ಕಲಬುರಗಿ, ಜನವರಿ 23: ನಗರದಲ್ಲಿ ಕೋಟನೂರ ಡಿ ಬಳಿ ಅಂಬೇಡ್ಕರ್ ಪ್ರತಿಮೆ (Ambedkar statue) ಗೆ ಅಪಮಾನ ಖಂಡಿಸಿ ದಲಿತ ಮುಖಂಡರು ಸಿಡಿದೆದ್ದಿದ್ದು, ಟೈಯರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಬಿಜೆಪಿ ವಿಧಾನಪರಿಷತ್ ಸದಸ್ಯ ಮಾಲೀಕತ್ವದ ಪೆಟ್ರೋಲ್ ಬಂಕ್ನ ಗಾಜು ಪುಡಿ ಪುಡಿ ಮಾಡಿದ್ದಾರೆ. ಇದರಿಂದ ಕಲಬುರಗಿ ನಗರದಲ್ಲಿ ಉದ್ರಿಕ್ತ ಪರಿಸ್ಥಿತಿ ನಿರ್ಮಾಣವಾಗಿದೆ. ಜಗತ್ ಸರ್ಕಲ್ ಬಳಿ ಗೂಡ್ಸ್ ವಾಹನದ ಮೇಲೆ, ಗೂಡ್ಸ್ ವಾಹನಕ್ಕೆ ಕಲ್ಲುತೂರಾಟ ಮಾಡಲಾಗಿದೆ. ಬಲವಂತವಾಗಿ ಅಂಗಡಿ ಮುಗ್ಗಟ್ಟುಗಳನ್ನು ಪ್ರತಿಭಟನಾಕಾರರು ಬಂದ್ ಮಾಡಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ಮಾಡಿದ್ದಾರೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಮಾತನಾಡಿ, ಪ್ರತಿಮೆಗೆ ಅಪಮಾನ ಮಾಡಿದ ಕಿಡಿಗೇಡಿಗಳನ್ನು ಬಂಧಿಸಿಬೇಕು. ಪ್ರತಿಮೆಗೆ ಅಪಮಾನ ಆಗದಂತೆ ಸರ್ಕಾರ ಮುನ್ನೆಚ್ಚರಿಕೆ ವಹಿಸಲಿ. ಶ್ರೀರಾಮನ ಭಾವಚಿತ್ರ ಹರಿದು ಹಾಕುವ ಪ್ರಕರಣ ಹೆಚ್ಚಾಗುತ್ತಿದೆ. ಕಾಂಗ್ರೆಸ್ನವರ ಮನಸ್ಥಿತಿ ಎತ್ತ ಸಾಗುತ್ತಿದೆ ಅಂತಾ ಗೊತ್ತಾಗುತ್ತೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಹೇಳಿದ್ದಾರೆ.
ವಿಜಯಪುರ: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಕ್ಷರ ದಾಸೋಹ ಅಡುಗೆ ಸಿಬ್ಬಂದಿಗಳಿಂದ ಸಂಸದ ರಮೇಶ ಜಿಗಜಿಣಗಿ ಕಚೇರಿ ಎದುರು ಪ್ರತಿಭಟನೆ ಮಾಡಲಾಗಿದೆ. ಕೇಂದ್ರ ಸರ್ಕಾರ ನಮ್ಮ ವೇತನ ಹೆಚ್ಚಳ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಶ್ರೀರಾಮ ಮೆರವಣಿಗೆ ವೇಳೆ ಗಲಾಟೆ: ಕಲಬುರಗಿ ಜಿಲ್ಲೆ ವಾಡಿ ಪಟ್ಟಣದಲ್ಲಿ ನಿಷೇದಾಜ್ಞೆ ಜೊತೆಗೆ ಮದ್ಯ ಮಾರಾಟ ನಿಷೇಧ
ಅಂಗನವಾಡಿ ಹಾಗೂ ಅಕ್ಷರ ದಾಸೋಹ ಅಡುಗೆ ಸಿಬ್ಬಂದಿಗೆ ಚುನಾವಣೆ ಕೆಲಸ, ಸರ್ವೇ ಕಾರ್ಯ ಹಾಗೂ ಇತರೆ ಕೆಲಸ ಹಚ್ಚುತ್ತಿರುವುದಕ್ಕೆ ಆಕ್ರೋಶ ಹೊರಹಾಕಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ದ ಮಹಿಳೆಯರು ಧಿಕ್ಕಾರ ಕೂಗಿದ್ದಾರೆ.
ಇದನ್ನೂ ಓದಿ: ಚಿಕ್ಕಮಗಳೂರು: ಡಿಸಿ ಕಚೇರಿ ಬಳಿ ಹೋಮ ಮಾಡಿ, ಮುತ್ತಿಗೆ ಹಾಕಿದ್ದ ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ FIR
ಐಸಿಬಿಎಸ್ ಅನುದಾನ ಕಡಿತ ಮಾಡುತ್ತಿರುವ ಕೇಂದ್ರ ಸರ್ಕಾರ ಕ್ರಮ ಸರಿಯಲ್ಲಾ ಎಂದು ಆರೋಪ ಮಾಡಿದ್ದು, ಕೂಡಲೇ ವೇತನ ಹೆಚ್ಚಳ ಮಾಡಬೇಕೆಂದು. ಸಂಸದರು ನಮ್ಮ ಮನವಿ ಪತ್ರ ಸ್ವೀಕರಿಸಬೇಕೆಂದು ಆಗ್ರಹಿಸಿದ್ದಾರೆ. ಮನವಿ ಪತ್ರ ಸ್ವೀಕರಿಸುವವರೆಗೂ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಪಟ್ಟು ಹಿಡಿದಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.