ವಾರ್ತಾ ಆಯುಕ್ತರಿಂದ ವಿಷ್ಣುವರ್ಧನ್ ಸ್ಮಾರಕ ಸ್ಥಳದ ಪರಿಶೀಲನೆ

| Updated By: ರಶ್ಮಿ ಕಲ್ಲಕಟ್ಟ

Updated on: Jan 08, 2021 | 7:06 PM

ಸುಮಾರು 11 ಕೋಟಿ ರೂಪಾಯಿ ಯೋಜನೆ ಇದಾಗಿದ್ದು , 5 ಎಕರೆ ವಿಶಾಲ ಪ್ರದೇಶದಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಷ್ಣು ಸ್ಮಾರಕವನ್ನು ಅತ್ಯಂತ ಕ್ಷಿಪ್ರವಾಗಿ ಹಾಗೂ ಉತ್ಕೃಷ್ಟವಾಗಿ ನಾಡಿಗೆ ನೀಡುವ ಸಂಕಲ್ಪಕ್ಕೆ ವಾರ್ತಾ ಇಲಾಖೆ ಕಟಿಬದ್ಧವಾಗಿದೆ ಎಂದು ಹರ್ಷ ತಿಳಿಸಿದ್ದಾರೆ.

ವಾರ್ತಾ ಆಯುಕ್ತರಿಂದ ವಿಷ್ಣುವರ್ಧನ್ ಸ್ಮಾರಕ ಸ್ಥಳದ ಪರಿಶೀಲನೆ
ಸ್ಥಳ ಪರಿಶಿಲನೆ ನಡೆಸುತ್ತಿರುವ ಪ್ರಚಾರ ಇಲಾಖೆ ಆಯುಕ್ತರಾದ ಡಾ. ಪಿ. ಎಸ್. ಹರ್ಷ
Follow us on

ಮೈಸೂರು: ಜಿಲ್ಲೆಯಿಂದ ಸುಮಾರು 6 ಕಿ. ಮೀ ಅಂತರದಲ್ಲಿರುವ ಹಾಲಾಳು ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರುವ ಖ್ಯಾತ ನಟ, ಸಾಹಸ ಸಿಂಹ ವಿಷ್ಣುವರ್ಧನ್ ಸ್ಮಾರಕ ಸ್ಥಳಕ್ಕೆ ವಾರ್ತಾ ಮತ್ತು ಪ್ರಚಾರ ಇಲಾಖೆ ಆಯುಕ್ತರಾದ ಡಾ. ಪಿ. ಎಸ್. ಹರ್ಷ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇಮೇಜ್ ಗ್ಯಾಲರಿ ಮತ್ತು ಸಭಾಂಗಣದ ಕಾಮಗಾರಿ ಆರಂಭಗೊಂಡಿದ್ದು, ವಿಶ್ವ ದರ್ಜೆಯ ಸ್ಮಾರಕ ಸ್ಥಳ ಇದಾಗಬೇಕೆಂಬ ಆಶಯ ತಮ್ಮದಾಗಿದೆ ಎಂದು ಡಾ. ಹರ್ಷ ತಿಳಿಸಿದ್ದು, ರಾಜ್ಯ ಸರ್ಕಾರವೂ ಸಹ ಈ ನಿಟ್ಟಿನಲ್ಲಿ ಅತೀವ ಆಸಕ್ತಿ ವಹಿಸುತ್ತಿದೆ ಎಂದು ಹೇಳಿದರು.

ಸುಮಾರು 11 ಕೋಟಿ ರೂಪಾಯಿ ಯೋಜನೆ ಇದಾಗಿದ್ದು , 5 ಎಕರೆ ವಿಶಾಲ ಪ್ರದೇಶದಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಷ್ಣು ಸ್ಮಾರಕವನ್ನು ಅತ್ಯಂತ ಕ್ಷಿಪ್ರವಾಗಿ ಹಾಗೂ ಉತ್ಕೃಷ್ಟವಾಗಿ ನಾಡಿಗೆ ನೀಡುವ ಸಂಕಲ್ಪಕ್ಕೆ ವಾರ್ತಾ ಇಲಾಖೆ ಕಟ್ಟುಬದ್ಧವಾಗಿದೆ ಎಂದು ಹರ್ಷ ತಿಳಿಸಿದ್ದಾರೆ.

ಸ್ಥಳ ಪರಿಶೀಲನೆ ನಡೆಸುತ್ತಿರುವ ಅಧಿಕಾರಿಗಳು

ಪೊಲೀಸ್ ಗೃಹ ನಿರ್ಮಾಣ ಸಂಸ್ಥೆ ಕೈಗೆತ್ತಿಕೊಂಡಿರುವ ಈ ಕಾಮಗಾರಿಯ ನಿರ್ವಹಣೆಯನ್ನು ರೇವನಿ ಪ್ರಸಾದ್ ಕನ್ಸ್ಟ್ರಕ್ಷನ್ ಕಂಪನಿ ಮಾಡುತ್ತಿದ್ದು, 11 ತಿಂಗಳ ಒಳಗಾಗಿ ಕನ್ನಡ ನಾಡಿಗೆ ಸಾಹಸ ಸಿಂಹ ವಿಷ್ಣುವರ್ಧನ್ ಸ್ಮಾರಕ ಸಮರ್ಪಣೆ ಮಾಡಲಿದೆ ಎಂದು ಹೇಳಿದರು.

ವಾರ್ತಾ ಆಯುಕ್ತರ ಈ ಪರಿಶೀಲನಾ ಭೇಟಿಯ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಹಾಯಕ ಇಂಜಿನಿಯರುಗಳಾದ ಮಂಜುನಾಥ್ ಸ್ಮಾರಕದ ರೂಪುರೇಷೆಗಳನ್ನು ನಕ್ಷೆಯೊಂದಿಗೆ ವಿವರಿಸಿದ್ದು, ವಾರ್ತಾ ಅಧಿಕಾರಿ ವಿಜಯಾನಂದ್ ಹಾಗೂ ಅಶೋಕ್ ಕುಮಾರ್ ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು.

 

ಡಾ.ವಿಷ್ಣು ಅಭಿಮಾನಿಗಳಿಗೆ ಸಿಹಿ ಸುದ್ದಿ: ಧ್ವಂಸವಾದ ಜಾಗದಲ್ಲೇ ಮತ್ತೆ ತಲೆ ಎತ್ತಲಿದೆ ಸಾಹಸಸಿಂಹನ ಪ್ರತಿಮೆ