Independence Day 2022: ರಾಷ್ಟ್ರೀಯ ಗೀತೆ ಹಾಡುವ ಮೂಲಕ 75ನೇ ಸ್ವಾತಂತ್ರ್ಯೋತ್ಸವಕ್ಕೆ ಶುಭಕೋರಿದ ಐಪಿಎಸ್ ಅಧಿಕಾರಿ ಡಿ. ರೂಪಾ

ಐಪಿಎಸ್ ಅಧಿಕಾರಿ ಡಿ. ರೂಪಾ (D Roopa IPS) ಅವರು ರಾಷ್ಟ್ರೀಯ ಗೀತೆಯನ್ನು ಅದ್ಭುತವಾಗಿ ಹಾಡಿದ್ದಾರೆ. ಮಧುರ ಕಂಠದಲ್ಲಿ ಹಾಡಿರುವ ಈ ವಿಡಿಯೋವನ್ನು ತಮ್ಮ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ.

Independence Day 2022: ರಾಷ್ಟ್ರೀಯ  ಗೀತೆ ಹಾಡುವ ಮೂಲಕ 75ನೇ ಸ್ವಾತಂತ್ರ್ಯೋತ್ಸವಕ್ಕೆ ಶುಭಕೋರಿದ ಐಪಿಎಸ್ ಅಧಿಕಾರಿ ಡಿ. ರೂಪಾ
IPS Officer D Roopa
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Aug 15, 2022 | 3:33 PM

ಸ್ವಾತಂತ್ರ್ಯ ದಿನಕ್ಕೆ ಶುಭಾಶಯಗಳನ್ನು ತಿಳಿಸಲು ಐಪಿಎಸ್ ಅಧಿಕಾರಿ ಡಿ. ರೂಪಾ (D Roopa IPS) ಅವರು ರಾಷ್ಟ್ರೀಯ ಗೀತೆಯನ್ನು ಅದ್ಭುತವಾಗಿ ಹಾಡಿದ್ದಾರೆ. ಮಧುರ ಕಂಠದಲ್ಲಿ ಹಾಡಿರುವ ಈ ವಿಡಿಯೋವನ್ನು ತಮ್ಮ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿದ್ದು, ಶೇರ್​ ಮಾಡಿದ ಕೆಲವೇ ಸಮಯದಲ್ಲಿ ಸಾವಿರಾರು ಜನ ವೀಕ್ಷಣೆ ಮಾಡಿದ್ದಾರೆ. ಇವರು ಹಾಡಿರುವ ಹಾಡಿನ  ವಿಡಿಯೋವನ್ನು ಪಿಕೆ ಶಾನ್ ಅವರು ಎಡಿಟ್ ಮಾಡಿದ್ದು ಇದಕ್ಕೆ ಹಿನ್ನಲೆ ಸಂಗೀತವನ್ನು ಕೂಡ ಜೋಡಿಸಿದ್ದಾರೆ. ಈ ಮೂಲಕ ಡಿ. ರೂಪಾ ಅವರು 75ನೇ ಸ್ವಾತಂತ್ರ್ಯ ದಿನದ ಹಾಡಿಗೆ ಮೆರಗು ನೀಡಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು, ಬಂಕಿಮ್ ಚಂದ್ರ ಚಟರ್ಜಿಯವರು ಸಂಯೋಜಿಸಿದ ರಾಷ್ಟ್ರೀಯ ಗೀತೆಯನ್ನು ಹಾಡಲು ಯಾವಾಗಲೂ ಉಲ್ಲಾಸದಾಯಕವಾಗಿರುತ್ತದೆ. ಮಾತೃಭೂಮಿಗೆ ನಮನಗಳು, ಇದರ ಜೊತೆಗೆ ಈ ವಿಡಿಯೋವನ್ನು ಎಡಿಟ್ ಮಾಡಿದ ಪಿಕೆ ಶಾನ್ ಅವರಿಗೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ
Image
Independence Day 2022: 75 ಅಡಿ ಉದ್ದದ ಪರಿಸರ ಸ್ನೇಹಿ ತ್ರಿವರ್ಣ ಧ್ವಜ ರಚಿಸಿದ ವಿಕಲಚೇತನ ಯುವಕರು
Image
Independence Day 2022: ಭಾರತ ಪ್ರಜಾಪ್ರಭುತ್ವದ ತಾಯಿ, ವೈವಿಧ್ಯತೆಯೇ ಅದರ ಶಕ್ತಿ; ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ
Image
Independence Day 2022: ಆಗಸ್ಟ್ 15ರಂದೇ ಭಾರತ ಸ್ವತಂತ್ರ್ಯದಿನವನ್ನು ಆಚರಿಸುವುದೇಕೆ? ಈ ದಿನದ ಇತಿಹಾಸ, ಮಹತ್ವವೇನು?

ಸ್ವಾತಂತ್ರ್ಯ ದಿನದಂದು ಎಲ್ಲ ಕಡೆಯಲ್ಲೂ ಅದ್ಧೂರಿಯಾಗಿ ಸ್ವಾತಂತ್ರ್ಯ ದಿನದ ಆಚರಣೆ ಮಾಡುತ್ತಿದ್ದಾರೆ. ರಾಷ್ಟ್ರದೆಲ್ಲೆಡೆ 75ನೇ ಸ್ವಾತಂತ್ರ್ಯವನ್ನು ಸಂಭ್ರಮದಿಂದ ಆಚರಣೆ ಮಾಡಿದ್ದಾರೆ. ಸಾಮಾನ್ಯ ವ್ಯಕ್ತಿಯಿಂದ ಗಣ್ಯ ವ್ಯಕ್ತಿಗಳ ವರೆಗೂ ಅದ್ಧೂರಿಯಾಗಿ ಸ್ವಾತಂತ್ರ್ಯವನ್ನು ಆಚರಣೆ ಮಾಡುತ್ತಿದ್ದಾರೆ. ದೇಶದ ಪ್ರಧಾನಿಗಳು ಇಂದು ಕೆಂಪು ಕೋಟೆಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿ ದೇಶವನ್ನದ್ದೇಶಿ ಮಾತನಾಡಿದರೂ, ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ತ್ರಿವರ್ಣ ಧ್ವಜವನ್ನು ಹಾರಿಸಿ ಅನೇಕ ಯೋಜನೆಗಳಿ ಚಾಲನೆ ನೀಡಿದ್ದಾರೆ.

Published On - 3:02 pm, Mon, 15 August 22

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು