IND vs AUS Final: ಸರ್ಕಾರದ ಸುತ್ತೋಲೆಗೆ ಡೋಂಟ್​ಕೇರ್;​ ಕ್ರೀಡಾಂಗಣದಲ್ಲಿ ಬಿಗ್ ಸ್ಕ್ರೀನ್ ವ್ಯವಸ್ಥೆ ಮಾಡದ ಅಧಿಕಾರಿಗಳು

India vs Australia, ICC ODI World Cup Final: ಚಿತ್ರದುರ್ಗ ಕ್ರೀಡಾ ಇಲಾಖೆ ಅಧಿಕಾರಿಗಳ ನಿರ್ಲಕ್ಷಕ್ಕೆ ಕ್ರಿಕೆಟ್​ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಸಮಯವಿಲ್ಲದ ಕಾರಣ ಎಲ್​ಇಡಿ ಸ್ಕ್ರೀನ್​ ಅಳವಡಿಸಲ್ಲ ಎಂದು ಕ್ರೀಡಾ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕರುನಾಡ ವಿಜಯಸೇನೆ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ.

IND vs AUS Final: ಸರ್ಕಾರದ ಸುತ್ತೋಲೆಗೆ ಡೋಂಟ್​ಕೇರ್;​ ಕ್ರೀಡಾಂಗಣದಲ್ಲಿ ಬಿಗ್ ಸ್ಕ್ರೀನ್ ವ್ಯವಸ್ಥೆ ಮಾಡದ ಅಧಿಕಾರಿಗಳು
ಕರುನಾಡ ವಿಜಯಸೇನೆ ಕಾರ್ಯಕರ್ತರ ಪ್ರತಿಭಟನೆ
Follow us
| Edited By: ವಿವೇಕ ಬಿರಾದಾರ

Updated on:Nov 19, 2023 | 1:27 PM

ಕೋಲಾರ ನ.19: ರವಿವಾರ (ನ.19) ಭಾರತ ಮತ್ತು ಆಸ್ಟ್ರೇಲಿಯಾ ಮಧ್ಯೆ ವಿಶ್ವಕಪ್​ ಫೈನಲ್​ (India vs Australia Final) ಪಂದ್ಯ ನಡೆಯಲಿದೆ. ಗುಜರಾತ್​ನ ಅಹಮದಾಬಾದ್​​ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಎರಡು ಬಲಿಷ್ಠ ತಂಡಗಳು ಮುಖಾಮುಖಿಯಾಗಲಿವೆ. ಹೈವೋಲ್ಟೇಜ್​​​​ ಫೈನಲ್ ಪಂದ್ಯ ವೀಕ್ಷಣೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಬಿಗ್ ಸ್ಕ್ರೀನ್ (Big Screen) ವ್ಯವಸ್ಥೆ ಮಾಡುವಂತೆ ಸರ್ಕಾರ ನಿನ್ನೆ (ನ.18) ರಂದು ಸುತ್ತೋಲೆ ಹೊರಡಿಸಿತ್ತು. ಆದರೆ ಸರ್ಕಾರದ ಸುತ್ತೋಲೆಯನ್ನು ಕೋಲಾರ, ಮಂಡ್ಯ ಮತ್ತು ಚಿತ್ರದುರ್ಗ ಕ್ರೀಡಾ ಇಲಾಖೆ ಅಧಿಕಾರಿಗಳು ಪರಿಗಣನೆಗೆ ತೆಗೆದುಕೊಳ್ಳದೆ, ಕುಂಟು ನೆಪ ಹೇಳುತ್ತಿದ್ದಾರೆ.

ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಕಾಮಗಾರಿ ನಡೆಯುತ್ತಿದೆ. ಸೂಕ್ತ ಜಾಗದ ವ್ಯವಸ್ಥೆ ಇಲ್ಲ, ಸ್ಕ್ರೀನ್ ಸಿಗುತ್ತಿಲ್ಲ ಹೀಗಾಗಿ ಬಿಗ್ ಸ್ಕ್ರೀನ್ ವ್ಯವಸ್ಥೆ ಮಾಡುವುದಿಲ್ಲವೆಂದು ಕೋಲಾರ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕಿ ಗೀತಾ ಅವರು ನೆಪ ಹೇಳಿ ಜಾರಿಕೊಳ್ಳುತ್ತಿದ್ದಾರೆ. ಉಪ ನಿರ್ದೇಶಕಿ ಗೀತಾ ಅವರ ನಿರ್ಲಕ್ಷ್ಯಕ್ಕೆ ಕ್ರಿಕೆಟ್‌ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನು ಮಂಡ್ಯದಲ್ಲಿಯೂ ಇದೇ ಪರಿಸ್ಥಿತಿ ಇದೆ. ಅಧಿಕಾರಿಯ ಬೇಜವಬ್ದಾರಿತನಕ್ಕೆ ಕ್ರಿಕೆಟ್ ಅಭಿಮಾನಿಗಳಿಗೆ ಭಾರಿ ನಿರಾಸೆಯಾಗಿದೆ. ಕ್ರೀಡಾಂಗಣ ಕಾಮಗಾರಿಯಲ್ಲಿದೆ, ಒಂದೆ ದಿನಕ್ಕೆ ವ್ಯವಸ್ಥೆ ಮಾಡಲು ಆಗಲ್ಲ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕ ಓಂ ಪ್ರಕಾಶ್ ಹೇಳಿದ್ದಾರೆ.

ಇದನ್ನೂ ಓದಿ: ಮಂಗಳೂರು ಕಲಾವಿದನ ಕೈಯಲ್ಲಿ ಮೂಡಿದ ಚಿನ್ನದ ವಿಶ್ವಕಪ್ 

ಚಿತ್ರದುರ್ಗದಲ್ಲೂ ಕೂಡ ಕ್ರೀಡಾ ಇಲಾಖೆ ಅಧಿಕಾರಿಗಳ ನಿರ್ಲಕ್ಷಕ್ಕೆ ಕ್ರಿಕೆಟ್​​​ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಸಮಯವಿಲ್ಲದ ಕಾರಣ ಎಲ್​ಇಡಿ ಸ್ಕ್ರೀನ್​ ಅಳವಡಿಸಲ್ಲ ಎಂದು ಕ್ರೀಡಾ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕರುನಾಡ ವಿಜಯಸೇನೆ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಸುಚಿತ್ರಾ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಗದಗನಲ್ಲಿ ಎಲ್ಇಡಿ ಪರದೆ ವ್ಯವಸ್ಥೆಗೆಗಾಗಿ ಅಧಿಕಾರಿಗಳು ಪರದಾಡುತ್ತಿದ್ದಾರೆ. ಎಲ್.ಇ.ಡಿ ಪರದೆ ಸಿಗದಿದ್ದ ಹಿನ್ನೆಲೆಯಲ್ಲಿ ಸ್ಮಾರ್ಟ್ ಟಿವಿ ಮೂಲಕ ಕ್ರಿಕೆಟ್ ನೇರಪ್ರಸಾರದ ವ್ಯವಸ್ಥೆ ಮಾಡಿದ್ದಾರೆ. ಕ್ರೀಡಾಂಗಣದಲ್ಲಿ ಸಾವಿರಕ್ಕೂ ಹೆಚ್ಚು ಜನರು ಕೂಡುವ ಹಾಗೆ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಚೇರ್​ಗಳ ವ್ಯವಸ್ಥೆ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:26 pm, Sun, 19 November 23

ತಾಜಾ ಸುದ್ದಿ
ಬರೋಬ್ಬರಿ 3.30 ಕೋಟಿಯ ಮರ್ಸಿಡಿಸ್ ಕಾರು ಖರೀದಿಸಿದ ಧೋನಿ
ಬರೋಬ್ಬರಿ 3.30 ಕೋಟಿಯ ಮರ್ಸಿಡಿಸ್ ಕಾರು ಖರೀದಿಸಿದ ಧೋನಿ
ಮಂಡ್ಯ: ಮಹಿಳೆಯರ ಮೈಮುಟ್ಟಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವಿಕೃತನ ಸೆರೆ
ಮಂಡ್ಯ: ಮಹಿಳೆಯರ ಮೈಮುಟ್ಟಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವಿಕೃತನ ಸೆರೆ
Telangana Assembly Polls: ಹೈದರಾಬಾದ್​ನಲ್ಲಿ ಮತ ಚಲಾಯಿಸಿದ ಚಿರಂಜೀವಿ
Telangana Assembly Polls: ಹೈದರಾಬಾದ್​ನಲ್ಲಿ ಮತ ಚಲಾಯಿಸಿದ ಚಿರಂಜೀವಿ
Telangana Assembly Polls 2023: ಮತಗಟ್ಟೆಗೆ ಆಗಮಿಸಿದ ಜ್ಯೂ. ಎನ್ ಟಿ ಆರ್
Telangana Assembly Polls 2023: ಮತಗಟ್ಟೆಗೆ ಆಗಮಿಸಿದ ಜ್ಯೂ. ಎನ್ ಟಿ ಆರ್
ಸಂಸಾರದಲ್ಲಿನ ಬಿರುಕಿಗೆ ಕಾರಣ ತಿಳಿಸಿದ ವರ್ತೂರು ಸಂತೋಷ್
ಸಂಸಾರದಲ್ಲಿನ ಬಿರುಕಿಗೆ ಕಾರಣ ತಿಳಿಸಿದ ವರ್ತೂರು ಸಂತೋಷ್
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜಗಳ ನೆನಪಿಸಿಕೊಂಡ ಗೆಳತಿ ಸಂಜನಾ ಗಲ್ರಾನಿ
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜಗಳ ನೆನಪಿಸಿಕೊಂಡ ಗೆಳತಿ ಸಂಜನಾ ಗಲ್ರಾನಿ
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜೋಕ್ ನೆನಪಿಸಿಕೊಂಡ ಯೋಗರಾಜ್ ಭಟ್
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜೋಕ್ ನೆನಪಿಸಿಕೊಂಡ ಯೋಗರಾಜ್ ಭಟ್
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ