ಕರ್ನಾಟಕ ಕರಾವಳಿಯಲ್ಲಿ ಭಾರಿ ಮಳೆ: 5 ದಿನ ಆರೆಂಜ್-ರೆಡ್ ಅಲರ್ಟ್ ಘೊಷಣೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ ಐದು ದಿನಗಳ ಕಾಲ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಗಳು ಹೆಚ್ಚಾಗಿದ್ದು, ಜಿಲ್ಲೆಯಾದ್ಯಂತ ಆರೆಂಜ್ ಹಾಗೂ ರೆಡ್ ಅಲರ್ಟ್ ಘೊಷಣೆ ಮಾಡಲಾಗಿದೆ. ಹವಾಮಾನ ಇಲಾಖೆ ಸೆ11 ರಂದು ರೆಡ್ ಅಲರ್ಟ್ ಎಚ್ಚರಿಕೆ‌‌ ಕೊಟ್ಟಿದೆ. ಜೊತೆಗೆ ಈ ಅವಧಿಯಲ್ಲಿ 20 ಸೆಂ. ಮೀ.ಗೂ ಅಧಿಕ ಮಳೆಯಾಗುವ ಸಾಧ್ಯತೆಗಳಿವೆ. ಸೆ 10, 12, 13 ಹಾಗೂ 14ರಂದು ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಈ ದಿನಗಳಲ್ಲಿ ಜಿಲ್ಲೆಯಲ್ಲಿ ಪ್ರತಿದಿನ 20 ಸೆಂ.ಮೀ. ಮಳೆ‌ಯಾಗುವ ಅಂದಾಜಿದೆ. […]

ಕರ್ನಾಟಕ ಕರಾವಳಿಯಲ್ಲಿ ಭಾರಿ ಮಳೆ: 5 ದಿನ ಆರೆಂಜ್-ರೆಡ್ ಅಲರ್ಟ್ ಘೊಷಣೆ
ಸಾಧು ಶ್ರೀನಾಥ್​

Updated on: Sep 10, 2020 | 2:11 PM

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ ಐದು ದಿನಗಳ ಕಾಲ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಗಳು ಹೆಚ್ಚಾಗಿದ್ದು, ಜಿಲ್ಲೆಯಾದ್ಯಂತ ಆರೆಂಜ್ ಹಾಗೂ ರೆಡ್ ಅಲರ್ಟ್ ಘೊಷಣೆ ಮಾಡಲಾಗಿದೆ.

ಹವಾಮಾನ ಇಲಾಖೆ ಸೆ11 ರಂದು ರೆಡ್ ಅಲರ್ಟ್ ಎಚ್ಚರಿಕೆ‌‌ ಕೊಟ್ಟಿದೆ. ಜೊತೆಗೆ ಈ ಅವಧಿಯಲ್ಲಿ 20 ಸೆಂ. ಮೀ.ಗೂ ಅಧಿಕ ಮಳೆಯಾಗುವ ಸಾಧ್ಯತೆಗಳಿವೆ. ಸೆ 10, 12, 13 ಹಾಗೂ 14ರಂದು ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಈ ದಿನಗಳಲ್ಲಿ ಜಿಲ್ಲೆಯಲ್ಲಿ ಪ್ರತಿದಿನ 20 ಸೆಂ.ಮೀ. ಮಳೆ‌ಯಾಗುವ ಅಂದಾಜಿದೆ. ಪ್ರತೀ ತಾಸಿಗೆ 45-50 ಕಿ.ಮೀ. ವೇಗದ ಗಾಳಿಯೂ ಬೀಸುವುದರಿಂದ ಮೀನುಗಾರರಿಗೆ ಕಡಿಲಿಗಿಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಮಂಗಳೂರು ವರದಿ:
ಕರ್ನಾಟಕ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯೆತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ಆರೆಂಜ್ ಅಲರ್ಟ್ ಹಾಗೂ ನಾಳೆ, ನಾಡಿದ್ದು ರೆಡ್ ಅಲರ್ಟ್ ಘೋಷಣೆಯಾಗಿದೆ.

ಸಾರ್ವಜನಿಕರು ನದಿ, ಸಮುದ್ರಕ್ಕೆ ಇಳಿಯದಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಮನವಿ ಮಾಡಿದ್ದಾರೆ. ವಿದ್ಯುತ್ ಕಂಬಗಳು, ಮರ, ಕಟ್ಟಡಗಳ ಕೆಳಗೆ ನಿಲ್ಲದಂತೆ ಸೂಚಿಸಿದ್ದಾರೆ. ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲಿರುವಂತೆ ಡಿ.ಸಿ. ಆದೇಶಿಸಿದ್ದಾರೆ.

Published On - 2:10 pm, Thu, 10 September 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us