AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashtrakavi KuVemPu: ಕುವೆಂಪು ಅವರನ್ನು ನಿಂದಿಸಿ, ನಾಡಗೀತೆಯ ತಿರುಚಿ ಬರೆದವರ ವಿರುದ್ಧ ಸರ್ಕಾರ ಕ್ರಮ ಜರುಗಿಸಲಿ: ಆದಿಚುಂಚನಗಿರಿ ಸ್ವಾಮೀಜಿ ಒತ್ತಾಯ

Adichunchanagiri Mutt Shree Dr. Nirmalanandanatha Maha Swamiji: ರಾಷ್ಟ್ರಕವಿ ಕುವೆಂಪು ಅವರನ್ನು ನಿಂದಿಸಿ, ನಾಡಗೀತೆಯನ್ನು ತಿರುಚಿ ಬರೆದಿರುವವರ ವಿರುದ್ಧ ಸರ್ಕಾರ ಕ್ರಮ ಜರುಗಿಸುವುದೆಂದು ಭಾವಿಸುವುದಾಗಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಮಾಧ್ಯಮ ಹೇಳಿಕೆ ಮೂಲಕ ಒತ್ತಾಯಿಸಿದ್ದಾರೆ

Rashtrakavi  KuVemPu: ಕುವೆಂಪು ಅವರನ್ನು ನಿಂದಿಸಿ, ನಾಡಗೀತೆಯ ತಿರುಚಿ ಬರೆದವರ ವಿರುದ್ಧ ಸರ್ಕಾರ ಕ್ರಮ ಜರುಗಿಸಲಿ: ಆದಿಚುಂಚನಗಿರಿ ಸ್ವಾಮೀಜಿ ಒತ್ತಾಯ
ರಾಷ್ಟ್ರಕವಿ ಕುವೆಂಪು ಅವರನ್ನು ನಿಂದಿಸಿ, ನಾಡಗೀತೆಯ ತಿರುಚಿ ಬರೆದಿರುವವರ ವಿರುದ್ಧ ಸರ್ಕಾರ ಕ್ರಮ ಜರುಗಿಸಲಿ: ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಸ್ವಾಮೀಜಿ
TV9 Web
| Edited By: |

Updated on:May 28, 2022 | 10:31 PM

Share

ರಾಷ್ಟ್ರಕವಿ ಕುವೆಂಪು ಅವರನ್ನು (Rashtrakavi KuVemPu) ನಿಂದಿಸಿ, ನಾಡಗೀತೆಯನ್ನು ತಿರುಚಿ ಬರೆದಿರುವವರ ವಿರುದ್ಧ ಸರ್ಕಾರ ಕ್ರಮ ಜರುಗಿಸುವುದೆಂದು ಭಾವಿಸುವುದಾಗಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು (Adichunchanagiri Mutt Shree Dr. Nirmalanandanatha Maha Swamiji) ಮಾಧ್ಯಮ ಹೇಳಿಕೆ ಮೂಲಕ ಒತ್ತಾಯಿಸಿದ್ದಾರೆ.

ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಮಾಧ್ಯಮ ಹೇಳಿಕೆ ಪೂರ್ಣ ಪಾಠ ಹೀಗಿದೆ: ನಮ್ಮ ನಾಡು ಕಂಡ ಅಪ್ರತಿಮ ಕವಿ, ದಾರ್ಶನಿಕ, ಸರ್ವೋದಯ ತತ್ವ ಪ್ರತಿಪಾದಕರಾದ ರಾಷ್ಟ್ರಕವಿ ಕುವೆಂಪು ಅವರು ಕನ್ನಡ ಸಾಹಿತ್ಯದ ಮೇರು ಕವಿಗಳು; ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು. ಅವರ ಸಾಹಿತ್ಯ ಸರ್ವರನ್ನೂ ಒಳಗೊಳ್ಳುವ, ಸರ್ವರಹಿತ ಬಯಸುವ ಕ್ರಾಂತದೃಷ್ಟಿಯನ್ನು ಹೊಂದಿದೆ. ಸಾಮಾಜಿಕ, ಆರ್ಥಿಕ, ಧಾರ್ಮಿಕ ಅಸಮಾನತೆಯನ್ನು ಮತ್ತು ಲಿಂಗಭೇದವನ್ನು ನಿವಾರಿಸಿಕೊಂಡು ಈ ನಾಡು “ಸರ್ವಜನಾಂಗದ ಶಾಂತಿಯ ತೋಟ”ವಾಗಬೇಕು ಎಂಬ ಕನಸು ಕಂಡವರು ಅವರು.

ಅವರ ‘ಕಾನೂರು ಹೆಗ್ಗಡತಿ’ ಮತ್ತು ‘ಮಲೆಗಳಲ್ಲಿ ಮದುಮಗಳು’ ಮಹಾಕಾದಂಬರಿಗಳು, ‘ಶೂದ್ರ ತಪಸ್ವಿ’, ‘ಜಲಗಾರ’, ‘ಬೆರಳ್ಗೆ ಕೊರಳ್’ ಮುಂತಾದ ಶ್ರೇಷ್ಠ ನಾಟಕಗಳು, ‘ರಾಮಾಯಣ ದರ್ಶನಂ’ ಮಹಾಕಾವ್ಯ ಹಾಗೂ ಸಾವಿರಾರು ಪದ್ಯಗಳು, ಲೇಖನಗಳ ಮೂಲಕ ಕನ್ನಡ ಸಾಹಿತ್ಯದ ಕ್ಷಿತಿಜವನ್ನು ವಿಸ್ತರಿಸಿದ ಮಹಾಕವಿ ಕುವೆಂಪು.

ಅವರು ತಮ್ಮ ಯೌವನದ ಕಾಲದಲ್ಲಿ ಬರೆದ ‘ಜೈ ಭಾರತ ಜನನಿಯ ತನುಜಾತೆ’ ಕವಿತೆಯು ಕಳೆದ ತೊಂಬತ್ತು ವರ್ಷಗಳಿಂದ ಕನ್ನಡಿಗರ ಹೃದಯದಲ್ಲಿ ನೆಲೆನಿಂತು, ದೇಶಭಕ್ತಿ ಮತ್ತು ನಾಡಪ್ರೇಮವನ್ನು ಉದ್ದೀಪಿಸಿದೆ. ಇದನ್ನು ಮನಗಂಡು ಕರ್ನಾಟಕ ಸರ್ಕಾರವು ‘ಜೈ ಭಾರತ ಜನನಿಯ ತನುಜಾತೆ’ ಗೀತೆಯನ್ನು ನಾಡಗೀತೆಯಾಗಿ ಘೋಷಿಸಿತು. ಅದನ್ನು ನಾಡಗೀತೆಯಾಗಿ ಘೋಷಣೆ ಮಾಡಬೇಕು ಎಂದು ಯಾರೂ ಕೇಳಿರಲಿಲ್ಲ. ಅದು ಸರ್ಕಾರವೇ ತೆಗೆದುಕೊಂಡ ತೀರ್ಮಾನವಾಗಿತ್ತು. ಕನ್ನಡ ಮತ್ತು ಕನ್ನಡಿಗರ ಅಸ್ಮಿತೆಯಾಗಿರುವ ಅಧಿಕೃತ ನಾಡಗೀತೆಯನ್ನು ಹಾಡಿ ಕೋಟಿ ಕೋಟಿ ಕನ್ನಡಿಗರು ಸಂಭ್ರಮಿಸಿದ್ದಾರೆ, ಸಂಭ್ರಮಿಸುತ್ತಿದ್ದಾರೆ.

ಆದರೆ ಈಚೆಗೆ ಕೆಲವರು ನಾಡಗೀತೆಯನ್ನು ತಿರುಚಿ ಬರೆದು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವುದು ಸರ್ಕಾರದ ತೀರ್ಮಾನವನ್ನು ಗೇಲಿ ಮಾಡುತ್ತಿರುವಂತಿದೆ. ಅಷ್ಟೇ ಅಲ್ಲ, ಮಹಾಕವಿಗಳೂ ರಾಷ್ಟ್ರಕವಿಗಳೂ ಆಗಿರುವ ಕುವೆಂಪು ಅವರ ಬಗ್ಗೆ ಅತ್ಯಂತ ಕೀಳುಭಾಷೆಯಲ್ಲಿ ಅವಹೇಳನಕಾರಿ ಲೇಖನಗಳನ್ನು ಬರೆದಿದ್ದಾರೆ. ನಾಡಗೀತೆಯನ್ನು ಅವಮಾನಿಸುವುದೆಂದರೆ ರಾಷ್ಟ್ರಗೀತೆಯನ್ನು ಅವಮಾನಿಸಿದಂತೆ; ಹಾಗೂ ನೆಲದ ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ.

ಪ್ರಯುಕ್ತ, ರಾಷ್ಟ್ರಕವಿ ಕುವೆಂಪು ಅವರನ್ನು ಅಸಂಸದೀಯ ಭಾಷೆಯಲ್ಲಿ ನಿಂದಿಸಿ ಲೇಖನ ಬರೆದಿರುವ ಮತ್ತು ನಾಡಗೀತೆಯನ್ನು ತಿರುಚಿ ಬರೆದಿರುವವರ ವಿರುದ್ಧ ಸೈಬರ್ ಕ್ರೈಮ್ ಅಡಿಯಲ್ಲಿ ಕಾನೂನು ಪ್ರಕಾರ ಸರ್ಕಾರವು ಕ್ರಮ ಜರುಗಿಸುತ್ತದೆಂದು ಭಾವಿಸುತ್ತೇವೆ. ಹಾಗೂ ಈ ಮೂಲಕ ಸರ್ಕಾರವು ಕಾನೂನು ಮತ್ತು ವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಾಳಿ ಮಾಡುವವರನ್ನು ಕ್ಷಮಿಸುವುದಿಲ್ಲ ಎಂಬ ಸಂದೇಶ ರವಾನಿಸುತ್ತದೆ ಎಂಬುದು ನಮ್ಮ ಅಭಿಲಾಷೆಯಾಗಿದೆ.

Published On - 10:02 pm, Sat, 28 May 22

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​