Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಡ್ಜ್‌ನಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಸಿದ ಆರೋಪ; ಇನ್ಸ್‌ಪೆಕ್ಟರ್ ಸೇರಿ 6 ಜನರ ವಿರುದ್ಧ ಎಫ್​ಐಆರ್

ಏಪ್ರಿಲ್ 15, 22ರಂದು ಪ್ರಸಕ್ತ ಸಾಲಿನ ಪರೀಕ್ಷೆ ನಡೆದಿತ್ತು. ಪರೀಕ್ಷೆ ಮುಗಿದ ಬಳಿಕ ಬಿ‌ಎಸ್ಸಿ ರಸಾಯನಶಾಸ್ತ್ರ ಪರೀಕ್ಷೆಯನ್ನು ಚಂದನ್, ಚೇತನ್, ಇತರೆ ವಿದ್ಯಾರ್ಥಿಗಳು ಮೈಸೂರಿನ ಬಿ.ಎನ್.ರಸ್ತೆಯಲ್ಲಿರುವ ಲಾಡ್ಜ್‌ನಲ್ಲಿ ಬರೆದಿದ್ದರು. ಈ ಪ್ರಕರಣ ಸಂಬಂಧ ಈಗ 6 ಜನರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಲಾಡ್ಜ್‌ನಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಸಿದ ಆರೋಪ; ಇನ್ಸ್‌ಪೆಕ್ಟರ್ ಸೇರಿ 6 ಜನರ ವಿರುದ್ಧ ಎಫ್​ಐಆರ್
ಮೈಸೂರು ವಿವಿ
Follow us
TV9 Web
| Updated By: sandhya thejappa

Updated on: Jun 10, 2021 | 12:27 PM

ಮೈಸೂರು: ಪರೀಕ್ಷಾ ಅಕ್ರಮ, ಮಂಡಿ ಠಾಣೆ ಇನ್ಸ್‌ಪೆಕ್ಟರ್ ನಾರಾಯಣಸ್ವಾಮಿ ಸೇರಿ 6 ಜನರ ವಿರುದ್ಧ ಅವರದ್ದೇ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಸೋಮಸುಂದರ್ ಎಂಬುವರ ದೂರು ಆಧರಿಸಿ ಎಫ್‌ಐಆರ್ ದಾಖಲಿಸಲಾಗಿದೆ.

ಮೈಸೂರು ವಿವಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿತ್ತು. ಲಾಡ್ಜ್‌ನಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಸಲಾಗಿದೆ ಎಂದ ಹೇಳಲಾಗುತ್ತಿತ್ತು. ಏಪ್ರಿಲ್ 15, 22ರಂದು ಪ್ರಸಕ್ತ ಸಾಲಿನ ಪರೀಕ್ಷೆ ನಡೆದಿತ್ತು. ಪರೀಕ್ಷೆ ಮುಗಿದ ಬಳಿಕ ಬಿ‌ಎಸ್ಸಿ ರಸಾಯನಶಾಸ್ತ್ರ ಪರೀಕ್ಷೆಯನ್ನು ಚಂದನ್, ಚೇತನ್, ಇತರೆ ವಿದ್ಯಾರ್ಥಿಗಳು ಮೈಸೂರಿನ ಬಿ.ಎನ್.ರಸ್ತೆಯಲ್ಲಿರುವ ಲಾಡ್ಜ್‌ನಲ್ಲಿ ಬರೆದಿದ್ದರು. ಈ ಪ್ರಕರಣ ಸಂಬಂಧ ಈಗ 6 ಜನರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ನಿಸಾರ್, ಇನ್ಸ್‌ಪೆಕ್ಟರ್ ನಾರಾಯಣಸ್ವಾಮಿ, ರಾಕೇಶ್, ಚಂದನ್, ಚೇತನ್, ಬ್ಲೂ ಡೈಮಂಡ್ ಲಾಡ್ಜ್ ಮಾಲೀಕನ ವಿರುದ್ಧ ಕೇಸ್ ದಾಖಲಾಗಿದೆ. ಪರೀಕ್ಷೆ ನಡೆಯುವಾಗ ಇನ್ಸ್‌ಪೆಕ್ಟರ್ ನಾರಾಯಣಸ್ವಾಮಿ ದಾಳಿ ಮಾಡಿ ಆರೋಪಿಗಳ ಹೇಳಿಕೆ ಪಡೆದು ಆರೋಪಿಗಳನ್ನು ಬಿಟ್ಟ ಆರೋಪ ಹಿನ್ನೆಲೆಯಲ್ಲಿ ಇನ್ಸ್‌ಪೆಕ್ಟರ್ ನಾರಾಯಣಸ್ವಾಮಿ ವಿರುದ್ಧವೂ FIR ದಾಖಲಾಗಿದೆ. ಸೆಕ್ಷನ್ 420, 406, 408, 470, 471, 472, 473, 474 ಸೇರಿ ಹಲವು ಸೆಕ್ಷನ್‌ಗಳಡಿ ಮೈಸೂರಿನ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಸೀರೆಯುಟ್ಟು ಸಖತ್​ ಆಗಿ ಹಾಡಿಗೆ ಹೆಜ್ಜೆ ಹಾಕಿದ ನಟಿ: ಸಾಮಾಜಿಕ ಜಾಲತಾಣಗಳಲ್ಲಿ ಈಕೆಯದ್ದೇ ಹವಾ

ಸಜ್ಜನರ ನೋಯಿಸಿದರೆ ಆ ಕರ್ಮ ಹೇಗೆ ಸುತ್ತಿಕೊಳ್ಳುತ್ತೆ? ಇಲ್ಲಿದೆ ವಿವರ
ಸಜ್ಜನರ ನೋಯಿಸಿದರೆ ಆ ಕರ್ಮ ಹೇಗೆ ಸುತ್ತಿಕೊಳ್ಳುತ್ತೆ? ಇಲ್ಲಿದೆ ವಿವರ
ರವಿ ಮೀನ ರಾಶಿ, ಚಂದ್ರ ಕರ್ಕಾಟಕ ರಾಶಿಯಲ್ಲಿ ಸಂಚರಿಸುವ ಇಂದಿನ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ಕರ್ಕಾಟಕ ರಾಶಿಯಲ್ಲಿ ಸಂಚರಿಸುವ ಇಂದಿನ ರಾಶಿ ಭವಿಷ್ಯ
ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ