India Weather: ನಾಲ್ಕು ರಾಜ್ಯಗಳಲ್ಲಿ ಭಾರಿ ಮಳೆಯ ಮುನ್ಸೂಚನೆ, ಕರ್ನಾಟಕದಲ್ಲಿ ಒಣಹವೆ

ಮುಂದಿನ ಎರಡು ದಿನಗಳ ಕಾಲ ನಾಲ್ಕು ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜಮ್ಮು ಮತ್ತು ಕಾಶ್ಮೀರ, ಪಶ್ಚಿಮ ಬಂಗಾಳ, ಹಿಮಾಚಲ ಪ್ರದೇಶ ಹಾಗೂ ಉತ್ತರ ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಕರ್ನಾಟಕದಲ್ಲಿ ಒಣಹವೆ ಮುಂದುವರೆಯಲಿದೆ. ಜತೆಗೆ ಗರಿಷ್ಠ ತಾಪಮಾನ ಕೂಡ 3 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

India Weather: ನಾಲ್ಕು ರಾಜ್ಯಗಳಲ್ಲಿ ಭಾರಿ ಮಳೆಯ ಮುನ್ಸೂಚನೆ, ಕರ್ನಾಟಕದಲ್ಲಿ ಒಣಹವೆ
ಹವಾಮಾನ
Image Credit source: The Old Farmer's Almanac

Updated on: Feb 16, 2024 | 7:38 AM

ಕರ್ನಾಟಕದಲ್ಲಿ ಒಣಹವೆ ಮುಂದುವರೆದಿದೆ, ದೆಹಲಿಯಲ್ಲಿ ಇಂದು ಶುಭ್ರ ಆಕಾಶ ಗೋಚರಿಸಲಿದೆ ಹಾಗೆಯೇ ಉತ್ತರ ಪ್ರದೇಶ, ಹಿಮಾಚಲಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಪಶ್ಚಿಮ ಬಂಗಾಳದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವ ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್ ನಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.

ಹವಾಮಾನ ಇಲಾಖೆಯ ಪ್ರಕಾರ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ, ಉತ್ತರಾಖಂಡದಂತಹ ಹಿಮಾಲಯದ ರಾಜ್ಯಗಳಲ್ಲಿ ಹಿಮಪಾತ, ಮಳೆಯಾಗುವ ಸಾಧ್ಯತೆಯಿದೆ. ಈ ರಾಜ್ಯಗಳ ಕೆಲವು ಭಾಗಗಳಲ್ಲಿಯೂ ಮಳೆಯಾಗಬಹುದು. ಬಿಹಾರ, ಜಾರ್ಖಂಡ್ ಮತ್ತು ಪೂರ್ವ ಉತ್ತರ ಪ್ರದೇಶ ಶುಕ್ರವಾರ (ಫೆಬ್ರವರಿ 16) ದಟ್ಟವಾದ ಮಂಜನ್ನು ಎದುರಿಸಬೇಕಾಗಬಹುದು.

ಸೈಕ್ಲೋನಿಕ್ ಚಟುವಟಿಕೆಗಳಿಂದಾಗಿ ವಿದರ್ಭ, ಉತ್ತರ ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ಜಾರ್ಖಂಡ್‌ನಲ್ಲಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದೆ, ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಣದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಮತ್ತಷ್ಟು ಹೆಚ್ಚುವ ಸಾಧ್ಯತೆ

ಚಿಕ್ಕನಹಳ್ಳಿಯಲ್ಲಿ 11.3 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ನಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 35.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, 35.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಿಕ್ಕಮಗಳೂರಿನಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 13.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿತ್ರದುರ್ಗ 33.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾಸನದಲ್ಲಿ 33.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 12.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ