ಎನ್ಇಪಿ ರದ್ದತಿ ಕುರಿತು ಸಿಎಂ ಸಿದ್ಧರಾಮಯ್ಯ ಹೇಳಿಕೆಗೆ ಉದ್ಯಮಿ ಮೋಹನ್‌ದಾಸ್ ಪೈ ಟೀಕೆ

ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಎನ್‌ಇಪಿ ರದ್ದುಗೊಳಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ ಇನ್ಫೋಸಿಸ್ ಮಂಡಳಿಯ ಮಾಜಿ ಸದಸ್ಯ ಮೋಹನ್‌ದಾಸ್ ಪೈ ಕಿಡಿಕಾರಿದ್ದಾರೆ. ಎನ್ಇಪಿ ರದ್ದು ಮಾಡುವ ನಿರ್ಣಯವು ಬಹಳ ಕೆಟ್ಟ ನಿರ್ಧಾರವಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯು ಶಿಕ್ಷಣ ಸಂಸ್ಥೆಗಳಿಗೆ ಹೊಸ ಆಯಾಮ ಹಾಗೂ ತತ್ವಗಳನ್ನು ಕಟ್ಟಿಕೊಡುತ್ತಿತ್ತು ಎಂದು ಹೇಳಿದ್ದಾರೆ.

ಎನ್ಇಪಿ ರದ್ದತಿ ಕುರಿತು ಸಿಎಂ ಸಿದ್ಧರಾಮಯ್ಯ ಹೇಳಿಕೆಗೆ ಉದ್ಯಮಿ ಮೋಹನ್‌ದಾಸ್ ಪೈ ಟೀಕೆ
ಉದ್ಯಮಿ ಮೋಹನ್‌ದಾಸ್ ಪೈ, ಸಿಎಂ ಸಿದ್ಧರಾಮಯ್ಯ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Aug 16, 2023 | 6:47 PM

ಬೆಂಗಳೂರು, ಆಗಸ್ಟ್​ 16: ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ರದ್ದುಗೊಳಿಸುವುದಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಇತ್ತೀಚೆಗೆ ಹೇಳಿದ್ದರು. ಇದೀಗ ಸಿದ್ದರಾಮಯ್ಯ ಅವರ ನಿರ್ಧಾರವನ್ನು ಇನ್ಫೋಸಿಸ್ ಮಂಡಳಿಯ ಮಾಜಿ ಸದಸ್ಯ ಮೋಹನ್‌ದಾಸ್ ಪೈ ಅವರು ಟೀಕಿಸಿದ್ದು, ಇದು ‘ನಮ್ಮ ಯುವಕರ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ’ ಎಂದು ಕಿಡಿಕಾರಿದ್ದಾರೆ. ಎನ್ಇಪಿ ರದ್ದು ಮಾಡುವ ನಿರ್ಣಯವು ಬಹಳ ಕೆಟ್ಟ ನಿರ್ಧಾರವಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯು ಶಿಕ್ಷಣ ಸಂಸ್ಥೆಗಳಿಗೆ ಹೊಸ ಆಯಾಮ ಹಾಗೂ ತತ್ವಗಳನ್ನು ಕಟ್ಟಿಕೊಡುತ್ತಿತ್ತು ಎಂದು ಹೇಳಿದ್ದಾರೆ.

ಈ ಕುರಿತಾಗಿ ಮೋಹನ್‌ದಾಸ್ ಪೈ ಅವರು ಟ್ವೀಟ್​ ಮಾಡಿದ್ದು, ಸರ್ಕಾರವು ಅಗತ್ಯ ಬಿದ್ದರೆ ಎನ್ಇಪಿ ನಿಯಮಗಳನ್ನು ಮಾರ್ಪಾಡುಗೊಳಿಸಬಹುದಾಗಿತ್ತು. ಅದರ ಬದಲಾಗಿ ರಾಜಕೀಯ ಹಿತಾಸಕ್ತಿಗಾಗಿ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ರಾಜಿಯಾಗಿರುವುದು ಸರಿಯಲ್ಲ, ಸಂವಿಧಾನಿಕ ತತ್ವಗಳು ಮರೆಯಾದವೇ ಎಂದು ಪ್ರಶ್ನಿಸಿದ್ದಾರೆ.

ಮೋಹನ್‌ದಾಸ್ ಪೈ ಟ್ವೀಟ್

ಇದೊಂದು ಮೂರ್ಖ ನಿರ್ಧಾರ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಅದೇ ರೀತಿಯಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಪ್ರತಿಕ್ರಿಯಿಸಿದ್ದು, ಇದೊಂದು ಮೂರ್ಖ ನಿರ್ಧಾರ. ಒಂದು ವೇಳೆ ಎನ್‌ಇಪಿ ಹಿಂಪಡೆದರೆ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಎನ್ಇಪಿ ರದ್ದತಿ ಮಾಡುವ ಬದಲು ನಿಯಮಗಳಲ್ಲಿ ಸಣ್ಣಪುಟ್ಟ ಬದಲಾಣೆಗಳನ್ನು ಮಾಡುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಬೇಕು ಎಂದಿದ್ದಾರೆ.

ಇದನ್ನೂ ಓದಿ: ಬಿಬಿಎಂಪಿ ಚುನಾವಣೆಗೂ ಮುನ್ನ ಬಾಕಿ ಯೋಜನೆಗಳಿಗೆ ಅನುಮತಿ ನೀಡುವಂತೆ ಸಿಎಂ ಸಿದ್ದರಾಮಯ್ಯಗೆ ಶಾಸಕರ ಮನವಿ

ವಿರೋಧ ಪಕ್ಷದಲ್ಲಿದ್ದಾಗ, ಕಾಂಗ್ರೆಸ್ ಆರ್‌ಎಸ್‌ಎಸ್ ಪ್ರಧಾನ ಕಚೇರಿಯನ್ನು ಉಲ್ಲೇಖಿಸಿ ಎನ್‌ಇಪಿಯನ್ನು ‘ನಾಗ್ಪುರ ಶಿಕ್ಷಣ ನೀತಿ’ ಎಂದು ಈ ಹಿಂದೆ ಟೀಕೆ ಮಾಡಿತ್ತು.

ಚುನಾವಣೆಯ ನಂತರ ಸರ್ಕಾರ ರಚನೆಯಾಗುವ ಮೊದಲು ಶೈಕ್ಷಣಿಕ ವರ್ಷ ಪ್ರಾರಂಭವಾಗಿತ್ತು. ಆದ್ದರಿಂದ ವಿದ್ಯಾರ್ಥಿಗಳನ್ನು ಗೊಂದಲಕ್ಕಿಡು ಮಾಡಬಾರದೆಂದು ಮುಂದಿನ ಶೈಕ್ಷಣಿಕ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಗೊಳಿಸಲಾಗುತ್ತಿದೆ. ಈ ಕುರಿತು ಸಕಲ ಸಿದ್ಧತೆಗಳೂ ನಡೆದಿವೆ ಎಂದು ಸಿಎಂ ಸಿದ್ದರಾಮಯ್ಯ ಆಗಸ್ಟ್ 14 ರಂದು ಸರ್ವ ಸದಸ್ಯರ ಸಭೆಯಲ್ಲಿ ಹೇಳಿದ್ದರು.

ಇದನ್ನೂ ಓದಿ: ಕಸ್ತೂರಿ ರಂಗನ್ ಬಗ್ಗೆ ವಿರೋಧವೋ, ಎನ್​ಇಪಿ ಬಗ್ಗೆ ವಿರೋಧವೋ; ಕರ್ನಾಟಕ ಸರ್ಕಾರಕ್ಕೆ ಸಿಟಿ ರವಿ ಪ್ರಶ್ನೆ

ಎನ್‌ಇಪಿಯನ್ನು ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ವಿರೋಧಿಸಿದ್ದಾರೆ. ಆದರೆ ಬಿಜೆಪಿ ವಿದ್ಯಾರ್ಥಿಗಳ ಹಿತಾಸಕ್ತಿಗಳನ್ನು ರಾಜಿ ಮಾಡಿಕೊಂಡು ಅದನ್ನು ಜಾರಿಗೆ ತರಲಾಗಿದೆ. 2021 ರಲ್ಲಿ ಕರ್ನಾಟಕದಲ್ಲಿ ಉನ್ನತ ಶಿಕ್ಷಣದಲ್ಲಿ NEP ಅನ್ನು ಮೊದಲು ಜಾರಿಗೆ ತರಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ