Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಮಕ್ಕಳ ನಾಪತ್ತೆ ಪ್ರಕರಣದಲ್ಲಿ ಹೆಚ್ಚಳ, ಹೆಣ್ಣುಮಕ್ಕಳ ಸಂಖ್ಯೆಯೇ ಹೆಚ್ಚು

ಪೊಲೀಸರ ಚುರುಕಿನ ಕಾರ್ಯಾಚರಣೆಯ ನಡುವೆಯೂ ಕರ್ನಾಟಕದಲ್ಲಿ ಮಕ್ಕಳ ನಾಪತ್ತೆ ಅಥವಾ ಕಿಡ್ನಾಪ್ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದೆ. ನಾಪತ್ತೆಯಾಗುವ ಮಕ್ಕಳ ಸಂಖ್ಯೆಯ ಪೈಕಿ ಹೆಣ್ಣುಮಕ್ಕಳ ಸಂಖ್ಯೆಯೇ ಹೆಚ್ಚುತ್ತಿದ್ದು, ಇದರ ಹಿಂದೆ ಮಕ್ಕಳ ಕಳ್ಳಸಾಗಾಣಿಕೆ ಜಾಲ ಇರುವ ಶಂಕೆ ವ್ಯಕ್ತವಾಗುತ್ತಿದೆ.

ಕರ್ನಾಟಕದಲ್ಲಿ ಮಕ್ಕಳ ನಾಪತ್ತೆ ಪ್ರಕರಣದಲ್ಲಿ ಹೆಚ್ಚಳ, ಹೆಣ್ಣುಮಕ್ಕಳ ಸಂಖ್ಯೆಯೇ ಹೆಚ್ಚು
ಕರ್ನಾಟಕದಲ್ಲಿ ಮಕ್ಕಳ ನಾಪತ್ತೆ ಪ್ರಕರಣಗಳಲ್ಲಿ ಹೆಚ್ಚಳ (ಸಾಂದರ್ಭಿಕ ಚಿತ್ರ) Image Credit source: Getty Images
Follow us
Rakesh Nayak Manchi
|

Updated on: Jul 15, 2023 | 6:46 AM

ಬೆಂಗಳೂರು, ಜುಲೈ 15: ಕರ್ನಾಟಕದಲ್ಲಿ ಮಕ್ಕಳ ನಾಪತ್ತೆ (Children Missing Case) ಅಥವಾ ಕಿಡ್ನಾಪ್ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದೆ. ನಾಪತ್ತೆಯಾಗುವ ಮಕ್ಕಳ ಸಂಖ್ಯೆಯ ಪೈಕಿ ಹೆಣ್ಣುಮಕ್ಕಳ ಸಂಖ್ಯೆಯೇ ಹೆಚ್ಚುತ್ತಿದ್ದು, ಇದರ ಹಿಂದೆ ಮಕ್ಕಳ ಕಳ್ಳಸಾಗಾಣಿಕೆ (Child trafficking) ಜಾಲ ಇರುವ ಶಂಕೆ ವ್ಯಕ್ತವಾಗುತ್ತಿದೆ. 2018 ರಿಂದ 2023 ರ ಜೂನ್ 15ರ ವರೆಗೆ 10,687 ಮಕ್ಕಳು ಕಾಣೆಯಾಗಿದ್ದು, ಬಹುಪಾಲು ಮಕ್ಕಳನ್ನು ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಸರ್ಕಾರಿ ಅಂಕಿಅಂಶಗಳ ವಿಶ್ಲೇಷಣೆಯ ಪ್ರಕಾರ, ಕಳೆದುಹೋದ ಮಕ್ಕಳ ಪ್ರಕರಣಗಳನ್ನು ಪತ್ತೆಹಚ್ಚುವಲ್ಲಿ ಪೊಲೀಸರು 90 ಪ್ರತಿಶತದಷ್ಟು ಯಶಸ್ವಿ ಹೊಂದಿದ್ದಾರೆ. ಆದರೂ ಪ್ರತಿದಿನ ಐದು ಮಕ್ಕಳು ನಾಪತ್ತೆಯಾಗುತ್ತಾರೆ ಅಥವಾ ಅಪಹರಣ ಮಾಡಲಾಗುತ್ತಿದೆ.

2018 ಮತ್ತು 2023ರ ಜೂನ್ 15 ರ ನಡುವೆ ಕರ್ನಾಟಕದಲ್ಲಿ 10,687 ಮಕ್ಕಳು ಕಾಣೆಯಾಗಿದ್ದಾರೆ. ಇದರಲ್ಲಿ 9,109 ಮಕ್ಕಳನ್ನು ಪತ್ತೆ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅಂದರೆ ಪ್ರತಿ 10 ಪ್ರಕರಣಗಳಲ್ಲಿ ಸರಿಸುಮಾರು ಒಂಬತ್ತು ಮಕ್ಕಳನ್ನು ಪತ್ತೆ ಮಾಡಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ವಿಧಾನಸಭೆ ಅಧಿವೇಶನದಲ್ಲಿ ಮಂಡಿಸಿದ ಡೇಟಾ ತೋರಿಸುತ್ತದೆ.

ಈ ಅವಧಿಯಲ್ಲಿ 1,578 ಮಕ್ಕಳ ನಾಪತ್ತೆ ಪ್ರಕರಣಗಳನ್ನು ಭೇದಿಸಲು ಪೊಲೀಸರಿಗೆ ಸಾಧ್ಯವಾಗಿಲ್ಲ. ನಾಪತ್ತೆಯಾಗುವ ಮಕ್ಕಳ ಸಂಖ್ಯೆಗಳ ಪೈಕಿ ಹೆಣ್ಣುಮಕ್ಕಳ ಸಂಖ್ಯೆಯೇ ಹೆಚ್ಚುತ್ತಿದ್ದು, ಇದು ಮಕ್ಕಳ ಕಳ್ಳಸಾಗಾಣಿಕೆ ಜಾಲವನ್ನು ಸೂಚಿಸುತ್ತದೆ. ಅಷ್ಟೇ ಅಲ್ಲದೆ, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚಿನ ಪ್ರಕರಣಗಳು ದಾಖಲಾಗುತ್ತಿವೆ. ಒಟ್ಟಾರೆಯಾಗಿ ಕಾಣೆಯಾದ 10 ಮಕ್ಕಳ ಪೈಕಿ ನಾಲ್ಕು ಮಕ್ಕಳು ನಗರದವರಾಗಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿಗೆ ನಾನೇ ಡಾನ್ ಎಂದು ರೀಲ್ಸ್ ಮಾಡುತ್ತಿದ್ದ ಯುವಕನ ಅಪಹರಣ, ಬೆತ್ತಲೆ ಮಾಡಿ ಹಲ್ಲೆ

ಯಾವುದೇ ನಾಪತ್ತೆ ಪ್ರಕರಣವನ್ನು ಪೊಲೀಸರು 60 ದಿನಗಳಲ್ಲಿ ಪತ್ತೆ ಮಾಡದಿದ್ದರೆ ಅಂತಹ ಪ್ರಕರಣದ ಪರಿಣಾಮಕಾರಿ ತನಿಖೆಗಾಗಿ ವಿಶೇಷ ಮಾನವ ಕಳ್ಳಸಾಗಣೆ ವಿರೋಧಿ ಘಟಕಕ್ಕೆ ವರ್ಗಾಯಿಸಲಾಗುತ್ತದೆ” ಎಂದು ಪರಮೇಶ್ವರ ಹೇಳಿದ್ದಾರೆ. ರಾಜ್ಯದಲ್ಲಿ 35 ಮಾನವ ಕಳ್ಳಸಾಗಣೆ ತಡೆ ಘಟಕಗಳಿವೆ ಎಂದು ಸದನಕ್ಕೆ ತಿಳಿಸಿದ್ದಾರೆ.

ಮಕ್ಕಳು ನಾಪತ್ತೆಯಾದ ಪ್ರಕರಣಗಳಲ್ಲಿ ಕೈಗೊಂಡ ಕ್ರಮಗಳನ್ನು ವಿವರಿಸಿದ ಪರಮೇಶ್ವರ, ಪೊಲೀಸರು ಸಂಬಂಧಿಕರು ಮತ್ತು ಸ್ನೇಹಿತರನ್ನು ವಿಚಾರಿಸುವುದರ ಹೊರತಾಗಿ ಮಿಸ್ಸಿಂಗ್ ಗೆಜೆಟ್ ಅನ್ನು ನೀಡುತ್ತಾರೆ. ಅಪರಿಚಿತ ಶವಗಳನ್ನೂ ಪರಿಶೀಲಿಸಲಾಗುತ್ತಿದೆ. ಅನಾಥಾಶ್ರಮಗಳು, ಆಶ್ರಮಗಳು, ಆಧ್ಯಾತ್ಮಿಕ ಸ್ಥಳಗಳು ಮತ್ತು ಬಾಲ ಮಂದಿರಗಳನ್ನು ಪರಿಶೀಲಿಸಲಾಗುತ್ತದೆ, ನೆರೆಯ ಜಿಲ್ಲೆಗಳಲ್ಲಿ ಶೋಧ ನಡೆಸಲಾಗುತ್ತದೆ” ಎಂದು ತಿಳಿಸಿದ್ದಾರೆ.

ಪ್ರತಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಬೀಟ್‌ ಸಿಬ್ಬಂದಿ ವ್ಯವಸ್ಥೆ ಕಲ್ಪಿಸಲಾಗಿದ್ದು, ಮಾನವ ಕಳ್ಳಸಾಗಣೆ ಪ್ರಕರಣಗಳ ಕುರಿತು ಮಾಹಿತಿ ಸಂಗ್ರಹಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪರಮೇಶ್ವರ ತಿಳಿಸಿದರು. ಕೋವಿಡ್-19 ಸಾಂಕ್ರಾಮಿಕ ರೋಗದ ನಂತರ ಕಾಣೆಯಾದ ಮಕ್ಕಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ ಎಂದು ಗೃಹಸಚಿವರು ನೀಡಿದ ಡೇಟಾ ತೋರಿಸುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​