ಕರ್ನಾಟಕದ ಈ ಮೂರು ಜಿಲ್ಲೆಗಳಲ್ಲಿ ನಾಳೆ ಮಾಕ್​ ಡ್ರಿಲ್​​ಗೆ ನಿರ್ಧಾರ

ಕರ್ನಾಟಕದ ಮೂರು ಜಿಲ್ಲೆಗಳಾದ ಬೆಂಗಳೂರು, ಕಾರವಾರ ಮತ್ತು ರಾಯಚೂರಿನಲ್ಲಿ ನಾಳೆ ಸಂಜೆ 4 ಗಂಟೆಗೆ ಮಾಕ್ ಡ್ರಿಲ್ ನಡೆಯಲಿದೆ ಎಂದು ಅಗ್ನಿಶಾಮಕ ದಳದ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ತಿಳಿಸಿದ್ದಾರೆ. NCC, NSS, ಸಿವಿಲ್ ಡಿಫೆನ್ಸ್ ಮತ್ತು ವೈದ್ಯರು ಈ ಡ್ರಿಲ್‌ನಲ್ಲಿ ಭಾಗವಹಿಸಲಿದ್ದಾರೆ ಎಂದಿದ್ದಾರೆ.

ಕರ್ನಾಟಕದ ಈ ಮೂರು ಜಿಲ್ಲೆಗಳಲ್ಲಿ ನಾಳೆ ಮಾಕ್​ ಡ್ರಿಲ್​​ಗೆ ನಿರ್ಧಾರ
ಮಾಕ್​ ಡ್ರಿಲ್​ನಲ್ಲಿ ಭಾಗಿಯಾಗಿರುವ ಜನರು
Updated By: ಗಂಗಾಧರ​ ಬ. ಸಾಬೋಜಿ

Updated on: May 06, 2025 | 2:10 PM

ಬೆಂಗಳೂರು, ಮೇ 05: ಪಹಲ್ಗಾಮ್​ನಲ್ಲಿ (Pahalgam) ನಡೆದ ಉಗ್ರ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಭಾರತ ಹವಣಿಸುತ್ತಿದೆ. ಇದಕ್ಕಾಗಿಯೇ ಭರ್ಜರಿ ತಾಲೀಮು ನಡೆಸಿದೆ. ಕೇಂದ್ರ ಸರ್ಕಾರ ದೇಶಾದ್ಯಂತ ಮಾಕ್​ ಡ್ರಿಲ್ (Mock drill) ಮಾಡಲು ಆದೇಶಿಸಿದೆ. ಈಗಾಗಲೇ ಬೇರೆ ರಾಜ್ಯಗಳಲ್ಲಿ ಮಾಕ್​ ಡ್ರಿಲ್​​ ಮಾಡಲಾಗುತ್ತಿದೆ. ಇತ್ತ ಕರ್ನಾಟಕದಲ್ಲಿ ಕೂಡ ಮಾಕ್​ ಡ್ರಿಲ್​​ ಮಾಡಲು ನಿರ್ಧರಿಸಲಾಗಿದೆ. ಬೆಂಗಳೂರು, ಕಾರವಾರ ಮತ್ತು ರಾಯಚೂರಿನಲ್ಲಿ ನಾಳೆ ಮಾಕ್​ ಡ್ರಿಲ್​ಗೆ ನಿರ್ಧರಿಸಲಾಗಿದೆ ಎಂದು ಅಗ್ನಿಶಾಮಕ ದಳದ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಹೇಳಿದ್ದಾರೆ. ಈ ಬಗ್ಗೆ ಕೇಂದ್ರ ಸರ್ಕಾರದಿಂದ ಸುತ್ತೋಲೆ ಬರುತ್ತದೆ ಎಂದಿದ್ದಾರೆ.

ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಹೇಳಿದ್ದಿಷ್ಟು

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅಗ್ನಿಶಾಮಕ ದಳದ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್, ಬೆಂಗಳೂರು, ಕಾರವಾರ, ರಾಯಚೂರಿನಲ್ಲಿ ನಾಳೆ ಸಂಜೆ 4 ಗಂಟೆ ಮಾಕ್​ಡ್ರಿಲ್​ಗೆ ನಿರ್ಧಾರ ಮಾಡಿದ್ದೇವೆ. ಈ ಕುರಿತಾಗಿ ಈಗಾಗಲೇ ಅಗ್ನಿಶಾಮಕದಳ, ಸಿವಿಲ್ ಡಿಫೆನ್ಸ್ ಅಧಿಕಾರಿಗಳ ಜತೆ ಸಭೆ ಮಾಡಲಾಗಿದೆ‌ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಅಜಿತ್ ದೋವಲ್ ನಡುವೆ ಮತ್ತೊಂದು ಸಭೆ, ಪಾಕ್ ಬೆನ್ನು ಹುರಿಯಲ್ಲಿ ನಡುಕ

ಮಾಕ್​ಡ್ರಿಲ್​ನಲ್ಲಿ ಎನ್​​ಸಿಸಿ, ಎನ್​​ಎಸ್​​ಎಸ್​, ಸಿವಿಲ್‌ ಡಿಫೆನ್ಸ್ ಮತ್ತು ವೈದ್ಯರು ಭಾಗಿಯಾಗುತ್ತಾರೆ. ಪೊಲೀಸ್ ಠಾಣೆ, ಅಗ್ನಿಶಾಮಕ ದಳ ಠಾಣೆ ಸೇರಿ 35 ಕಡೆ ಸೈರನ್​ ಇದೆ, ಅದರಲ್ಲಿ 32 ಕಾರ್ಯ ನಿರ್ವಹಿಸುತ್ತಿವೆ. ಜನರು ಏನು ಮಾಡಬೇಕು, ಮಾಡಬಾರದು ಎಂಬ ಬಗ್ಗೆ ಕೇಂದ್ರ ಸರ್ಕಾರದಿಂದ ಸುತ್ತೋಲೆ ಬರುತ್ತದೆ ಎಂದು ಹೇಳಿದ್ದಾರೆ.

ನಾಳೆ ಬೆಂಗಳೂರು ನಗರದ 32 ಕಡೆ ಮಾಕ್​ಡ್ರಿಲ್

ಬೆಂಗಳೂರಿನ 35 ಕಡೆ ಸೈರನ್​ ಇದ್ದು, 32 ಕಡೆ ಕಾರ್ಯ ನಿರ್ವಹಿಸುತ್ತಿವೆ. ಹೀಗಾಗಿ ಸೈರನ್​ ಕಾರ್ಯ ನಿರ್ವಹಿಸುವ ಕಡೆ ಮಾಕ್​ಡ್ರಿಲ್​ ನಡೆಯಲಿದೆ. ಇಂಡಿಯನ್ ಇನ್​ಸ್ಟಿಟ್ಯೂಟ್, ಸಿಕ್ಯುಎಎಲ್​, ಇಎಸ್​ಐ ಆಸ್ಪತ್ರೆ, ಎನ್​ಎಎಲ್​, ಬೆಂಗಳೂರು ಡೈರಿ, ಕೆನರಾ ಬ್ಯಾಂಕ್, SRS ಪೀಣ್ಯ, ವಿವಿ ಟವರ್ ಅಗ್ನಿಶಾಮಕ ಠಾಣೆ, ಜ್ಞಾನಭಾರತಿ ಅಗ್ನಿಶಾಮಕ ಠಾಣೆ, ಥಣಿಸಂದ್ರ ಅಗ್ನಿಶಾಮಕ ಠಾಣೆ, ಬಾಣಸವಾಡಿ ಅಗ್ನಿಶಾಮಕ ಠಾಣೆ, ಯಶವಂತಪುರ ಅಗ್ನಿಶಾಮಕ ಠಾಣೆ, ಬನಶಂಕರಿ ಅಗ್ನಿಶಾಮಕ ಠಾಣೆ, ರಾಜಾಜಿನಗರ ಅಗ್ನಿಶಾಮಕ ಠಾಣೆ, ಚಾಮರಾಜಪೇಟೆ ಅಗ್ನಿಶಾಮಕ ಠಾಣೆ, ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆ, ಹಲಸೂರು ಗೇಟ್ ಠಾಣೆ, ಹಲಸೂರು ಪೊಲೀಸ್ ಠಾಣೆ, ಉಪ್ಪಾರಪೇಟೆ ಪೊಲೀಸ್ ಠಾಣೆ, ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆ, ಕಾಮಾಕ್ಷಿಪಾಳ್ಯ ಠಾಣೆ, ಕೆ.ಆರ್.ಮಾರ್ಕೆಟ್ ಪೊಲೀಸ್ ಠಾಣೆ, ವೈಯಾಲಿಕಾವಲ್​ ಠಾಣೆ, ಹಲಸೂರು ಗೃಹರಕ್ಷಕದಳ ಕೇಂದ್ರ ಕಚೇರಿ, ಪೀಣ್ಯ ಅಗ್ನಿಶಾಮಕ ಠಾಣೆ, ಬೆಂಗಳೂರು ಗ್ರಾಮಾಂತರ ಗೃಹರಕ್ಷಕದಳ ಕಚೇರಿ, ಬಾಗಲೂರು ಅಗ್ನಿಶಾಮಕ ಠಾಣೆ, ಅಂಜನಾಪುರ ಅಗ್ನಿಶಾಮಕ ಠಾಣೆ, ITPL ಅಗ್ನಿಶಾಮಕ ಠಾಣೆ, ಸರ್ಜಾಪುರ ಅಗ್ನಿಶಾಮಕ ಠಾಣೆ, ಎಲೆಕ್ಟ್ರಾನಿಕ್ ಅಗ್ನಿಶಾಮಕ ಠಾಣೆ ಮತ್ತು ಡೈರಿ ಸರ್ಕಲ್ ಅಗ್ನಿಶಾಮಕ ಠಾಣೆಯಲ್ಲಿ ನಡೆಯಲಿದೆ.

ನಾಳಿನ ಮಾಕ್ ಡ್ರಿಲ್​​ನಲ್ಲಿ ಯುವಜನತೆ ಪಾಲ್ಗೊಳ್ಳುವಂತೆ ಎಬಿವಿಪಿ ಕರೆ

ಇನ್ನು ನಾಳಿನ ಮಾಕ್ ಡ್ರಿಲ್‌ನಲ್ಲಿ ಯುವಜನತೆ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್​ ಕರೆ ನೀಡಿದೆ. ಪಹಲ್ಗಾಮ್‌ ದಾಳಿ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧದ ಕಾರ್ಮೋಡ ಆವರಿಸಿದೆ. ಹೀಗಾಗಿ ನಾಳೆ ಕರ್ನಾಟಕದಲ್ಲಿ ನಡೆಯುವ ಮಾಕ್ ಡ್ರಿಲ್‌ನಲ್ಲಿ ಯುವಕರು ಹಾಗೂ ವಿದ್ಯಾರ್ಥಿಗಳು ಭಾಗಿಯಾಗುವಂತೆ ಎಬಿವಿಪಿ ಕರೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:41 pm, Tue, 6 May 25