ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇ ಶಿಕ್ಷಕರಿಗೆ ಅನ್ಯಾಯ: ವರ್ಗಾವಣೆ ಕೌನ್ಸಿಲಿಂಗ್ ನಿಲ್ಲಿಸುವಂತೆ ಆಗ್ರಹ
ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇ ಶಿಕ್ಷಕರಿಗೆ ಅನ್ಯಾಯವಾಗಿದ್ದು, ವರ್ಗಾವಣೆ ಕೌನ್ಸಿಲಿಂಗ್ ನಿಲ್ಲಿಸುವಂತೆ ಆಗ್ರಹಿಸಿ ಪ್ರಭಟನೆ ಮಾಡಲಾಗಿದೆ. ಶಿವಮೊಗ್ಗದ ಮೀನಾಕ್ಷಿ ಭವನದ ಪಕ್ಕದಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಕರಿಂದ ಪ್ರಭಟನೆ ಮಾಡಲಾಗಿದೆ. ಇದುವರೆಗೂ 271 ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ ನಡೆದಿದ್ದು, ನಿಲ್ಲಿಸುವಂತೆ ಶಿಕ್ಷಕರು ಆಗ್ರಹಿಸಿದ್ದಾರೆ.
ಶಿವಮೊಗ್ಗ, ಜುಲೈ 25: ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ (transfer counselling) ಪ್ರಕ್ರಿಯೆ ಬುಧವಾರದಿಂದ ಆರಂಭವಾಗಿದೆ. ಇದರ ಬೆನ್ನಲ್ಲೇ ಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ ನಿಲ್ಲಿಸುವಂತೆ ಆಗ್ರಹಿಸಿ ಪ್ರಾಥಮಿಕ ಶಾಲಾ ಶಿಕ್ಷಕರಿಂದ ನಗರದ ಮೀನಾಕ್ಷಿ ಭವನದ ಪಕ್ಕದಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪ್ರತಿಭಟನೆ (Protest) ಮಾಡಲಾಗಿದೆ. ಕಳೆದ 25 ವರ್ಷಗಳಿಂದ ಪ್ರಾಥಮಿಕ ಶಾಲಾ ಶಿಕ್ಷಕರು ಹೊರ ಊರುಗಳಲ್ಲಿ ಕೆಲಸ ಮಾಡಿಕೊಂಡು ಬರುತ್ತಿದ್ದಾರೆ. ಇವರೆಲ್ಲರೂ ವರ್ಗಾವಣೆಗೆ ಕಾಯುತ್ತಿದ್ದರು ವರ್ಗಾವಣೆ ಮಾತ್ರ ದೊರೆತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
6, 7, 8 ನೇ ತರಗತಿಗಳಿಗೆ ಪ್ರಾಥಮಿಕ ಶಿಕ್ಷಕರೇ ಪಾಠ ಮಾಡುತ್ತಿದ್ದು, ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕರ ಹುದ್ದೆಯನ್ನ ನೇಮಕ ಮಾಡಿಲ್ಲ. ಹಾಗಾಗಿ 2017ರಲ್ಲಿ ಜಾರಿಗೆ ಆದ ಸಿ ಆ್ಯಂಡ್ ಆರ್ ತಿದ್ದುಪಡಿಗೆ ಶಿಕ್ಷಕರು ಆಗ್ರಹಿಸಿದ್ದಾರೆ. ಇದುವರೆಗೂ 271 ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ ನಡೆದಿದ್ದು, ನಿಲ್ಲಿಸುವಂತೆ ಶಿಕ್ಷಕರು ಆಗ್ರಹಿಸಿದ್ದಾರೆ.
ವಿವಿಧ ಬೇಡಿಕೆ ಆಗ್ರಹಿಸಿ ಅನುದಾನ ರಹಿತ ಖಾಸಗಿ ಶಾಲೆಗಳಿಂದ ಬೃಹತ್ ಪ್ರತಿಭಟನೆ
ಬೀದರ್: ವಿವಿಧ ಬೇಡಿಕೆ ಆಗ್ರಹಿಸಿ ಅನುದಾನ ರಹಿತ ಖಾಸಗಿ ಶಾಲೆಗಳಿಂದ ನಗರದ ಸಾಯಿ ಸ್ಕೂಲ್ ಆವರಣದಲ್ಲಿ ಪ್ರತಿಭಟನೆ ಮಾಡಲಾಗಿದೆ. ಅನುದಾನ ರಹಿತ ಖಾಸಗಿ ಶಾಲೆಗಳ ಮಂಡಳಿ ಅಧ್ಯಕ್ಷ ರೇವಣಸಿದ್ದಪ್ಪಾ ಜಲಾಧೆ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಗಿದೆ. ಜಿಲ್ಲಾಧಿಕಾರಿ ಮೂಲಕ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಲಾಗಿದೆ.
ಇದನ್ನೂ ಓದಿ: ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭ, ಇಲ್ಲಿದೆ ವಿಶೇಷತೆ
ಅನುದಾನ ರಹಿತ ಖಾಸಗಿ ಶಾಲೆಗಳನ್ನ 10 ವರ್ಷಗಳಿಗೊಮ್ಮೆ ನವೀಕರಣಗೊಳಿಸುವಂತೆ ಬೇಡಿಕೆ ಇಡಲಾಗಿದೆ. ಕೆಕೆಆರ್‌ಡಿಬಿಗೆ ನೀಡುವ ಅನುದಾನದಲ್ಲಿ ಶೇ.25 ರಷ್ಟು ಶಿಕ್ಷಣ ಇಲಾಖೆಗೆ ಮೀಸಲಿಡಬೇಕು. ಅನುದಾನ ರಹಿತ ಖಾಸಗಿ ಶಾಲೆಗಳ ಕುಂದು ಕೊರತೆಗಳನ್ನ ಬಗೆ ಹರಿಸಬೇಕು ಆಗ್ರಹಿಸಲಾಗಿದೆ.
ಇದನ್ನೂ ಓದಿ: ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಗೆ ಮುಂದಾದ ಸರ್ಕಾರ: ಮಾಹಿತಿ ನೀಡಲು ಜು 31 ಕೊನೆ ದಿನ
ಇನ್ನು ಪ್ರತಿಭಟನೆಯಲ್ಲಿ ಅನುದಾನ ರಹಿತ ಖಾಸಗಿ ಶಾಲಾ ಆಡಳಿತ ಮಂಡಳಿಯ ಸದಸ್ಯರು ಹಾಗೂ ಶಿಕ್ಷಕರು ಭಾಗಿಯಾಗಿದ್ದು, ಜಿಟಿ ಜಿಟಿ ಮಳೆ ನಡುವೆಯೂ ಛತ್ರಿ ಹಿಡಿದು ಪ್ರತಿಭಟನಾಕಾರರು ಘೋಷಣೆ ಕೂಗಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.