ಮಹಾಶಿವರಾತ್ರಿ ಹಿನ್ನೆಲೆ; ಸಿಲಿಕಾನ್ ಸಿಟಿಯಲ್ಲಿ ಜೋರಾದ ಖರೀದಿ ಭರಾಟೆ

ಬೆಂಗಳೂರು: ನಾಳೆ (ಮಾರ್ಚ್ 11) ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಖರೀದಿ ಭರಾಟೆ ಜೋರಾಗಿ ನಡೆಯುತ್ತಿದೆ. ಹೂವು, ಹಣ್ಣು, ಬಿಲ್ವಪತ್ರೆ, ಪೂಜಾ ಸಾಮಾಗ್ರಿ ಖರೀದಿಗಾಗಿ ಪಟ್ಟಣದ ಮಂದಿ ಮುಗಿಬಿದ್ದಿದ್ದಾರೆ. ಕೆ.ಆರ್ ​ಮಾರ್ಕೆಟ್, ಗಾಂಧಿಬಜಾರ್, ಮಲ್ಲೇಶ್ವರಂನಲ್ಲಿ ಭರ್ಜರಿ ವ್ಯಾಪಾರ ನಡೆಯುತ್ತಿದೆ. ಶಿವನ ಭಕ್ತರು ಶಿವನನ್ನು ಆರಾಧಿಸುವುದಕ್ಕೆ ಸಜ್ಜಾಗಿ ನಿಂತಿದ್ದಾರೆ. ಕೊರೊನಾ ಪರಿಯೇ ಇಲ್ಲದೇ ಶಿವನನ್ನು ಆರಾಧಿಸಲು ಇಂದಿನಿಂದ ಜನ ಮುಂದಾಗಿದ್ದು, ಮಾಸ್ಕ್, ಸಾಮಾಜಿಕ‌ ಅಂತರ ಮರೆತು ಖರೀದಿಗೆ ಮುಂದಾಗಿದ್ದಾರೆ. ಕೆ.ಆರ್ ಮಾರ್ಕೆಟ್​ನಲ್ಲಿ ಇಂದಿನಿಂದ ಪೂಜಾ ಸಾಮಗ್ರಿಗಳು ಮಾರಾಟವಾಗುತ್ತಿದ್ದು, […]

ಮಹಾಶಿವರಾತ್ರಿ ಹಿನ್ನೆಲೆ; ಸಿಲಿಕಾನ್ ಸಿಟಿಯಲ್ಲಿ ಜೋರಾದ ಖರೀದಿ ಭರಾಟೆ
ಶಿವಾರಾತ್ರಿ ಪ್ರಯುಕ್ತ ಕೆ.ಆರ್​ ಮಾರ್ಕೆಟ್​ನಲ್ಲಿ ವ್ಯಾಪಾರ ಪ್ರಾರಂಭ
Follow us
shruti hegde
|

Updated on: Mar 10, 2021 | 11:54 AM

ಬೆಂಗಳೂರು: ನಾಳೆ (ಮಾರ್ಚ್ 11) ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಖರೀದಿ ಭರಾಟೆ ಜೋರಾಗಿ ನಡೆಯುತ್ತಿದೆ. ಹೂವು, ಹಣ್ಣು, ಬಿಲ್ವಪತ್ರೆ, ಪೂಜಾ ಸಾಮಾಗ್ರಿ ಖರೀದಿಗಾಗಿ ಪಟ್ಟಣದ ಮಂದಿ ಮುಗಿಬಿದ್ದಿದ್ದಾರೆ. ಕೆ.ಆರ್ ​ಮಾರ್ಕೆಟ್, ಗಾಂಧಿಬಜಾರ್, ಮಲ್ಲೇಶ್ವರಂನಲ್ಲಿ ಭರ್ಜರಿ ವ್ಯಾಪಾರ ನಡೆಯುತ್ತಿದೆ. ಶಿವನ ಭಕ್ತರು ಶಿವನನ್ನು ಆರಾಧಿಸುವುದಕ್ಕೆ ಸಜ್ಜಾಗಿ ನಿಂತಿದ್ದಾರೆ. ಕೊರೊನಾ ಪರಿಯೇ ಇಲ್ಲದೇ ಶಿವನನ್ನು ಆರಾಧಿಸಲು ಇಂದಿನಿಂದ ಜನ ಮುಂದಾಗಿದ್ದು, ಮಾಸ್ಕ್, ಸಾಮಾಜಿಕ‌ ಅಂತರ ಮರೆತು ಖರೀದಿಗೆ ಮುಂದಾಗಿದ್ದಾರೆ.

ಕೆ.ಆರ್ ಮಾರ್ಕೆಟ್​ನಲ್ಲಿ ಇಂದಿನಿಂದ ಪೂಜಾ ಸಾಮಗ್ರಿಗಳು ಮಾರಾಟವಾಗುತ್ತಿದ್ದು, ಒಂದು ಮಾರು ಸೇವಂತಿಗೆ ಹೂವು 120 ರಿಂದ‌ 150 ರೂಪಾಯಿ, ಒಂದು ಮಾರು ಮಲ್ಲಿಗೆ 120 ರೂಪಾಯಿ, ಒಂದು ಮಾರು ಕನಕಾಂಬರ 80 ರೂಪಾಯಿ ಹಾಗೂ ಬಿಡಿ ಹೂವು ಕೆಜಿಗೆ 150 ರಿಂದ 200 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ.

ಚಾಮರಾಜನಗರದಲ್ಲಿ ಮಾದಪ್ಪನ ದರ್ಶನಕ್ಕೆ ನಿರ್ಬಂಧ ಹನೂರು ತಾಲೂಕಿನ ಮಲೆ ಮಹದೇಶ್ವರ ಮಾದಪ್ಪನ ಬೆಟ್ಟದಲ್ಲಿ, ಇಂದಿನಿಂದ 4 ದಿನಗಳ ಕಾಲ ಮಾದಪ್ಪನ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ. ಶಿವರಾತ್ರಿ ಹಬ್ಬ ಹಿನ್ನೆಲೆ ಹೆಚ್ಚು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಸ್ಥಳೀಯ ನಿವಾಸಿಗಳಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ಮಾಡಿ ಕೊಡಲಾಗಿದೆ. ದೇಶದಾದ್ಯಂತ ಪ್ರಸಿದ್ಧಿ ಹೊಂದಿರುವ ಲಕ್ಷಾಂತರ ಮಂದಿ ಭಕ್ತರು ಭಾಗವಹಿಸುವ ಸಾಧ್ಯತೆ ಇದ್ದು, ಹೊರಗಿನಿಂದ ಬರುವ ಭಕ್ತರಿಗೆ ಮಾದಪ್ಪನ ದರ್ಶನಕ್ಕೆ ಅವಕಾಶ ನಿರಾಕರಿಸಲಾಗಿದೆ.

ಇದನ್ನೂ ಓದಿ: Maha Shivaratri 2021: ಮಹಾಶಿವರಾತ್ರಿ ಆಚರಣೆಯ ಹುಟ್ಟು ಹೇಗಾಯ್ತು?: ಇಲ್ಲಿದೆ ಸಂಪೂರ್ಣ ಮಾಹಿತಿ

ಇದನ್ನೂ ಓದಿ: Maha Shivaratri 2021: ಶಿವ ಶಿವಾ.. ಶಿವರಾತ್ರಿಗೆ ಇನ್ನೂ ಒಂದು ವಾರ ಇರುವಾಗಲೇ ರಣಬಿಸಿಲಿನ ಆರ್ಭಟ ಶುರು!

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್