AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಫೋಸಿಸ್ ಲೇಆಫ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕಕ್ಕೆ ಕೇಂದ್ರದಿಂದ ಮಹತ್ವದ ಸೂಚನೆ

ಇನ್ಫೋಸಿಸ್‌ನಲ್ಲಿ ಸಾಮೂಹಿಕ ಲೇಆಫ್ ಆರೋಪವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಒಂದು ಸ್ವತಂತ್ರ ಸಂಘಟನೆಯ ದೂರಿನ ಹಿನ್ನೆಲೆಯಲ್ಲಿ, ಕರ್ನಾಟಕ ಕಾರ್ಮಿಕ ಇಲಾಖೆಗೆ ಸೂಚನೆ ನೀಡಿ ಕ್ರಮ ಕೈಗೊಳ್ಳಲು ನಿರ್ದೇಶಿಸಿದೆ. ಇನ್ಫೋಸಿಸ್ 300ಕ್ಕೂ ಹೆಚ್ಚು ಹೊಸ ಉದ್ಯೋಗಿಗಳನ್ನು ವಜಾಗೊಳಿಸುತ್ತಿರುವುದನ್ನು ಒಪ್ಪಿಕೊಂಡಿತ್ತು. ಆದರೆ ಸಂಘಟನೆಯು 700ಕ್ಕೂ ಹೆಚ್ಚು ಉದ್ಯೋಗಿಗಳನ್ನು ವಜಾ ಮಾಡಲಾಗಿದೆ ಎಂದು ಆರೋಪಿಸಿತ್ತು.

ಇನ್ಫೋಸಿಸ್ ಲೇಆಫ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕಕ್ಕೆ ಕೇಂದ್ರದಿಂದ ಮಹತ್ವದ ಸೂಚನೆ
ಇನ್ಫೋಸಿಸ್
Ganapathi Sharma
|

Updated on: Feb 14, 2025 | 2:27 PM

Share

ಬೆಂಗಳೂರು, ಫೆಬ್ರವರಿ 14: ಇನ್ಫೋಸಿಸ್​​ನಲ್ಲಿ ಉದ್ಯೋಗಿಗಳನ್ನು ಸಾಮೂಹಿಕವಾಗಿ ವಜಾಗೊಳಿಸಲಾಗುತ್ತಿದೆ ಎಂದು ಟೆಕ್ ಉದ್ಯೋಗಿಗಳ ಸ್ವತಂತ್ರ ಸಂಘಟನೆಯೊಂದು ನೀಡಿದ ದೂರನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಸಮಸ್ಯೆಯನ್ನು ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಕರ್ನಾಟಕ ಕಾರ್ಮಿಕ ಇಲಾಖೆಗೆ ಕೇಂದ್ರ ಕಾರ್ಮಿಕ ಸಚಿವಾಲಯ ಸೂಚನೆ ನೀಡಿದೆ.

ಇನ್ಫೋಸಿಸ್ ಮೈಸೂರು ಕ್ಯಾಂಪಸ್​ನಲ್ಲಿ ತರಬೇತಿ ಹಂತದಲ್ಲಿರುವ ಸುಮಾರು 300 ಹೊಸ ಉದ್ಯೋಗಿಗಳನ್ನು ಕೆಲಸದಿಂದ ತೆಗೆಯುತ್ತಿರುವುದಾಗಿ ಕಳೆದ ವಾರ ಇನ್ಫೋಸಿಸ್ ಒಪ್ಪಿಕೊಂಡಿತ್ತು.

ಕೇಂದ್ರಕ್ಕೆ ದೂರು ನೀಡಿದ್ದ ಟೆಕ್ ಉದ್ಯೋಗಿಗಳ ಸಂಘಟನೆ

ಆದರೆ ಈ ಸಂಖ್ಯೆಗಳ ಬಗ್ಗೆ ಟೆಕ್ ಉದ್ಯೋಗಿಗಳ ಹಿತಾಸಕ್ತಿ ಕಾಪಾಡುವುದಕ್ಕೆಂದು ರೂಪುಗೊಂಡಿರುವ ಸ್ವತಂತ್ರ ಸಂಘಟನೆ (Nascent Information Technology Employees Senate) ಅನುಮಾನ ವ್ಯಕ್ತಪಡಿಸಿತ್ತು. ಅಲ್ಲದೆ ಸುಮಾರು 700 ರಷ್ಟು ಉದ್ಯೋಗಿಗಳನ್ನು ಇನ್ಫೋಸಿಸ್ ವಜಾ ಗೊಳಿಸುತ್ತಿದೆ ಎಂದು ಆರೋಪಿಸಿತ್ತು. ಬಳಿಕ ಕೇಂದ್ರ ಕಾರ್ಮಿಕ ಇಲಾಖೆಗೆ ಅಧಿಕೃತವಾಗಿ ಪತ್ರ ಬರೆದು ದೂರು ನೀಡಿತ್ತು. ಇನ್ಫೋಸಿಸ್ ಲೇಆಫ್ ವಿಚಾರದಲ್ಲಿ ತಕ್ಷಣವೇ ಮಧ್ಯಪ್ರವೇಶಿಸಿ ಕಂಪನಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿತ್ತು.

ಕೇಂದ್ರಕ್ಕೆ ನೀಡಿದ ದೂರಿನಲ್ಲಿ ಏನಿತ್ತು?

ಆಫರ್ ಲೆಟರ್ ಕೊಟ್ಟ ನಂತರ ಎರಡು ವರ್ಷ ಕಾಯಿಸಿ ಉದ್ಯೋಗಕ್ಕೆ ಸೇರಿಸಿಕೊಂಡವರನ್ನು ಇನ್ಫೋಸಿಸ್ ಈಗ ಕೆಲಸದಿಂದ ತೆಗೆದುಹಾಕುತ್ತಿದೆ. ಈಗಾಗಲೇ ಎರಡು ವರ್ಷ ಕಾದಿರುವ ಅವರು ಉದ್ಯೋಗ ಕಳೆದುಕೊಂಡು ಇನ್ನಷ್ಟು ಸಂಕಷ್ಟಕ್ಕೆ ಸಿಲುಕುವಂತೆ ಆಗುತ್ತಿದೆ ಎಂದು ಕೇಂದ್ರ ಕಾರ್ಮಿಕ ಸಚಿವಾಲಯಕ್ಕೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಹೊಸದಾಗಿ ಸೇರ್ಪಡೆಯಾದ ಉದ್ಯೋಗಿಗಳಿಂದ ಮ್ಯೂಚುವಲ್ ಸಫರೇಷನ್ ಒಪ್ಪಂದಕ್ಕೆ ಇನ್ಫೋಸಿಸ್ ಸಹಿ ಹಾಕಿಸುತ್ತಿದೆ ಎಂಬ ಬಗ್ಗೆ ಇತ್ತೀಚೆಗೆ ವರದಿಗಳಾಗಿದ್ದವು.

‘ಇಂಡಸ್ಟ್ರಿಯಲ್ ಡಿಸ್ಪ್ಯೂಟ್ಸ್ ಆಕ್ಟ್ 1947’ ರ ಅಡಿಯಲ್ಲಿ ಇನ್ಫೋಸಿಸ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಕಾರ್ಮಿಕ ಸಚಿವಾಲಯಕ್ಕೆ ನೀಡಿದ ದೂರಿನಲ್ಲಿ ಆಗ್ರಹಿಸಲಾಗಿತ್ತು.

ಬೆಂಗಳೂರು, ಮೈಸೂರು ಇನ್ಫೋಸಿಸ್ ಕ್ಯಾಂಪಸ್​ಗೆ ಅಧಿಕಾರಿಗಳ ಭೇಟಿ

ಕೇಂದ್ರ ಕಾರ್ಮಿಕ ಸಚಿವಾಲಯ ನೀಡಿರುವ ನಿರ್ದೇಶನದಂತೆ ಕರ್ನಾಟಕ ಕಾರ್ಮಿಕ ಇಲಾಖೆ ಅಧಿಕಾರಿಗಳು ಗುರುವಾರ ಇನ್ಫೋಸಿಸ್ ನ ಬೆಂಗಳೂರು ಮತ್ತು ಮೈಸೂರು ಕ್ಯಾಂಪಸ್ ಗಳಿಗೆ ಭೇಟಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ವಿಚಾರವಾಗಿ ಇನ್ಫೋಸಿಸ್ ಈವರೆಗೆ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ.

ಇದನ್ನೂ ಓದಿ: ಇನ್ವೆಸ್ಟ್ ಕರ್ನಾಟಕ: ವೋಲ್ವೋ ಕಂಪನಿಯಿಂದ 1,400 ಕೋಟಿ ರೂ ಹೂಡಿಕೆ, ಸಿಎಂ ಸಮ್ಮುಖದಲ್ಲಿ ಒಡಂಬಡಿಕೆಗೆ ಸಹಿ

ಕಂಪನಿಯು ಕಠಿಣ ನೇಮಕಾತಿ ಪ್ರಕ್ರಿಯೆಯನ್ನು ಅನುಸರಿಸುತ್ತಿರುವುದಾಗಿ ಈ ಹಿಂದೆ ಹೇಳಿತ್ತು. ತರಬೇತಿಯ ನಂತರದ ಹೊಸ ಉದ್ಯೋಗಿಗಳು ಮೂರು ಪ್ರಯತ್ನಗಳಲ್ಲಿ ಆಂತರಿಕ ಮೌಲ್ಯಮಾಪನಗಳನ್ನು ಪೂರ್ಣಗೊಳಿಸಬೇಕು. ಅದರಲ್ಲಿ ವಿಫಲವಾದರೆ ಅವರು ಕಂಪನಿಯ ಉದ್ಯೋಗದಲ್ಲಿ ಮುಂದುವರಿಯಲು ಸಾಧ್ಯವಾಗುವುದಿಲ್ಲ. ಈ ಪ್ರಕ್ರಿಯೆಯು ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಅಸ್ತಿತ್ವದಲ್ಲಿದೆ ಎಂದು ಕಂಪನಿ ಈ ಹಿಂದೆ ತಿಳಿಸಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ