ಮುಂದಿನ ವರ್ಷದಿಂದ ಲಿಕ್ವಿಡ್ ನ್ಯಾನೋ ಡಿಎಪಿ ಉತ್ಪಾದನೆ: ಕೇಂದ್ರ ಸಚಿವ ಭಗವಂತ ಖೂಬಾ

ಗೊಬ್ಬರದ ವಿಚಾರದಲ್ಲಿ ರಾಜಕಾರಣ ಮಾಡುವ ಅವಶ್ಯಕತೆ ನಮಗಿಲ್ಲ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದ್ದಾರೆ.

ಮುಂದಿನ ವರ್ಷದಿಂದ ಲಿಕ್ವಿಡ್ ನ್ಯಾನೋ ಡಿಎಪಿ ಉತ್ಪಾದನೆ: ಕೇಂದ್ರ ಸಚಿವ ಭಗವಂತ ಖೂಬಾ
ಭಗವಂತ ಖೂಬಾ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Oct 27, 2021 | 3:00 PM

ಬೆಂಗಳೂರು: ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಡಿಎಪಿ ರಸಗೊಬ್ಬರ ಕೊರತೆಯಾಗುವುದಿಲ್ಲ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹೇಳಿದ್ದಾರೆ. 5 ಲಕ್ಷ ಟನ್ ಗೊಬ್ಬರ ಉತ್ಪಾದಿಸಲು ಕಾರ್ಖಾನೆಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. ಕರ್ನಾಟಕದಲ್ಲಿ ಪ್ರಸ್ತುತ 22.33 ಲಕ್ಷ ಟನ್ ಯೂರಿಯಾ ಲಭ್ಯವಿದೆ. ನವೆಂಬರ್ ತಿಂಗಳಿಗೆ ಬೇಕಿರುವಷ್ಟು ಗೊಬ್ಬರ ಸರಬರಾಜು ಮಾಡುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ಗೊಬ್ಬರದ ವಿಚಾರದಲ್ಲಿ ರಾಜಕಾರಣ ಮಾಡುವ ಅವಶ್ಯಕತೆ ನಮಗಿಲ್ಲ. ರಾಜ್ಯದಲ್ಲಿ ರಸಗೊಬ್ಬರ ಕೊರತೆಯಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಈ ಹಿಂದೆ ಕೇಂದ್ರದಲ್ಲಿ ಬೇಜವಾಬ್ದಾರಿ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ರಾಜ್ಯಗಳಿಗೆ ಗೊಬ್ಬರ ಪೂರೈಕೆಯಲ್ಲಿ ಹಲವು ಸಮಸ್ಯೆಗಳು ಎದುರಾಗುತ್ತಿದ್ದವು. ಸಿದ್ದರಾಮಯ್ಯ ಅದನ್ನು ನೆನಪು ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.

ರಾಜಕಾರಿಣಿಗಳ ಗಾಳಿಮಾತಿನಿಂದ ರೈತರು ಆತಂಕಕ್ಕೀಡಾದರೆ ಮುಂದಿನ ದಿನಗಳಲ್ಲಿ ಕೃತಕ ಅಭಾವ ಸೃಷ್ಟಿ ಆಗುವ ಅಪಾಯವಿದೆ. ಹೀಗಾಗಿ ಸಿದ್ದರಾಮಯ್ಯ ಅವರು ಜನರಲ್ಲಿ ಭಯ ಹುಟ್ಟಿಸುವ ಕೆಲಸ ಮಾಡಬಾರದು ಎಂದರು. ಹಾನಗಲ್ ಮತ್ತು ಸಿಂದಗಿಯಲ್ಲಿ ಕಾಂಗ್ರೆಸ್​ಗೆ ಸೋಲಿನ ಆತಂಕ ಎದುರಾಗಿದೆ. ಹೀಗಾಗಿಯೇ ಸೋಲುವ ಹತಾಶೆಯಿಂದ ಸಿದ್ದರಾಮಯ್ಯ ಮತ ಗಳಿಸಲು ಪ್ರಯತ್ನ ಮಾಡುತ್ತಿದ್ದಾರೆ. ಇಂಥ ಪ್ರಯತ್ನಗಳಿಗೆ ಹಾನಗಲ್ ಮತ್ತು ಸಿಂದಗಿಯ ಜನರು ಗಮನಕೊಡಬಾರದು ಎಂದು ಸಲಹೆ ಮಾಡಿದರು.

ಭಾರತದಲ್ಲಿ ಮುಂದಿನ ವರ್ಷ ಲಿಕ್ವಿಡ್ ನ್ಯಾನೋ ಡಿಎಪಿ ತಯಾರಾಗಲಿದೆ. ಕಳೆದ ಜೂನ್​ನಿಂದೀಚೆಗೆ ಹಲವು ಕ್ರಾಂತಿಕಾರಿ ಹೆಜ್ಜೆಗಳನ್ನು ಇಡಲಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲಬೆಲೆಗಳು ಹೆಚ್ಚಾಗಿವೆ. ಯುಪಿಎ ಸರ್ಕಾರ ಮಾಡಿದ್ದ ಆಯಿಲ್ ಬಾಂಡ್ ಸಾಲವನ್ನು ನಮ್ಮ ಸರ್ಕಾರ ತೀರಿಸಿದೆ ಎಂದು ವಿವರಿಸಿದರು.

ಬೆಲೆ ಏರಿಕೆ ಕುರಿತು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಹಣದುಬ್ಬರ ಎಷ್ಟು ಹೆಚ್ಚಾಗಿದೆ ಎನ್ನುವುದನ್ನು ಮೊದಲು ಗಮನಿಸಬೇಕು. ಕಾಂಗ್ರೆಸ್​ಗೆ ಮಾತ್ರ ಬೆಲೆ ಏರಿಕೆ ಬಗ್ಗೆ ಆಕ್ರೋಶವಿದೆ. ಜನರಲ್ಲಿ ಎಲ್ಲಿದೆ ಬೆಲೆ ಏರಿಕೆಯ ಆಕ್ರೋಶ? ಜನರಿಗೆ ಬೆಲೆ ಏರಿಕೆಯಿಂದ ಹೊರೆಯೇ ಆಗ್ತಿಲ್ಲ ಎಂದು ಉತ್ತರಿಸಿದರು.

ಇದನ್ನೂ ಓದಿ: ಏಳು ವರ್ಷದಲ್ಲಿ ಎಲ್ಲಿಯೂ ಗೊಬ್ಬರ ಕೊರತೆಯಾಗಿಲ್ಲ; ಕೊರತೆ ಇದ್ದ ಕಡೆ ಗೊಬ್ಬರ ಪೂರೈಸುತ್ತೇವೆ ಇದನ್ನೂ ಓದಿ: ಕರ್ನಾಟಕದಲ್ಲಿ ಯಾವುದೇ ರೀತಿ ರಸಗೊಬ್ಬರ ಕೊರತೆ ಇಲ್ಲ: ಕೃಷಿ ಇಲಾಖೆ ಮಾಧ್ಯಮ ಪ್ರಕಟಣೆ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?