ರಾಜ್ಯದಲ್ಲಿ ಏರಿಕೆಯಾಗುತ್ತಿರುವ ಕೊವಿಡ್​ ಪ್ರಕರಣಗಳು; 4 ಜಿಲ್ಲೆಗಳ ಮೇಲೆ ನಿಗಾ

ಇನ್ನೇನು ಕೊರೊನಾ ಅಬ್ಬರ ಮುಗಿಯಿತು ಎಂದು ಜನ ನಿರಾಳರಾಗಿದ್ದಾರೆ. ಆದರೆ ಮತ್ತೆ ಇದೀಗ ಸದ್ದಿಲ್ಲದೆ ನಿಧಾನಗತಿಯಲ್ಲಿ ಕೊರೊನಾ ಹಾವಳಿ ಶುರುವಾಗುತ್ತಿದೆ. ಹೌದು ರಾಜ್ಯದಲ್ಲಿ ಮತ್ತೆ ಕೊವಿಡ್​ ಪ್ರಕರಣಗಳು ಏರಿಕೆಯಾಗುತ್ತಿದ್ದು. ಕಳೆದ1 ವಾರದಿಂದ ಬೆಂಗಳೂರು ಸೇರಿ 4 ಜಿಲ್ಲೆಗಳಲ್ಲಿ ನಿಗಾವಹಿಸಲಾಗಿದೆ.

ರಾಜ್ಯದಲ್ಲಿ ಏರಿಕೆಯಾಗುತ್ತಿರುವ ಕೊವಿಡ್​ ಪ್ರಕರಣಗಳು; 4 ಜಿಲ್ಲೆಗಳ ಮೇಲೆ ನಿಗಾ
ಸಾಂದರ್ಭಿಕ ಚಿತ್ರ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Mar 21, 2023 | 1:12 PM

ಬೆಂಗಳೂರು: ಇನ್ನೇನು ಕೊರೊನಾ(Covid-19)ಅಬ್ಬರ ಮುಗಿಯಿತು ಎಂದು ಜನ ನಿರಾಳರಾಗಿದ್ದಾರೆ. ಆದರೆ ಮತ್ತೆ ಇದೀಗ ಸದ್ದಿಲ್ಲದೆ ನಿಧಾನಗತಿಯಲ್ಲಿ ಕೊರೊನಾ ಹಾವಳಿ ಶುರುವಾಗುತ್ತಿದೆ. ಹೌದು ರಾಜ್ಯದಲ್ಲಿ ಮತ್ತೆ ಕೊವಿಡ್​ ಪ್ರಕರಣಗಳು ಏರಿಕೆಯಾಗುತ್ತಿದೆ. ಕಳೆದ 1 ವಾರದಿಂದ ಬೆಂಗಳೂರು ಸೇರಿ 4 ಜಿಲ್ಲೆಗಳಲ್ಲಿ ಕೊರೊನಾ ಏರಿಕೆಯಾಗಿದ್ದು, ಶಿವಮೊಗ್ಗ, ಕಲಬುರಗಿ, ಮೈಸೂರು, ಉತ್ತರ ಕನ್ನಡ ಜಿಲ್ಲೆಯಲ್ಲಿ ನಿಗಾವಹಿಸಲಾಗಿದೆ. ಈ 4 ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮಕೈಗೊಳ್ಳಲು ಸರ್ಕಾರ ಆದೇಶ ಹೊರಡಿಸಿದ್ದು, ಇದೀಗ ಕೇಂದ್ರದ ಸೂಚನೆ ಮೇರೆಗೆ ರಾಜ್ಯ ಆರೋಗ್ಯ ಇಲಾಖೆ ಕೊವಿಡ್​ ಪರೀಕ್ಷೆ, ಪತ್ತೆ, ಚಿಕಿತ್ಸೆ, ಲಸಿಕೆಗೆ ಒತ್ತು ಕೊಡಲು ಸೂಚನೆ ನೀಡಿದೆ. ಮತ್ತು ಸೋಂಕಿನ ಬಗ್ಗೆ ತೀವ್ರ ನಿಗಾ ಇಡಲು ಆರೋಗ್ಯ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ.

ರಾಜ್ಯದ ಚುನಾವೆಣೆಯ ಮೇಲೆ ಕೊರೊನಾ ಕರಿನೇರಳು ?

ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ಕೊರೊನಾ ಕೇಸ್​ಗಳು ಏರಿಕೆಯತ್ತ ಸಾಗಿದೆ. ಕಳೆದ ಒಂದು ವಾರದಿಂದ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮತ್ತೆ ಕೊರೊನಾ ಏರಿಕೆಯಾಗಿದೆ. ರಾಜ್ಯದಲ್ಲಿ ಕಳೆದ 5 ತಿಂಗಳಿಂದ ನಿಯಂತ್ರಣದಲ್ಲಿದ್ದ ಕೊರೋನಾ ಮಾ.8 ರಿಂದ ಕಳೆದ ಎರಡು ವಾರದ ಅವಧಿಯಲ್ಲಿ ಶೇ.2.77 ಪಾಸಿಟಿವಿಟಿದರ ಹೆಚ್ಚಿದೆ.

ಇದನ್ನೂ ಓದಿ:Covid cases in India: ಭಾರತದಲ್ಲಿ 800 ದಾಟಿದ ದೈನಂದಿನ ಕೋವಿಡ್ ಪ್ರಕರಣಗಳ ಸಂಖ್ಯೆ, ಇದು 4 ತಿಂಗಳುಗಳಲ್ಲಿ ಅತಿ ಹೆಚ್ಚು

ಇನ್ನು ದೇಶದಲ್ಲಿ ಈಗಾಗಲೇ ಎಚ್‌3ಎನ್‌2 ಸೋಂಕಿನಿಂದ ಹೆಚ್ಚೆಚ್ಚು ಜನರು ಬಳಲುತ್ತಿರುವ ನಡುವೆಯೇ ಕೋವಿಡ್‌ 19 ಪ್ರಕರಣಗಳು ನಿಧಾನವಾಗಿ ಏರಿಕೆ ಕಾಣುತ್ತಿದೆ. ಕಳೆದ 129 ದಿನಗಳಲ್ಲೇ ಗರಿಷ್ಠ ಪ್ರಮಾಣದ ಹೊಸ ಪ್ರಕರಣಗಳು ಭಾನುವಾರ ವರದಿಯಾಗಿದೆ. ಕೇವಲ 24 ಗಂಟೆಗಳಲ್ಲಿ ದೇಶಾದ್ಯಂತ 1,071 ಹೊಸ ಕೊರೊನಾ ಕೇಸ್‌ಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಜೊತೆಗೆ ದೇಶದಲ್ಲಿ ಸಕ್ರಿಯ ಕೊರೊನಾ ಸೋಂಕಿತರ ಸಂಖ್ಯೆಯು 6000 ದಾಟಿದೆ.

ಸೋಂಕಿನಿಂದ ಪಾರಾಗಲು ಏನು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು.?

1) ನಿಗದಿತವಾಗಿ ಪರೀಕ್ಷೆಗಳನ್ನು ನಡೆಸಬೇಕು.

2) ಹೊಸದಾಗಿ ಹಾಗೂ ಕ್ಲಸ್ಟರ್ ಮಾದರಿಯಲ್ಲಿ ವರದಿಯಾಗುವ ಸೋಂಕು ಪ್ರಕರಣಗಳ ಮೇಲ್ವಿಚಾರಣೆ ಮಾಡಬೇಕು.

3) ಕೊರೋನಾ ಸೋಂಕು ಹರಡುವುದನ್ನು ತಡೆಗಟ್ಟಲು ಎಲ್ಲ ಆರೋಗ್ಯ ಸಂಸ್ಥೆಗಳಲ್ಲಿ ಎಚ್ಚರವಹಿಸಬೇಕು.

4) ಐಎಲ್‌ಐ (ವಿಷಮ ಶೀತ ಜ್ವರ) ಹಾಗೂ ಸಾರಿ (ತೀವ್ರ ಉಸಿರಾಟ ಸಮಸ್ಯೆ) ಪ್ರಕರಣಗಳನ್ನು ಪತ್ತೆಹಚ್ಚಬೇಕು.

5) ಅಂತರಾಷ್ಟ್ರೀಯ ಪ್ರಯಾಣಿಕರು, ಸ್ಥಳೀಯವಾಗಿ ವರದಿಯಾಗುವ ಕ್ಲಸ್ಟರ್ ಪ್ರಕರ‘ಣಗಳಲ್ಲಿ ಸಂಗ್ರಹಿಸಲಾಗುವ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆ ನಡೆಸಬೇಕು.

6)ಅರ್ಹರಿಗೆ ಲಸಿಕೆ ಹೆಚ್ಚಿಸಬೇಕು

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ