ಇಂದಿರಾ ಕ್ಯಾಂಟೀನ್​ಗೆ ನಾಡಪ್ರಭು ಕೆಂಪೇಗೌಡರ ಹೆಸರು?

ಇಂದಿರಾ ಕ್ಯಾಂಟೀನ್​ಗೆ ನಾಡಪ್ರಭು ಕೆಂಪೇಗೌಡರ ಹೆಸರು?

ಬೆಂಗಳೂರು: ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಲು ಚಿಂತನೆ ನಡೆಸಲಾಗುತ್ತಿದೆ. ಇಂದಿರಾ ಕ್ಯಾಂಟೀನ್ ಬದಲು ಕೆಂಪೇಗೌಡ ಕ್ಯಾಂಟೀನ್ ಎಂದು ಮರುನಾಮಕರಣ ಮಾಡುವುದಾಗಿ ಬಿಬಿಎಂಪಿ ಉಪಮೇಯರ್ ರಾಮ್‌ಮೋಹನ್ ರಾಜ್ ಹೇಳಿದ್ದಾರೆ.

ಇಂದಿರಾ ಕ್ಯಾಂಟೀನ್‌ ಎಂದರೇನೆ ಜನ ಊಟಕ್ಕೆ ಹೋಗ್ತಿಲ್ಲ. ಹೀಗಾಗಿ ನಾಡಪ್ರಭು ಕೆಂಪೇಗೌಡರ ಹೆಸರಿಡಲು ಚಿಂತಿಸಿದ್ದೇವೆ. ಈ ಸಂಬಂಧ ಶೀಘ್ರದಲ್ಲೇ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಸದ್ಯ ಇಂದಿರಾ ಕ್ಯಾಂಟೀನ್‌ಗೆ ರೀ ಟೆಂಡರ್ ಆಹ್ವಾನಿಸಲಾಗಿದೆ. ನಾಡಪ್ರಭು ಕೆಂಪೇಗೌಡರ ಹೆಸರು ಮರು ನಾಮಕರಣ ಕುರಿತು ಮೇಯರ್ ಹಾಗೂ ನಾನು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತೇವೆ ಎಂದು ರಾಮ್‌ಮೋಹನ್ ರಾಜ್ ತಿಳಿಸಿದ್ದಾರೆ.

ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಕಾಂಗ್ರೆಸ್​ ಸರ್ಕಾರದ ಅವಧಿಯಲ್ಲಿ ಸಿದ್ದರಾಮಯ್ಯ ಜಾರಿಗೆ ತಂದಿದ್ದರು.

Click on your DTH Provider to Add TV9 Kannada