮಾಡಲು ನನಗೆ ಬೇಸರವಾಗಿದೆ. 1 ಲಕ್ಷ ಮೌಲ್ಯದ ಎಮ್ಮೆ 20 ಸಾವಿರ ರೂ.ಗೆ ಮಾರಾಟವಾಗುತ್ತಿದೆ. ಮಳೆಯ ಅಭಾವದಿಂದ ಜಮೀನುಗಳಲ್ಲಿನ ಬೆಳೆಗಳು ನಾಶವಾಗಿವೆ. ಸರಕಾರದಿಂದ ನಮಗೆ ಬೆಂಬಲ ನೀಡುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಇನ್ನೂ ಸಿಕ್ಕಿಲ್ಲ ಎಂದು ಹುಕ್ಕೇರಿಯ ರೈತ ಲಲಿತಾ ಮಾಯಣ್ಣನವರ್ ದೂರಿದರು.
ಇದನ್ನೂ ಓದಿ: ಬೆಳಗಾವಿ ರಾಜಕಾರಣದಲ್ಲಿ ಮತ್ತೆ ತಳಮಳ: ಸಚಿವ ಸತೀಶ್ ಜಾರಕಿಹೊಳಿ
ಅತಿಯಾದ ಲೋಡ್ ಶೆಡ್ಡಿಂಗ್‌ನಿಂದ ಜಮೀನುಗಳಿಗೆ ಬೋರ್‌ವೆಲ್‌ನಿಂದ ನೀರು ಪೂರೈಕೆಗೆ ತೊಂದರೆಯಾಗುತ್ತಿದೆ ಎಂದು ರೈತರು ಆರೋಪಿಸಿದ್ದಾರೆ. ನನ್ನ ಬಳಿ ಆರು ಹಸುಗಳಿವೆ ಮತ್ತು ಬರಗಾಲದ ಕಾರಣ ಅವುಗಳನ್ನು ಸಾಕಲು ಸಾಧ್ಯವಾಗದ ಕಾರಣ ನಾನು ಅವುಗಳಲ್ಲಿ ಎರಡನ್ನು ಮಾರಾಟ ಮಾಡುತ್ತಿದ್ದೇನೆ ಎಂದು ಹುಕ್ಕೇರಿಯ ರೈತ ಶಿವು ಹೇಳಿದರು.
ನಮ್ಮ ತಾಲೂಕನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದರೂ ಯಾವುದೇ ನೆರವು ಸಿಕ್ಕಿಲ್ಲ. ಜಮೀನಿನಲ್ಲಿದ್ದ ಬೆಳೆಗಳು ನಾಶವಾಗಿವೆ. ಬೋರ್‌ವೆಲ್‌ನಿಂದ ನೀರಾವರಿಗೆ ಸರಿಯಾಗಿ ವಿದ್ಯುತ್ ಇಲ್ಲ. ಬರ ಪರಿಸ್ಥಿತಿಯಿಂದಾಗಿ ಜಾನುವಾರುಗಳನ್ನು ಅರ್ಧ ಬೆಲೆಗೆ ಮಾರುತ್ತಿದ್ದೇನೆ ಎಂದರು.
ಸಮರ್ಕಪ ಮಳೆಯಾದ ಹಿನ್ನೆಲೆ 236 ತಾಲೂಕುಗಳ ಪೈಕಿ 216 ತಾಲೂಕುಗಳನ್ನು ಬರಪೀಡಿತ ಎಂದು ಸರಕಾರ ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ.4ರಂದು ಜಿಲ್ಲಾ ಉಸ್ತುವಾರಿ ಸಚಿವರು ಬರಪೀಡಿತ ತಾಲೂಕುಗಳಿಗೆ ಭೇಟಿ ನೀಡಿ ವಿವರವಾದ ವರದಿಯನ್ನು ನವೆಂಬರ್ 15ರಂದು ತಮಗೆ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ