ಸಾರಿಗೆ ನೌಕರರ ಮುಷ್ಕರ ನಿಲ್ಲಿಸದಿದ್ದರೆ ‘ಅಂತರ್ ನಿಗಮ ವರ್ಗಾವಣೆ’ ಪರಿಗಣಿಸದಿರಲು ತೀರ್ಮಾನ!
ರಾಜ್ಯದಲ್ಲಿ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಮತ್ತೊಂದು ಅಸ್ತ್ರ ಪ್ರಯೋಗಕ್ಕೆ ಮುಂದಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಮತ್ತೊಂದು ಅಸ್ತ್ರ ಪ್ರಯೋಗಕ್ಕೆ ಮುಂದಾಗಿದೆ. ‘ಅಂತರ್ ನಿಗಮ ವರ್ಗಾವಣೆ’ ಪರಿಗಣಿಸದಿರಲು ತೀರ್ಮಾನ ಕೈಗೊಂಡಿದೆ. ಸಾರಿಗೆ ನೌಕರರು ಕೋರಿಕೆ ಮೇರೆಗೆ ವರ್ಗಾವಣೆಯಾಗಿದ್ದಾರೆ. ವರ್ಗಾವಣೆಯಾದವರು ಕೂಡಲೇ ಕೆಲಸಕ್ಕೆ ಹಾಜರಾಗಬೇಕು. ವರ್ಗಾವಣೆಯ ಈ ಹಿಂದಿನ ಆದೇಶವನ್ನು ರದ್ದುಪಡಿಸಿ, ಮತ್ತೆ ಮೂಲ ಸ್ಥಳಕ್ಕೆ ವಾಪಸ್ ಕಳಿಸುವುದಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ.
ಸಾರಿಗೆ ನೌಕರರ ಮುಷ್ಕರಕ್ಕೆ ಪ್ರಚೋದನೆ ನೀಡಿ ಕರ್ತವ್ಯ ನಿರ್ವಹಿಸುತ್ತಿರುವ ಸಹ ಸಿಬ್ಬಂದಿಗಳಿಗೆ ಬೆದರಿಕೆ ಹಾಕಿ, ಬಸ್ಸುಗಳ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಸಾರಿಗೆ ಸೇವೆ ಒದಗಿಸುವಲ್ಲಿ ತೊಂದರೆ ಮಾಡುತ್ತಿರುವ ನೌಕರರ ಅಂತರ ನಿಗಮ ವರ್ಗಾವಣೆ ಕೋರಿಕೆಯನ್ನು ಪರಿಗಣಿಸದಿರಲು ತೀರ್ಮಾನ ಮಾಡಲಾಗಿದೆ. ಈಗಾಗಲೇ ಕೋರಿಕೆ ಮೇರೆಗೆ ಅಂತರ ವಿಭಾಗ ವರ್ಗಾವಣೆಗೊಂಡು, ವಿಭಾಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಈ ಅವಧಿಯಲ್ಲಿ ಕೂಡಲೇ ಕರ್ತವ್ಯಕ್ಕೆ ಹಾಜರಾಗದಿದ್ದಲ್ಲಿ ಹೊರಡಿಸಿರುವ ಆದೇಶವನ್ನು ರದ್ದುಗೊಳಿಸಿ, ಮೂಲ ವಿಭಾಗಕ್ಕೆ ಮರು ವರ್ಗಾವಣೆಗೆ ಕೆಎಸ್‌ಆರ್‌ಟಿಸಿ ಮುಂದಾಗಿದೆ.
ಮೈಸೂರಿನಲ್ಲಿ ಅಧಿಕಾರಿಗಳ ವಿರುದ್ಧ ಖಾಸಗಿ ವಾಹನ ಚಾಲಕರ ವಾಗ್ವಾದ ಮೈಸೂರಿನಲ್ಲಿ ಕೆಲ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳ ಜತೆ ಚಾಲಕರ ವಾಗ್ವಾದ ನಡೆದಿದೆ. ನಾವು ಬೆಳಗ್ಗೆಯಿಂದ ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದೇವೆ. ಎಲ್ಲರೂ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಈಗ ನಮ್ಮ ಗತಿ ಏನೆಂದು ಸಾರಿಗೆ ಅಧಿಕಾರಿಗಳಿಗೆ ಪ್ರಶ್ನೆ ಮಾಡಿದ್ದಾರೆ.
ಇದನ್ನೂ ಓದಿ: ಸಾರಿಗೆ ಮುಷ್ಕರ.. ಕರ್ನಾಟಕ ಮೂಲದ ಭಕ್ತರು ನೆರೆಯ ಶ್ರೀಶೈಲಂನಲ್ಲಿ ಪರದಾಡುತ್ತಿದ್ದಾರೆ, ಸರ್ಕಾರ ಮೌನವಾಗಿದೆ!
ಸಾರಿಗೆ ಮುಷ್ಕರ; ಕೋಡಿಹಳ್ಳಿ ಚಂದ್ರಶೇಖರ್ಗೆ 10 ಲಕ್ಷ ರೂ. ಪರಿಹಾರ ಕೇಳಿ ಲೀಗಲ್ ನೋಟಿಸ್ ನೀಡಿದ ಬಿ.ಇ. ವಿದ್ಯಾರ್ಥಿನಿ