AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DySP Lakshmi ದಾಂಪತ್ಯದಲ್ಲಿ ಎದ್ದ ಬಿರುಗಾಳಿ ಯಾವುದು? ಲಕ್ಷ್ಮೀ ಪ್ರೇಮ ವಿವಾಹದ ಇನ್​ಸೈಡ್ ಸ್ಟೋರಿ ಇಲ್ಲಿದೆ

ಸಿಐಡಿ ಡಿವೈಎಸ್‌ಪಿ ಲಕ್ಷ್ಮೀ ಮತ್ತು ನವೀನ್‌ರದ್ದು ಪಕ್ಕ ಲವ್ ಸ್ಟೋರಿ. ಇಬ್ಬರೂ ಪ್ರೀತಿಸಿ ಮನೆಯವರನ್ನು ಒಪ್ಪಿಸಿ ಮದುವೆಯಾಗಿದ್ದರು. ಲಕ್ಷ್ಮೀ ಮತ್ತು ನವೀನ್‌ ಪಿಇಎಸ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು. ಈ ವೇಳೆಯೇ ಇವರಿಬ್ಬರಿಗೆ ಪ್ರೇಮಾಂಕುರವಾಗಿತ್ತು.

DySP Lakshmi ದಾಂಪತ್ಯದಲ್ಲಿ ಎದ್ದ ಬಿರುಗಾಳಿ ಯಾವುದು? ಲಕ್ಷ್ಮೀ ಪ್ರೇಮ ವಿವಾಹದ ಇನ್​ಸೈಡ್ ಸ್ಟೋರಿ ಇಲ್ಲಿದೆ
DySP ಲಕ್ಷ್ಮೀ ಹಾಗೂ ಪತಿ ನವೀನ್
Follow us
ಆಯೇಷಾ ಬಾನು
|

Updated on:Dec 17, 2020 | 3:16 PM

ಬೆಂಗಳೂರು: ನಿನ್ನೆ ರಾತ್ರಿ ಸಾವಿಗೀಡಾದ ಸಿಐಡಿ ಡಿವೈಎಸ್‌ಪಿ ಲಕ್ಷ್ಮೀ ಮತ್ತು ನವೀನ್‌ರದ್ದು ಪಕ್ಕಾ ಲವ್ ಸ್ಟೋರಿ. ಇಬ್ಬರೂ ಪ್ರೀತಿಸಿ, ಮನೆಯವರನ್ನೂ ಒಪ್ಪಿಸಿ ಮದುವೆಯಾಗಿದ್ದವರು. ಲಕ್ಷ್ಮೀ ಮತ್ತು ನವೀನ್‌ ಪಿಇಎಸ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು. ಈ ವೇಳೆಯೇ ಇವರಿಬ್ಬರಿಗೂ ಪ್ರೇಮಾಂಕುರವಾಗಿತ್ತು.

ಕಾಲೇಜಿನಲ್ಲಿದ್ದಾಗಲೇ ಪ್ರೀತಿಯಲ್ಲಿ ಬಿದ್ದಿದ್ರು ಡಿವೈಎಸ್‌ಪಿ: ಕಾಲೇಜಿನಲ್ಲಿ ಓದುವಾಗಲೇ ಪ್ರೀತಿಯಲ್ಲಿ ಬಿದ್ದಿದ್ದ ಇವರಿಬ್ಬರೂ ಸುಮಾರು ನಾಲ್ಕು ವರ್ಷ ಪ್ರೀತಿಸಿ ಬಳಿಕ ಪೋಷಕರನ್ನು ಒಪ್ಪಿಸಿ ಮದುವೆಯಾಗಿದ್ದರು. ಲಕ್ಷ್ಮಿ ಬೋವಿ ಸಮುದಾಯದವರಾಗಿದ್ದು, ನವೀನ್ ನಾಯ್ಡು ಜನಾಂಗದವರು. ಹೀಗಾಗಿ ಮೊದಲಿಗೆ ಇವರಿಬ್ಬರ ಮನೆಯಲ್ಲಿ ಇವರ ಪ್ರೀತಿಯನ್ನು ನಿರಾಕರಿಸಲಾಗಿತ್ತು.

ಬಳಿಕ ಮನೆಯವರ ಮನವೊಲಿಸಿ ಮದುವೆಗೆ ಒಪ್ಪಿಸಿ ಮದುವೆಯಾಗಿ ದಾಂಪತ್ಯಕ್ಕೆ ಕಾಲಿಟ್ಟಿದ್ದರು. ಜೀವನದಲ್ಲಿ ನನಗೆ ನೀನು, ನಿನಗೆ ನಾನು ಎಂದು ಖುಷಿಯಾಗಿದ್ರು. ಬಳಿಕ ಲಕ್ಷ್ಮೀಯ ಪತಿ ನವೀನ್​ಗೆ ದುಬೈನಲ್ಲಿ ಕೆಲಸ ಸಿಕ್ಕಿತು. ಹೀಗಾಗಿ ಉದ್ಯೋಗಕ್ಕಾಗಿ ದುಬೈಗೆ ಹೋಗಬೇಕಾದ ಸಂದರ್ಭ ಒದಗಿ ಬಂತು. ಈ ಹಿನ್ನೆಲೆಯಲ್ಲಿ ಇಬ್ಬರೂ ದುಬೈಗೆ ಶಿಫ್ಟ್ ಆಗಿದ್ದರು. ಬಳಿಕ ಕೆಎಎಸ್​ ಪರೀಕ್ಷೆ ಬರೆದಿದ್ದ ಲಕ್ಷ್ಮಿ, ಪೊಲೀಸ್​ ಉದ್ಯೋಗಕ್ಕೆ ಆಯ್ಕೆಯಾಗಿದ್ದರು.

ಕೆಎಸ್ ಪಿಎಸ್ ಆಯ್ಕೆ ಮಾಡಿಕೊಂಡು ಬೆಂಗಳೂರಿಗೆ ಬಂದರು. ನವೀನ್ ದುಬೈ ಕೆಲಸದ ಬಳಿಕ ಅಮೇಜಾನ್​ನಲ್ಲಿ ಕೆಲಸ ಮಾಡಿದ್ರು. ನಂತರ ಆ ಕಂಪನಿ ಸಹ ತೊರೆದು ಮತ್ತೊಂದು ಕಡೆ ಕೆಲಸಕ್ಕೆ ಹೋದ್ರು. ಈ ರೀತಿ ಇವರಿಬ್ಬರ ಸಂಸಾರ ಸಾಗುತ್ತಿತ್ತು. ಈ ಮಧ್ಯೆ, ಕೆಲಸದ ವಿಚಾರಕ್ಕೆ ಸಂಬಂಧಿಸಿ ನವೀನ್ ಹೈದ್ರಾಬಾದ್​ಗೆ ತೆರಳಿದ್ದಾರೆ.

ಇದೇ ವೇಳೆ ಸಿಐಡಿ DySP Lakshmi ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ನೇಣು ಬಿಗಿದ ಸ್ಥಿತಿಯಲ್ಲಿ ದೇಹ ಪತ್ತೆಯಾಗಿದೆ. ಈ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ. ಈ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

DySP ಲಕ್ಷ್ಮೀ ಅನುಮಾನಾಸ್ಪದ ಸಾವು: ಲಕ್ಷ್ಮೀ ಸ್ನೇಹಿತ ಸೇರಿದಂತೆ ನಾಲ್ವರು ಪೊಲೀಸ್​ ವಶಕ್ಕೆ

Published On - 2:47 pm, Thu, 17 December 20

60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ