ಇಂದ್ರಜಿತ್ ಲಂಕೇಶ್ ಮನವಿಗೆ ಸ್ಪಂದಿಸಿದ ಗೃಹ ಸಚಿವ ಬೊಮ್ಮಾಯಿ; ತನಿಖೆಗೆ ಸೂಚನೆ

Basavaraja Bommai: ನಿರ್ದೇಶಕ ಇಂದ್ರಜಿತ್ ಲಂಕೇಶ್ ಸಲ್ಲಿಸಿದ ಮನವಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಂದಿಸಿ, ತನಿಖೆಗೆ ಸೂಚನೆ ನೀಡಿದ್ದಾರೆ.

ಇಂದ್ರಜಿತ್ ಲಂಕೇಶ್ ಮನವಿಗೆ ಸ್ಪಂದಿಸಿದ ಗೃಹ ಸಚಿವ ಬೊಮ್ಮಾಯಿ; ತನಿಖೆಗೆ ಸೂಚನೆ
ಗೃಹ ಸಚಿವ ಬಸವರಾಜ್ ಬೊಮ್ಮಾಯಿ
Follow us
TV9 Web
| Updated By: shivaprasad.hs

Updated on:Jul 15, 2021 | 11:02 AM

ಬೆಂಗಳೂರು: ಇಂದ್ರಜಿತ್ ಲಂಕೇಶ್ ಅವರು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಿದ ಮನವಿಯನ್ನು ಆಧರಿಸಿ ಬಸವರಾಜ ಬೊಮ್ಮಾಯಿ ತನಿಖೆಗೆ ಆದೇಶಿಸಿದ್ದಾರೆ. ಇಂದ್ರಜಿತ್ ಲಂಕೇಶ್ ನೀಡಿದ ಮನವಿಯನ್ನು ಆಧರಿಸಿ ತನಿಖೆಗೆ ಸೂಚಿಸಿದ್ದೇನೆ. ಮೈಸೂರು ಪೊಲಿಸ್ ಆಯುಕ್ತರಿಗೆ ಈ ಕುರಿತು ಮಾಹಿತಿ ನೀಡಿದ್ದೇನೆ ಎಂದು ಅವರು ತಿಳಿಸಿದರು. ಅವರು ಏನು ಮನವಿ ಸಲ್ಲಿಸಿದ್ದಾರೋ ಯತಾರ್ಥವಾಗಿ ಅದರ ಕುರಿತಷ್ಟೇ ತಾನು ತನಿಖೆಗೆ ಸೂಚಿಸಿರುವುದು. ಅವರು ಒಂದು ಪತ್ರ ಮಾತ್ರ ಕೊಟ್ಟಿದ್ದಾರೆ ಎಂದು ಅವರು ಹೇಳಿದರು.

ಇದಕ್ಕೆ ಇಂದ್ರಜಿತ್ ಲಂಕೇಶ್ ಪ್ರತಿಕ್ರಿಯೆ ಏನು?

ಮೈಸೂರಿನ ಹೋಟೆಲ್ ಒಂದರಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಹಲ್ಲೆಯಾಗಿದೆ ಎಂದು ಆರೋಪಿಸಿದ್ದ ಇಂದ್ರಜಿತ್ ಲಂಕೇಶ್ ಆರೋಪಕ್ಕೆ ಹೋಟೆಲ್ ಮಾಲೀಕ ಉತ್ತರ ನೀಡಿದ್ದಾರೆ. ಅಂತಹ ಘಟನೆ ಇಂದ್ರಜಿತ್ ಲಂಕೇಶ್ ಹೇಳಿದ ಮೇಲೆಯೇ ನಮಗೆ ತಿಳದದ್ದು. ಆದರೆ ಅಂತಹ ಘಟನೆ ನಮ್ಮಲ್ಲಿ ವರದಿಯಾಗಿಲ್ಲ ಎಂದು ಅವರು ಹೇಳಿದ್ದರು.

ಅದಕ್ಕೆ ಪ್ರತಿಕ್ರಿಯಿಸಿರುವ ಇಂದ್ರಜಿತ್ ಲಂಕೇಶ್, ಸಂದೇಶ್ ನಾಗರಾಜ್ ಹಾಗೆ ಹೇಳುತ್ತಾರೆಂದು ತಿಳಿದಿತ್ತು. ಹೋಟೆಲ್‌ನ ಸಿಸಿಟಿವಿ ತೆಗೆಸಿ ತನಿಖೆ ನಡೆಸಲಿ. ಆಗ ಸಾಕ್ಷ್ಯ ಸಿಗದಿದ್ದರೆ ನಾನು ದಾಖಲೆಗಳನ್ನು ಒದಗಿಸುತ್ತೇನೆ. ಮೂಕನಾಗಿ ಈ ಎಪಿಸೋಡ್‌ ನೋಡಲು ನಾನು ಸಿದ್ಧನಿಲ್ಲ. ದಲಿತರು, ಮಹಿಳೆಯರಿಗೆ ಅನ್ಯಾಯವಾಗಲು ನಾನು ಬಿಡಲ್ಲ. ಮೈಸೂರು ಪೊಲೀಸರ ಕಾಂಪ್ರಮೈಸ್‌ ನಡವಳಿಕೆ ಸರಿಯಲ್ಲ. ತಪ್ಪಾಗಿದ್ದರೆ ಇನ್ಸ್‌ಪೆಕ್ಟರ್‌ ವರ್ಗಾವಣೆಗೂ ಮನವಿ ಮಾಡಿದ್ದೇನೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತಂತೆ ಈಗಾಗಲೇ ಗೃಹ ಸಚಿವರಿಗೆ ಮನವಿ ಮಾಡಿದ್ದೇನೆ. ಜನಸಾಮಾನ್ಯರಿಗೆ ಆಗುತ್ತಿರುವ ಸಮಸ್ಯೆ ಬಗ್ಗೆ ಹೇಳಿದ್ದೇನೆ ಎಂದು ಅವರು ತಿಳಿಸಿದರು.

ಇಂದ್ರಜಿತ್ ಲಂಕೇಶ್ ಗೃಹ ಸಚಿವರೆಗೆ ನೀಡಿದ್ದೇನು?

ಇಂದ್ರಜಿತ್ ಲಂಕೇಶ್ ಈ ಮೊದಲು ಮಾಧ್ಯಮ ಸುತ್ತೋಲೆಯನ್ನು ಹೊರಡಿಸಿದ್ದರು. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಅಪರಾಧ  ಪ್ರಕರಣಗಳು ಮಿತಿ ಮೀರಿವೆ. ಯುವ ಜನತೆ ಮಾದಕ ಜಾಲದ ಸುಳಿಗೆ ಸಿಲುಕಿ ಭವಿಷ್ಯವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಇಂದ್ರಜಿತ್ ಮಾಧ್ಯಮ ಸುತ್ತೋಲೆಯಲ್ಲಿ ತಿಳಿಸಿದ್ದರು. ಮೈಸೂರು ಜಿಲ್ಲಾ ಪೊಲೀಸರು ಮೂಕ ಪ್ರೇಕ್ಷಕರಾಗಿದ್ದಾರೆ. ಉದ್ಯಮಿಗಳು, ಪ್ರಭಾವಿಗಳು ಸಾಮಾನ್ಯರ ಮೇಲೆ ಒತ್ತಡ ಹಾಕುತ್ತಿದ್ದಾರೆ. ಸಾಮಾನ್ಯರಿಗೆ ನ್ಯಾಯ ಸಿಗುತ್ತಿಲ್ಲ ಅಂತ ಇಂದ್ರಜಿತ್ ಲಂಕೇಶ್ ಅಭಿಪ್ರಾಯಪಟ್ಟಿದ್ದರು.

ಸಿಡಿ ಪ್ರಕರಣದಲ್ಲಿ ವ್ಯವಸ್ಥೆ ಒತ್ತಡ ಹೇರಿತ್ತು. ಅರುಣಾ ಕುಮಾರಿ ವಿಚಾರದಲ್ಲೂ ಇದು ಮುಂದುವರೆದಿದೆ. ಹೀಗಾದರೆ ವ್ಯವಸ್ಥೆಯ ಮೇಲಿ ಜನಸಾಮಾನ್ಯರ ನಂಬಿಕೆ ಹೋಗುತ್ತದೆ ಅಂತ ಉಲ್ಲೇಖಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್, ಇಂದು ಗೃಹ ಸಚಿವರನ್ನ ಭೇಟಿ ಮಾಡಿದ್ದು ಕುತೂಹಲಕ್ಕೆ ಕಾರಣವಾಗಿತ್ತು. ಅದರ ಕುರಿತಂತೆ ಈಗ ಬಸವರಾಜ ಬೊಮ್ಮಾಯಿ ತನಿಖೆಗೆ ಆದೇಶಿಸಿದ್ಧಾರೆ.

ಇದನ್ನೂ ಓದಿ: Indrajit Lankesh Press Meet: ಮೈಸೂರು ಪೊಲೀಸ್ ಸ್ಟೇಶನ್​ಗಳು ಸೆಟಲ್ ಮೆಂಟ್ ಸ್ಟೇಷನ್​ಗಳಾಗಿವೆ; ಇಂದ್ರಜಿತ್ ಲಂಕೇಶ್ ಗಂಭೀರ ಆರೋಪ

ಇದನ್ನೂ ಓದಿ: ಗೃಹ ಸಚಿವರನ್ನು ಭೇಟಿ ಮಾಡಲಿರುವ ಇಂದ್ರಜಿತ್ ಲಂಕೇಶ್; ಹೆಚ್ಚಾಯ್ತು ಕುತೂಹಲ

(Karnataka Home Minister Basavaraja Bommai orders to invistigate regarding Indrajith Lankesh request)

Published On - 10:43 am, Thu, 15 July 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್