AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬೇಡ್ಕರ್ ಪ್ರತಿಮೆಗೆ ಅಪಮಾನ: ಸಿಡಿದೆದ್ದ ದಲಿತ ಮುಖಂಡರು: ಕಲಬುರಗಿಯಲ್ಲಿ ಉದ್ರಿಕ್ತ ಪರಿಸ್ಥಿತಿ

ಕಲಬುರಗಿ ನಗರದಲ್ಲಿ ಕೋಟನೂರ ಡಿ ಬಳಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಖಂಡಿಸಿ ದಲಿತ ಮುಖಂಡರು ಸಿಡಿದೆದ್ದಿದ್ದು, ಟೈಯರ್​ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಬಿಜೆಪಿ ವಿಧಾನಪರಿಷತ್​ ಸದಸ್ಯ ಮಾಲೀಕತ್ವದ ಪೆಟ್ರೋಲ್ ಬಂಕ್​ನ ಗಾಜು ಪುಡಿ ಪುಡಿ ಮಾಡಿದ್ದಾರೆ. ಇದರಿಂದ ಕಲಬುರಗಿ ನಗರದಲ್ಲಿ ಉದ್ರಿಕ್ತ ಪರಿಸ್ಥಿತಿ ನಿರ್ಮಾಣವಾಗಿದೆ.

ಅಂಬೇಡ್ಕರ್ ಪ್ರತಿಮೆಗೆ ಅಪಮಾನ: ಸಿಡಿದೆದ್ದ ದಲಿತ ಮುಖಂಡರು: ಕಲಬುರಗಿಯಲ್ಲಿ ಉದ್ರಿಕ್ತ ಪರಿಸ್ಥಿತಿ
ದಲಿತ ಸಮುದಾಯದವರಿಂದ ಪ್ರತಿಭಟನೆ
ದತ್ತಾತ್ರೇಯ ಪಾಟೀಲ್​
| Edited By: |

Updated on: Jan 23, 2024 | 5:09 PM

Share

ಕಲಬುರಗಿ, ಜನವರಿ 23: ನಗರದಲ್ಲಿ ಕೋಟನೂರ ಡಿ ಬಳಿ ಅಂಬೇಡ್ಕರ್ ಪ್ರತಿಮೆ (Ambedkar statue) ಗೆ ಅಪಮಾನ ಖಂಡಿಸಿ ದಲಿತ ಮುಖಂಡರು ಸಿಡಿದೆದ್ದಿದ್ದು, ಟೈಯರ್​ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಬಿಜೆಪಿ ವಿಧಾನಪರಿಷತ್​ ಸದಸ್ಯ ಮಾಲೀಕತ್ವದ ಪೆಟ್ರೋಲ್ ಬಂಕ್​ನ ಗಾಜು ಪುಡಿ ಪುಡಿ ಮಾಡಿದ್ದಾರೆ. ಇದರಿಂದ ಕಲಬುರಗಿ ನಗರದಲ್ಲಿ ಉದ್ರಿಕ್ತ ಪರಿಸ್ಥಿತಿ ನಿರ್ಮಾಣವಾಗಿದೆ. ಜಗತ್ ಸರ್ಕಲ್ ಬಳಿ ಗೂಡ್ಸ್ ವಾಹನದ ಮೇಲೆ, ಗೂಡ್ಸ್ ವಾಹನಕ್ಕೆ ಕಲ್ಲುತೂರಾಟ ಮಾಡಲಾಗಿದೆ. ಬಲವಂತವಾಗಿ ಅಂಗಡಿ ಮುಗ್ಗಟ್ಟುಗಳನ್ನು ಪ್ರತಿಭಟನಾಕಾರರು ಬಂದ್ ಮಾಡಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ಮಾಡಿದ್ದಾರೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ: ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್

ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್​ ಮಾತನಾಡಿ, ಪ್ರತಿಮೆಗೆ ಅಪಮಾನ ಮಾಡಿದ ಕಿಡಿಗೇಡಿಗಳನ್ನು ಬಂಧಿಸಿಬೇಕು. ಪ್ರತಿಮೆಗೆ ಅಪಮಾನ ಆಗದಂತೆ ಸರ್ಕಾರ ಮುನ್ನೆಚ್ಚರಿಕೆ ವಹಿಸಲಿ. ಶ್ರೀರಾಮನ ಭಾವಚಿತ್ರ ಹರಿದು ಹಾಕುವ ಪ್ರಕರಣ ಹೆಚ್ಚಾಗುತ್ತಿದೆ. ಕಾಂಗ್ರೆಸ್​ನವರ ಮನಸ್ಥಿತಿ ಎತ್ತ ಸಾಗುತ್ತಿದೆ ಅಂತಾ ಗೊತ್ತಾಗುತ್ತೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಹೇಳಿದ್ದಾರೆ.

ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರತಿಭಟನೆ

ವಿಜಯಪುರ: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಕ್ಷರ ದಾಸೋಹ ಅಡುಗೆ ಸಿಬ್ಬಂದಿಗಳಿಂದ ಸಂಸದ ರಮೇಶ ಜಿಗಜಿಣಗಿ ಕಚೇರಿ ಎದುರು ಪ್ರತಿಭಟನೆ ಮಾಡಲಾಗಿದೆ. ಕೇಂದ್ರ ಸರ್ಕಾರ ನಮ್ಮ ವೇತನ ಹೆಚ್ಚಳ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಶ್ರೀರಾಮ ಮೆರವಣಿಗೆ ವೇಳೆ ಗಲಾಟೆ: ಕಲಬುರಗಿ ಜಿಲ್ಲೆ ವಾಡಿ ಪಟ್ಟಣದಲ್ಲಿ ನಿಷೇದಾಜ್ಞೆ ಜೊತೆಗೆ ಮದ್ಯ ಮಾರಾಟ ನಿಷೇಧ

ಅಂಗನವಾಡಿ ಹಾಗೂ ಅಕ್ಷರ ದಾಸೋಹ ಅಡುಗೆ ಸಿಬ್ಬಂದಿಗೆ ಚುನಾವಣೆ ಕೆಲಸ, ಸರ್ವೇ ಕಾರ್ಯ ಹಾಗೂ ಇತರೆ ಕೆಲಸ ಹಚ್ಚುತ್ತಿರುವುದಕ್ಕೆ ಆಕ್ರೋಶ ಹೊರಹಾಕಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ದ ಮಹಿಳೆಯರು ಧಿಕ್ಕಾರ ಕೂಗಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು: ಡಿಸಿ ಕಚೇರಿ ಬಳಿ ಹೋಮ ಮಾಡಿ, ಮುತ್ತಿಗೆ ಹಾಕಿದ್ದ ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ FIR

ಐಸಿಬಿಎಸ್ ಅನುದಾನ ಕಡಿತ ಮಾಡುತ್ತಿರುವ ಕೇಂದ್ರ ಸರ್ಕಾರ ಕ್ರಮ ಸರಿಯಲ್ಲಾ ಎಂದು ಆರೋಪ ಮಾಡಿದ್ದು, ಕೂಡಲೇ ವೇತನ ಹೆಚ್ಚಳ ಮಾಡಬೇಕೆಂದು. ಸಂಸದರು ನಮ್ಮ ಮನವಿ ಪತ್ರ ಸ್ವೀಕರಿಸಬೇಕೆಂದು ಆಗ್ರಹಿಸಿದ್ದಾರೆ. ಮನವಿ ಪತ್ರ ಸ್ವೀಕರಿಸುವವರೆಗೂ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಪಟ್ಟು ಹಿಡಿದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ದತ್ತಾತ್ರೇಯ ಪಾಟೀಲ್​
ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್