ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಉಪ ಪಂಗಡಗಳನ್ನು OBC ಗೆ ಸೇರಿಸುವಂತೆ ಕೇಂದ್ರಕ್ಕೆ ಮಠಾಧೀಶರ ಮನವಿ

Veerashaiva Lingayat Community: ಉಜ್ಜಯಿನಿ ಪೀಠದ ಜಗದ್ಗುರು ನೇತೃತ್ವದಲ್ಲಿರಾಷ್ಟ್ರೀಯ ವೀರಶೈವ ಲಿಂಗಾಯತ ಮಠಾಧೀಶರ ಸಭೆ ಆರಂಭವಾಗಿದ್ದು, ಸಮುದಾಯದ ಎಲ್ಲ ಉಪಪಂಗಡಗಳನ್ನು ಒಬಿಸಿಗೆ ಸೇರಿಸುವಂತೆ ಕೇಂದ್ರಕ್ಕೆ ಒತ್ತಾಯಿಸಿ ಸಭೆಯಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ. 

ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಉಪ ಪಂಗಡಗಳನ್ನು OBC ಗೆ ಸೇರಿಸುವಂತೆ ಕೇಂದ್ರಕ್ಕೆ ಮಠಾಧೀಶರ ಮನವಿ
ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಬಿಸಿಗೆ ಸೇರಿಸುವಂತೆ ಕೇಂದ್ರಕ್ಕೆ ಮನವಿ
Follow us
ಸಾಧು ಶ್ರೀನಾಥ್​
| Updated By: Digi Tech Desk

Updated on:Feb 13, 2021 | 12:29 PM

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಾಷ್ಟ್ರೀಯ ವೀರಶೈವ ಲಿಂಗಾಯತ ಮಠಾಧೀಶರ ಸಭೆಯೊಂದು ವಿಜಯನಗರದ ಸುಜ್ಞಾನ ಮಂಟಪದಲ್ಲಿ ಈಗ ನಡೆಯುತ್ತಿದೆ.  ಉಜ್ಜಯಿನಿ ಪೀಠದ ಜಗದ್ಗುರು ನೇತೃತ್ವದಲ್ಲಿ ಸುಮಾರು 160 ರಿಂದ 180 ಮಠಾಧೀಶರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಸಭೆ ಆರಂಭವಾಗುತ್ತಿದ್ದಂತೆ ಸಮುದಾಯದ ಉಪಪಂಗಡಗಳನ್ನು ಒಬಿಸಿಗೆ ಸೇರಿಸುವಂತೆ ಕೇಂದ್ರಕ್ಕೆ ಒತ್ತಾಯಿಸಿ ಶ್ರೀಗಳು ಸಭೆಯಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ. ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷ ಬಿಎಸ್ ಪರಮಶಿವಯ್ಯ ಅವರ ಮೂಲಕ ಸರ್ಕಾರಕ್ಕೆ ರಾಷ್ಟ್ರೀಯ ವೀರಶೈವ ಲಿಂಗಾಯತ ಮಠಾಧೀಶರ ಒಕ್ಕೂಟವು ಏಳು ಪುಟದ ಮನವಿ ಸಲ್ಲಿಸಿದೆ.

ವೇದಿಕೆಯ ಮೇಲೆ ಸರ್ಪಭೂಷನ ಮಠದ ಮಲ್ಲಿಕಾರ್ಜುನ ದೇವರು, ಉಜ್ಜಯಿನಿ ಜಗದ್ಗುರು ಡಾ ಮರುಳಸಿದ್ದಶಿವಾಚಾರ್ಯ ಮಹಾ ಸ್ವಾಮಿಗಳು, ಶ್ರೀಶೈಲ ಜಗದ್ಗುರು ಚೆನ್ನಸಿದ್ದರಾಮ ಶಿವಾಚಾರ್ಯ ಸ್ವಾಮಿಗಳು, ಸಿದ್ಧಗಂಗಾಶ್ರೀಗಳು, ದಿಂಗಾಲೇಶ್ವರ ಸ್ವಾಮಿಗಳು, ಸಿಂದಗಿ ಪ್ರಭು ಸಾರಂಗ ಶಿವಾಚಾರ್ಯ ಸ್ವಾಮಿಗಳು, ಮುಚ್ಚಳಾಂಭ ಶ್ರೀಗಳು, ಶಿವಗಂಗೆ ಶ್ರೀಗಳಾದ ಮಲಯ ಶಾಂತಮುನಿ ಶಿವಾಚಾರ್ಯ ಸ್ವಾಮಿಗಳು, ಬಸವಾನಂದ ಸ್ವಾಮಿಗಳು, ಉಪ್ಪೂರು ಗದ್ದಿಗೆಯ ಯತೀಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಮಹಾಂತ ಲಿಂಗ ಶಿವಾಚಾರ್ಯ ಸ್ವಾಮಿಗಳು ವಿಭೂತಿಪುರ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷ ಪರಮಶಿವಯ್ಯ ಹಾಗೂ ಕೆಆರ್​ಐಡಿಎಲ್ ಅಧ್ಯಕ್ಷ ಎಂ ರುದ್ರೇಶ್ ಉಪಸ್ಥಿತಿರಿದ್ದಾರೆ.

include all sub castes of veerashaiva lingayat community in to obc category for reservation

ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಬಿಸಿಗೆ ಸೇರಿಸುವಂತೆ ಕೇಂದ್ರಕ್ಕೆ ಒತ್ತಾಯ

Published On - 11:41 am, Sat, 13 February 21

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ