AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ರೈತರು ಹಾಗೂ ಉದ್ಯಮಿಗಳಿಗೆ ಯುಕೆ ಗಿಫ್ಟ್: ಬ್ರಿಟನ್ ಮಾರುಕಟ್ಟೆಯಲ್ಲಿ ಬ್ಯಾಡಗಿ ಮೆಣಸಿನಕಾಯಿ, ಕಾಫಿಗೆ ಸಿಗಲಿದೆ ಭಾರಿ ಡಿಮ್ಯಾಂಡ್

ಭಾರತ-ಯುಕೆ ಮುಕ್ತ ವ್ಯಾಪಾರ ಒಪ್ಪಂದ ಜಾರಿಯಾಗಿದೆ. ಇದು ಕರ್ನಾಟಕದ ಆರ್ಥಿಕತೆಗೆ ದೊಡ್ಡ ಉತ್ತೇಜನ ನೀಡಲಿದೆ. ಶೇಕಡಾ 99ರಷ್ಟು ಉತ್ಪನ್ನಗಳಿಗೆ ಸುಂಕ ವಿನಾಯಿತಿ, ಕೃಷಿ, ಕೈಗಾರಿಕೆ, ಜೈವಿಕ ತಂತ್ರಜ್ಞಾನ ಕ್ಷೇತ್ರಗಳಿಗೆ ಲಾಭ. ಯುಕೆ ಕಂಪನಿಗಳ ಹೂಡಿಕೆ ಹೆಚ್ಚಳ, ಹೊಸ ಉದ್ಯೋಗ ಸೃಷ್ಟಿ. ಬ್ರಿಟಿಷ್ ವಿಶ್ವವಿದ್ಯಾಲಯಗಳು ರಾಜ್ಯದಲ್ಲಿ ಕ್ಯಾಂಪಸ್ ತೆರೆಯಲಿದ್ದು, ಶಿಕ್ಷಣ ಕ್ಷೇತ್ರಕ್ಕೂ ಇದು ಹೊಸ ಮೈಲಿಗಲ್ಲು. ಕರ್ನಾಟಕದ ರಫ್ತುದಾರರಿಗೆ ಬ್ರಿಟನ್‌ನಲ್ಲಿ ಬೃಹತ್ ಮಾರುಕಟ್ಟೆ ದೊರೆಯಲಿದೆ.

ಕರ್ನಾಟಕದ ರೈತರು ಹಾಗೂ ಉದ್ಯಮಿಗಳಿಗೆ ಯುಕೆ ಗಿಫ್ಟ್: ಬ್ರಿಟನ್ ಮಾರುಕಟ್ಟೆಯಲ್ಲಿ ಬ್ಯಾಡಗಿ ಮೆಣಸಿನಕಾಯಿ, ಕಾಫಿಗೆ ಸಿಗಲಿದೆ ಭಾರಿ ಡಿಮ್ಯಾಂಡ್
ಭಾರತ ಯುಕೆ ಒಪ್ಪಂದ
ಅಕ್ಷಯ್​ ಪಲ್ಲಮಜಲು​​
|

Updated on:Jul 16, 2026 | 10:58 AM

Share

ಮುಖ್ಯಾಂಶಗಳು

  • ಭಾರತ ಮತ್ತು ಬ್ರಿಟನ್ ನಡುವಿನ ಆರ್ಥಿಕ ಬಾಂಧವ್ಯ
  • ಉಭಯ ದೇಶಗಳ ನಡುವಿನ ಮುಕ್ತ ವ್ಯಾಪಾರ ಒಪ್ಪಂದ
  • ರಾಜ್ಯದ ವ್ಯಾಪಾರ, ಉದ್ಯಮ ಹಾಗೂ ಶಿಕ್ಷಣ ಕ್ಷೇತ್ರಗಳಿಗೆ ಬಂಪರ್ ಲಾಭ

ಬೆಂಗಳೂರು, ಜು.16: ಭಾರತ ಮತ್ತು ಬ್ರಿಟನ್ (UK) ನಡುವಿನ ಆರ್ಥಿಕ ಬಾಂಧವ್ಯದಲ್ಲಿ ಹೊಸದೊಂದು ಚಾರಿತ್ರಿಕ ಅಧ್ಯಾಯ ಆರಂಭವಾಗಿದೆ. ಉಭಯ ದೇಶಗಳ ನಡುವಿನ ಮುಕ್ತ ವ್ಯಾಪಾರ ಒಪ್ಪಂದವು (Free Trade Agreement) ಬುಧವಾರದಿಂದ ಜಾರಿಗೆ ಬಂದಿದ್ದು, ಇದರಿಂದ ಕರ್ನಾಟಕ ರಾಜ್ಯದ ವ್ಯಾಪಾರ, ಉದ್ಯಮ ಹಾಗೂ ಶಿಕ್ಷಣ ಕ್ಷೇತ್ರಗಳಿಗೆ ಬಂಪರ್ ಲಾಭ ದೊರೆಯಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಒಪ್ಪಂದದ ಅನ್ವಯ ಭಾರತದ ಶೇಕಡಾ 99ರಷ್ಟು ಉತ್ಪನ್ನಗಳು ಯಾವುದೇ ಸುಂಕವಿಲ್ಲದೆ ಬ್ರಿಟನ್ ಮಾರುಕಟ್ಟೆಯನ್ನು ಪ್ರವೇಶಿಸಲಿವೆ. ಪ್ರಮುಖ ವಲಯಗಳ ಉತ್ಪನ್ನಗಳ ಮೇಲಿನ ಭಾರಿ ಸುಂಕವನ್ನು ಸಂಪೂರ್ಣವಾಗಿ ಶೂನ್ಯಕ್ಕೆ ಇಳಿಸಲಾಗಿದೆ. ಆಟೋಮೋಟಿವ್ ವಲಯ ಸಂಬಂಧಿಸಿದಂತೆ ಈ ಹಿಂದೆ ಇದ್ದ ಶೇಕಡಾ 110 ರಷ್ಟು ಸುಂಕವನ್ನು ಶೂನ್ಯಕ್ಕೆ ಇಳಿಸಲಾಗಿದೆ. ಎಲೆಕ್ಟ್ರಿಕಲ್ ಮಷೀನರಿಗಳಿಗೆ ಶೇ. 22 ರಷ್ಟಿದ್ದ ಸುಂಕ ಇನ್ಮುಂದೆ ಶೂನ್ಯವಾಗಲಿದೆ.

ವೈದ್ಯಕೀಯ ಉಪಕರಣಗಳಿಗೆ ಶೇ. 13.75 ರಷ್ಟಿದ್ದ ಸುಂಕವನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ಏರೋಸ್ಪೇಸ್ ಉತ್ಪನ್ನಗಳಿಗೂ ಶೇ. 11 ರಷ್ಟಿದ್ದ ಸುಂಕ ಈಗ ಶೂನ್ಯಕ್ಕೆ ಇಳಿಕೆಯಾಗಿದೆ. ಇನ್ನು ಕೆಲವು ನಿರ್ದಿಷ್ಟ ಉತ್ಪನ್ನಗಳ ಮೇಲಿನ ಸುಂಕವು ಮುಂದಿನ 5 ರಿಂದ 6 ವರ್ಷಗಳಲ್ಲಿ ಹಂತಹಂತವಾಗಿ ಶೂನ್ಯಕ್ಕೆ ಇಳಿಯಲಿದೆ.

ಈ ಒಪ್ಪಂದದಿಂದ ಕರ್ನಾಟಕದ ಮಲೆನಾಡು ಹಾಗೂ ಕರಾವಳಿ ಭಾಗದ ರಫ್ತುದಾರರಿಗೆ ದೊಡ್ಡ ಮಾರುಕಟ್ಟೆ ಸಿಕ್ಕಂತಾಗಿದೆ. ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಯ ಉತ್ಕೃಷ್ಟ ಗುಣಮಟ್ಟದ ಕಾಫಿ, ಏಲಕ್ಕಿ, ಕಾಳುಮೆಣಸು, ಸಾಂಬಾರ ಪದಾರ್ಥಗಳು, ತೆಂಗು, ಸಿರಿಧಾನ್ಯಗಳು ಹಾಗೂ ಪ್ರಸಿದ್ಧ ಬ್ಯಾಡಗಿ ಮತ್ತು ದೇವನೂರು ಮೆಣಸಿನಕಾಯಿಗೆ ಯುಕೆ ಮಾರುಕಟ್ಟೆಯಲ್ಲಿ ಇನ್ಮುಂದೆ ಸುಂಕದ ಹೊರೆ ಇರುವುದಿಲ್ಲ.

ಎಕ್ಸ್​​ ಪೋಸ್ಟ್​​ ಇಲ್ಲಿದೆ ನೋಡಿ:

ಮಲ್ಲಿಗೆ, ಚೆಂಡುಹೂವು, ಮಾವು, ನಿಂಬೆಹಣ್ಣು, ತರಕಾರಿ, ಮೀನು ಹಾಗೂ ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತಿಗೆ ಭಾರಿ ಬೇಡಿಕೆ ಬರಲಿದೆ. ರಾಜ್ಯದ ಜೈವಿಕ ತಂತ್ರಜ್ಞಾನ , ಫಾರ್ಮಸುಟಿಕಲ್ಸ್, ಜವಳಿ ಮತ್ತು ಗಾರ್ಮೆಂಟ್ಸ್ ಹಾಗೂ ಸಣ್ಣ ಕೈಗಾರಿಕೆಗಳಿಗೆ ಈ ಒಪ್ಪಂದದಿಂದ ಹೊಸ ಚೈತನ್ಯ ಸಿಗಲಿದೆ.

ಈಗಾಗಲೇ ಕರ್ನಾಟಕದಲ್ಲಿ ಬ್ರಿಟನ್ ಮೂಲದ ಪ್ರಮುಖ ಕಂಪನಿಗಳಾದ ರೋಲ್ಸ್ ರಾಯ್ಸ್, ಬಿಎಇ ಸಿಸ್ಟಮ್ಸ್, ಟೆಸ್ಕೋ, ಎಆರ್‌ಎಂ ಮತ್ತು ಹೆಚ್‌ಎಸ್‌ಬಿಸಿ ನೆಲೆಯೂರಿದ್ದು, 30,000ಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿವೆ. ಸ್ತುತ ‘ಟೆಸ್ಕೋ’ ಕಂಪನಿಯು ನೂತನ ವಿಸ್ತರಣಾ ಕೇಂದ್ರವನ್ನು ತೆರೆಯುತ್ತಿದ್ದು, ಇದರಿಂದ ಹೊಸದಾಗಿ 15,000 ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ. ರೋಲ್ಸ್ ರಾಯ್ಸ್’ ರಾಜ್ಯದಲ್ಲಿ ಮತ್ತಷ್ಟು ಹೂಡಿಕೆ ಮಾಡಲು ಉತ್ಸುಕತೆ ತೋರಿಸಿದೆ. ಬ್ರಿಟನ್ ಹೂಡಿಕೆದಾರರನ್ನು ಸೆಳೆಯಲು ರಾಜ್ಯ ಸರ್ಕಾರವು ಲಂಡನ್‌ನಲ್ಲಿ ರೋಡ್‌ಶೋ ನಡೆಸಲು ನಿರ್ಧರಿಸಿದ್ದು, ಏರೋಸ್ಪೇಸ್, ಸೆಮಿಕಂಡಕ್ಟರ್, ಶುದ್ಧ ಇಂಧನ ಹಾಗೂ ವಿದ್ಯುತ್ ಚಾಲಿತ ವಾಹನ ಕ್ಷೇತ್ರಗಳಲ್ಲಿ ಸಹಭಾಗಿತ್ವ ವಹಿಸಲಿದೆ.

ಇದನ್ನೂ ಓದಿ: ಇಂಜಿನಿಯರಿಂಗ್ ಸೇರ ಬಯಸುವವರಿಗೆ ಜುಲೈ 24 ಕೊನೆ ದಿನ; ಈ ಬಾರಿ ನಿಯಮದಲ್ಲಿ ದೊಡ್ಡ ಬದಲಾವಣೆ

ಕರ್ನಾಟಕಕ್ಕೆ ಬರಲಿವೆ ಬ್ರಿಟಿಷ್ ವಿಶ್ವವಿದ್ಯಾಲಯಗಳು:

ಕೇವಲ ವ್ಯಾಪಾರ ಮಾತ್ರವಲ್ಲದೆ ಶಿಕ್ಷಣ ಕ್ಷೇತ್ರದಲ್ಲೂ ಈ ಒಪ್ಪಂದ ಕ್ರಾಂತಿ ಸೃಷ್ಟಿಸಲಿದೆ. ಬ್ರಿಟನ್‌ನ ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಮತ್ತು ಪ್ರಮುಖ ಶಾಲೆಗಳು ತಮ್ಮ ಕ್ಯಾಂಪಸ್‌ಗಳನ್ನು ಕರ್ನಾಟಕದಲ್ಲೇ ತೆರೆಯಲು ಹಸಿರು ನಿಶಾನೆ ಸಿಕ್ಕಿದೆ. ಇದಲ್ಲದೆ, ಪ್ರಸ್ತುತ ಬೆಂಗಳೂರು ಮತ್ತು ಲಂಡನ್ ನಡುವೆ ವಾರಕ್ಕೆ 34 ನೇರ ವಿಮಾನ ಸೇವೆಗಳಿದ್ದು, ಮುಂಬರುವ ದಿನಗಳಲ್ಲಿ ಈ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿದೆ. ರಾಜ್ಯದ ರಫ್ತುದಾರರಿಗೆ ಮತ್ತು ಸಣ್ಣ ಉದ್ಯಮಿಗಳಿಗೆ ಈ ಮುಕ್ತ ವ್ಯಾಪಾರದ ಬಗ್ಗೆ ಹೆಚ್ಚಿನ ತಿಳಿವಳಿಕೆ ಮೂಡಿಸಲು ಸರ್ಕಾರ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಿದೆ ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:38 am, Thu, 16 July 26

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ