AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Independence Day: ಸ್ವಾತಂತ್ರ್ಯದ ಅಮೃತ ಮಹೋತ್ಸವ; ಕರ್ನಾಟಕದ ವಿವಿಧೆಡೆ ಸಂಭ್ರಮಾಚರಣೆ

Independence Day Celebration in Karnataka: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 75 ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ್ದಾರೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಲುವಾಗಿ ವಿವಿಧ ಯೋಜನೆಗಳನ್ನು ಕೂಡ ಅವರು ಘೋಷಿಸಿದ್ದಾರೆ.

Independence Day: ಸ್ವಾತಂತ್ರ್ಯದ ಅಮೃತ ಮಹೋತ್ಸವ; ಕರ್ನಾಟಕದ ವಿವಿಧೆಡೆ ಸಂಭ್ರಮಾಚರಣೆ
ಧ್ವಜಾರೋಹಣ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Aug 15, 2021 | 5:52 PM

Share

ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ 75ನೇ ಸ್ವಾತಂತ್ರ್ಯ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 75 ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ್ದಾರೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಲುವಾಗಿ ವಿವಿಧ ಯೋಜನೆಗಳನ್ನು ಕೂಡ ಅವರು ಘೋಷಿಸಿದ್ದಾರೆ. ವಿಧಾನಸೌಧದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಧ್ವಜಾರೋಹಣ ನೆರವೇರಿಸಿದ್ದಾರೆ. ಕಾವೇರಿ ನಿವಾಸದಲ್ಲಿ ಯಡಿಯೂರಪ್ಪ ಧ್ವಜಾರೋಹಣ ಮಾಡಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಕಾಂಗ್ರೆಸ್ ಭವನದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಧ್ವಜಾರೋಹಣ ಹಾಗೂ ಜೆಪಿ ಭವನದಲ್ಲಿ ನಾರಾಯಣ ರಾವ್​ ಧ್ವಜಾರೋಹಣ ಮಾಡಿದ್ದಾರೆ.

ರಾಜ್ಯಾದ್ಯಂತ 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆ ಕಂಡುಬಂದಿತ್ತು. ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಸಚಿವರಿಂದ ಧ್ವಜಾರೋಹಣ ನೆರವೇರಿಸಲಾಯಿತು. ವಿಜಯನಗರದಲ್ಲಿ ಸಚಿವ ಆನಂದ್‌ ಸಿಂಗ್‌, ಚಿಕ್ಕಬಳ್ಳಾಪುರದಲ್ಲಿ ಸಚಿವ ಡಾ. ಸುಧಾಕರ್‌, ಕೋಲಾರದಲ್ಲಿ ಸಚಿವ ಮುನಿರತ್ನ, ರಾಮನಗರದಲ್ಲಿ ಸಚಿವ ಅಶ್ವತ್ಥ್‌ ನಾರಾಯಣ, ಹಾವೇರಿಯಲ್ಲಿ ಸಚಿವ ಬಿ.ಸಿ. ಪಾಟೀಲ್‌, ಚಿತ್ರದುರ್ಗದಲ್ಲಿ ಸಚಿವ ಬಿ. ಶ್ರೀರಾಮುಲು, ಶಿವಮೊಗ್ಗದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ, ವಿಜಯಪುರದಲ್ಲಿ ಸಚಿವೆ ಶಶಿಕಲಾ ಜೊಲ್ಲೆ, ರಾಯಚೂರಿನಲ್ಲಿ ಸಚಿವ ವಿ. ಸೋಮಣ್ಣ, ಬೆಳಗಾವಿಯಲ್ಲಿ ಸಚಿವ ಗೋವಿಂದ ಕಾರಜೋಳ, ಯಾದಗಿರಿಯಲ್ಲಿ ಸಚಿವ ಬಿ.ಸಿ. ನಾಗೇಶ್‌, ಗದಗದಲ್ಲಿ ಸಚಿವ ಸಿ.ಸಿ. ಪಾಟೀಲ್‌, ಚಾಮರಾಜನಗರದಲ್ಲಿ ಡಿಸಿ ಎಂ.ಆರ್. ರವಿ, ಕೊಪ್ಪಳದಲ್ಲಿ ಸಚಿವ ಹಾಲಪ್ಪ ಆಚಾರ್‌, ಬೀದರ್​ನಲ್ಲಿ ಸಚಿವ ಪ್ರಭು ಚೌಹಾಣ್‌ ಧ್ವಜಾರೋಹಣ ನೆರವೇರಿಸಿದರು.

ಕಾರವಾರದಲ್ಲಿ ಸಚಿವ ಶಿವರಾಂ ಹೆಬ್ಬಾರ್‌, ಮೈಸೂರಿನಲ್ಲಿ ಸಚಿವ ಎಸ್​.ಟಿ. ಸೋಮಶೇಖರ್‌, ಮಂಡ್ಯದಲ್ಲಿ ಸಚಿವ ಕೆ.ಸಿ. ನಾರಾಯಣಗೌಡ, ದೇವನಹಳ್ಳಿಯಲ್ಲಿ ಸಚಿವ ಎಂಟಿಬಿ ನಾಗರಾಜ್‌, ತುಮಕೂರಿನಲ್ಲಿ ಸಚಿವ ಜೆ.ಸಿ. ಮಾಧುಸ್ವಾಮಿ, ಹಾಸನದಲ್ಲಿ ಸಚಿವ ಕೆ. ಗೋಪಾಲಯ್ಯ, ಬಳ್ಳಾರಿಯಲ್ಲಿ ಸಚಿವ ಆನಂದ್ ಸಿಂಗ್‌, ಬಾಗಲಕೋಟೆಯಲ್ಲಿ ಸಚಿವ ಉಮೇಶ್ ಕತ್ತಿ, ದಾವಣಗೆರೆಯಲ್ಲಿ ಸಚಿವ ಭೈರತಿ ಬಸವರಾಜ್‌, ಮಡಿಕೇರಿಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಚಿಕ್ಕಮಗಳೂರಿನಲ್ಲಿ ಸಚಿವ ಆರಗ ಜ್ಞಾನೇಂದ್ರ, ಕಲಬುರಗಿಯಲ್ಲಿ ಸಚಿವ ಮುರುಗೇಶ್ ನಿರಾಣಿ, ಧಾರವಾಡದಲ್ಲಿ ಸಚಿವ ಮುನೇನಕೊಪ್ಪ, ಮಂಗಳೂರಿನಲ್ಲಿ ಸಚಿವ ಎಸ್. ಅಂಗಾರ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗಿಯಾಗಿ ಧ್ವಜಾರೋಹಣ ಮಾಡಿದರು.

ಕೆಲವೆಡೆ ಅರ್ಥಪೂರ್ಣ ಆಚರಣೆ; ಇನ್ನು ಕೆಲವೆಡೆ ಅನರ್ಥ ದಾವಣಗೆರೆ ಜಿಲ್ಲಾಡಳಿತ ಅರ್ಥಪೂರ್ಣವಾಗಿ ಸ್ವಾತಂತ್ರ್ಯೋವ ಆಚರಿಸಿತು. ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೆ ತೆರಳಿ ಸನ್ಮಾನಿಸಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಗೌರವಿಸಿದರು. ಅವರಿಗೆ ಜಗಳೂರು ಶಾಸಕ ಎಸ್.ವಿ. ರಾಮಚಂದ್ರ ಸಾಥ್ ನೀಡಿದರು. ಜಗಳೂರು ಪಟ್ಟಣದ ಸ್ವಾತಂತ್ರ್ಯ ಯೋಧರಾದ ರುದ್ರಮುನಿಯಪ್ಪ, ಎಚ್. ವೀರಯ್ಯ ಹಾಗೂ ಚಂದ್ರರೆಡ್ಡಿ ಅವರ ಮನೆಗೆ ಹೋಗಿ ಸನ್ಮಾನ ಮಾಡಿ ಸಂಭ್ರಮಿಸಿದರು.

ದಕ್ಷಿಣ ಕನ್ನಡದ ಪುತ್ತೂರು ಕಬಕದಲ್ಲಿ ಪಂಚಾಯತಿಯ ಸ್ವಾತಂತ್ರ್ಯ ರಥಕ್ಕೆ ಅಡ್ಡಿಪಡಿಸಿದ ಘಟನೆ ನಡೆಯಿತು. ಸಾವರ್ಕರ್ ಫೋಟೊ ಬದಲು ಟಿಪ್ಪು ಫೋಟೊ ಹಾಕಲು ಎಸ್‌ಡಿಪಿಐ ಕಾರ್ಯಕರ್ತರು ಒತ್ತಡ ಹಾಕಿದ ಅಹಿತಕರ ಘಟನೆ ನಡೆಯಿತು. ದಾವಣಗೆರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ದಿನವೇ ಕಾರ್ಮಿಕರ ಪ್ರತಿಭಟನೆ ನಡೆಸಿದರು‌. ಕನಿಷ್ಠ ವೇತನ ಸಹಿತ, ಸರಿಯಾಗಿ ರಜೆ ನೀಡುತ್ತಿಲ್ಲ ಎಂದು ಜಿಂದಾಲ್ ಕಂಪೆನಿಗೆ ಸೇರಿದ ಸೋಲಾರ್ ಪ್ಲಾಂಟ್‌ನಲ್ಲಿ ಕಾರ್ಮಿಕರು ಪ್ರತಿಭಟಿಸಿದರು. ಉತ್ತರ ಕನ್ನಡದ ಕಾರವಾರದಲ್ಲಿ ಕದಂಬಾ ನೆಲೆಯಲ್ಲಿ ಭಾರತೀಯ ನೌಕಾ ಸೇನೆಯಿಂದ ಹರಿದ ಧ್ವಜ ಹಾರಿಸಿದ ಘಟನೆಯೂ ನಡೆಯಿತು.

ಇದನ್ನೂ ಓದಿ: ಕೆಂಪುಕೋಟೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಇಲ್ಲಿವೆ ಸುಂದರ ಕ್ಷಣದ ಫೋಟೋಗಳು

75ನೇ ಸ್ವಾತಂತ್ರ್ಯ ದಿನಾಚರಣೆಗೆ ಹೊಸ ಹಾಡು; ದೇಶಭಕ್ತಿಯ ಗಾನಸುಧೆಯನ್ನು ಸವಿಯಿರಿ

Published On - 5:41 pm, Sun, 15 August 21

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್