AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ಚಿತ್ರ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಟಿ. ಶಿವಪ್ರಸಾದ್ ನಿಧನ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ್ದ, ಅಂತಾರಾಷ್ಟ್ರೀಯ ಚಿತ್ರ ಕಲಾವಿದ ಕೆ.ಟಿ.ಶಿವಪ್ರಸಾದ್(77) ನಮ್ಮನ್ನು ಅಗಲಿದ್ದಾರೆ. ಚಿತ್ರಕಲೆಯ ಜೊತೆಗೆ ಸಮಾಜಮುಖಿ ಹೋರಾಟಗಳಲ್ಲಿ ಸಕ್ರಿಯರಾಗಿದ್ದ ಶಿವಪ್ರಸಾದ್ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಆಪ್ತರಾಗಿದ್ದರು. ತಮ್ಮ ಕಲಾ ಪ್ರೌಡಿಮೆಯಿಂದ ಅಂತಾರಾಷ್ಟ್ರೀಯ ಮನ್ನಣೆಗಳಿಸಿದ್ದ ಕೆ.ಟಿ.ಶಿವಪ್ರಸಾದ್ ಅವರ ಚಿತ್ರಕಲೆ ಫೋಟೋಗಳು ಲಕ್ಷಾಂತರ ರೂಗಳಿಗೆ ಮಾರಾಟವಾಗುತ್ತಿದ್ದವು.

ಖ್ಯಾತ ಚಿತ್ರ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಟಿ. ಶಿವಪ್ರಸಾದ್ ನಿಧನ
Kt Shivaprasad
ಮಂಜುನಾಥ ಕೆಬಿ
| Edited By: |

Updated on: Jun 30, 2026 | 4:39 PM

Share

ಮುಖ್ಯಾಂಶಗಳು

  • ಕರ್ನಾಟಕದ ಅಂತಾರಾಷ್ಟ್ರೀಯ ಚಿತ್ರ ಕಲಾವಿದ ಕೆ.ಟಿ.ಶಿವಪ್ರಸಾದ್(77) ನಿಧನ
  • ಅನಾರೋಗ್ಯ ಬಳಲುತ್ತಿದ್ದ ಕೆ.ಟಿ.ಶಿವಪ್ರಸಾದ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರು
  • ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ್ದ ಕೆ.ಟಿ.ಶಿವಪ್ರಸಾದ್, ಪೂರ್ಣಚಂದ್ರ ತೇಜಸ್ವಿ ಆಪ್ತರಾಗಿದ್ದರು

ಹಾಸನ, (ಜೂನ್ 30): ಕಲಾ ಪ್ರಪಂಚದಲ್ಲಿ ಜಾಗತಿಕ ಮಟ್ಟದ ಐಕಾನ್ ಆಗಿ ಗುರುತಿಸಿಕೊಂಡಿದ್ದ, ಗ್ರಾಮೀಣ ಸೊಗಡಿನ ಜೊತೆಗೆ ಆಧುನಿಕ ಕಲೆಯನ್ನು ಬೆಸೆದ ಕರ್ನಾಟಕದ ಹೆಮ್ಮೆಯ ಅಂತಾರಾಷ್ಟ್ರೀಯ ಚಿತ್ರ ಕಲಾವಿದ ಕೆ.ಟಿ. ಶಿವಪ್ರಸಾದ್ (KT Shivaprasad) ಅವರು ನಿಧನರಾಗಿದ್ದಾರೆ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕೆ.ಟಿ.ಶಿವಪ್ರಸಾದ್ ಅವರು ಇಂದು (ಜೂನ್ 30) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ತಳಸಮುದಾಯಗಳ, ರೈತರ ಧ್ವನಿಯಾಗಿ ಕಲೆಯ ಮೂಲಕವೇ ಕ್ರಾಂತಿ ಸೃಷ್ಟಿಸಿದ್ದ ಈ ಅಪರೂಪದ ಪ್ರತಿಭೆ ನಿಧನದಿಂದಾಗಿ ಭಾರತೀಯ ಕಲಾ ರಂಗದ ಸುವರ್ಣ ಅಧ್ಯಾಯವೊಂದು ಕೊನೆಗೊಂಡಂತಾಗಿದೆ.

1947ರಲ್ಲಿ ಕೊಡಗಿನ ಮಡಿಕೇರಿ (ಮರ್ಕಾರ) ತಾಲೂಕಿನ ಬಡ ಕೃಷಿ ಕುಟುಂಬವೊಂದರಲ್ಲಿ ಜನಿಸಿದ ಶಿವಪ್ರಸಾದ್ ಅವರಿಗೆ ಬಾಲ್ಯದಿಂದಲೇ ಚಿತ್ರಕಲೆಯತ್ತ apparel ಆಸಕ್ತಿ ಇತ್ತು. ಆದರೆ ಆ ಕಾಲದಲ್ಲಿ ಚಿತ್ರಕಲೆಗೆ ಅಷ್ಟಾಗಿ ಮನ್ನಣೆ ಇರದ ಕಾರಣ, ಕುಟುಂಬದ ಇಚ್ಛೆಯಂತೆ ಅವರು ಇಂಜಿನಿಯರಿಂಗ್ ಕಾಲೇಜು ಸೇರಬೇಕಾಯಿತು. ಆದರೆ ಕಲೆಯ ಮೇಲಿದ್ದ ಅದಮ್ಯ ಒಲವಿನಿಂದಾಗಿ ಇಂಜಿನಿಯರಿಂಗ್ ಅಧ್ಯಯನವನ್ನು ಅರ್ಧಕ್ಕೆ ಬಿಟ್ಟು, ಮುಂಬೈನ ಪ್ರತಿಷ್ಠಿತ ‘ಸರ್ ಜೆ.ಜೆ. ಸ್ಕೂಲ್ ಆಫ್ ಆರ್ಟ್’ ಸೇರಿದ್ದು, ಅಲ್ಲಿ 1973ರಲ್ಲಿ ಚಿತ್ರಕಲೆಯಲ್ಲಿ ಡಿಪ್ಲೊಮಾ ಪದವಿ ಪಡೆದುಕೊಂಡಿದ್ದಾರೆ.

ಬಳಿಕ ಕೇವಲ ಕೂತು ಬಣ್ಣ ಹಚ್ಚುವ ಕಲಾವಿದರಾಗದೇ, ಕರ್ನಾಟಕದ ಶೋಷಿತ, ಬಡ ಕೃಷಿ ಕಾರ್ಮಿಕರ ಸಬಲೀಕರಣಕ್ಕಾಗಿ ಸೋಷಿಯಲಿಸ್ಟ್, ದಲಿತ ಮತ್ತು ರೈತ ಸಂಘಟನೆಗಳ ಮೂಲಕ ದೀರ್ಘಕಾಲ ಸಕ್ರಿಯ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದರು. ಅವರ ಈ ಸಾಮಾಜಿಕ ಕಳಕಳಿ ಅವರ ಕಲಾಕೃತಿಗಳಲ್ಲೂ ಅರಳುತ್ತಿದ್ದವು.

ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮನ್ನಣೆ

ಶಿವಪ್ರಸಾದ್ ಅವರ ಚಿತ್ರಕಲೆಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮನ್ನಣೆ ಪಡೆದುಕೊಂಡಿವವೆ. ಬ್ರಿಟನ್‌ನ ಶ್ರೇಷ್ಠ ಮಾಡರ್ನಿಸ್ಟ್ ಲುಸಿಯನ್ ಫ್ರಾಯ್ಡ್ ಅವರಿಗೆ ಹೋಲಿಸಲ್ಪಡುತ್ತಿದ್ದ ಕೆ.ಟಿ. ಶಿವಪ್ರಸಾದ್ ಅವರ ಕಲಾಕೃತಿಗಳು ದೇಶ-ವಿದೇಶಗಳಲ್ಲಿ ಅಪಾರ ಪ್ರಶಂಸೆ ಗಳಿಸಿವೆ. ಇಂಜಿನಿಯರಿಂಗ್‌ನ ಅಲ್ಪಾವಧಿಯ ಅನುಭವದಿಂದಾಗಿ ಅವರು ಅತ್ಯುತ್ತಮ ಛಾಯಾಗ್ರಾಹಕ ಹಾಗೂ ಆರ್ಕಿಟೆಕ್ಚರಲ್ ಕನ್ಸಲ್ಟೆಂಟ್ ಆಗಿಯೂ ಗುರುತಿಸಿಕೊಂಡಿದ್ದರು.

1976 ರಿಂದ ಬೆಂಗಳೂರು, ಮೈಸೂರು, ಮುಂಬೈ ಮತ್ತು ನವದೆಹಲಿಗಳಲ್ಲಿ ಇವರ ಹಲವು ಏಕವ್ಯಕ್ತಿ ಪ್ರದರ್ಶನಗಳು ನಡೆದಿವೆ. ಮುಂಬೈನ ಜಹಾಂಗೀರ್ ಆರ್ಟ್ ಗ್ಯಾಲರಿ, ಚೆನ್ನೈನ ಸಾಕ್ಷಿ ಗ್ಯಾಲರಿ ಹಾಗೂ ನವದೆಹಲಿಯ ಆರ್ಟ್ ಟುಡೇಗಳಲ್ಲಿ ಇವರ ಕಲಾ ಪ್ರದರ್ಶನಗಳು ಕಲಾ ರಸಿಕರ ಮನಗೆದ್ದಿದ್ದವು. ಜೊತೆಗೆ ಭೋಪಾಲ್ ಬಿನ್ನಾಲೆ (1988), ಬಾಂಬೆ ಆರ್ಟ್ ಸೊಸೈಟಿ ಶತಮಾನೋತ್ಸವ ಪ್ರದರ್ಶನ (1989) ಹಾಗೂ ಹಾಂಗ್‌ಕಾಂಗ್ ಗ್ಯಾಲರಿಗಳಲ್ಲೂ (1996) ಇವರ ಕಲಾಕೃತಿಗಳು ಪ್ರದರ್ಶನಗೊಂಡಿದ್ದವು. 1996ರಲ್ಲೇ ಜಹಾಂಗೀರ್ ಆರ್ಟ್ ಗ್ಯಾಲರಿಯಲ್ಲಿ ನಡೆದ ಸಮಕಾಲೀನ ಭಾರತೀಯ ಕಲಾವಿದರ ಪ್ರದರ್ಶನದಲ್ಲೂ ಭಾಗವಹಿಸಿದ್ದರು.

ಇನ್ನು ಕಲಾ ಜಗತ್ತಿಗೆ ಇವರು ನೀಡಿದ ಕೊಡುಗೆಯನ್ನು ಗೌರವಿಸಿ ಕರ್ನಾಟಕ ಸರ್ಕಾರವು 2001ರಲ್ಲಿ ಪ್ರತಿಷ್ಠಿತ ‘ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
SIR ಬಗ್ಗೆ ಭಯ ಬೇಡ: ಧೈರ್ಯ ಹೇಳಿದ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್
SIR ಬಗ್ಗೆ ಭಯ ಬೇಡ: ಧೈರ್ಯ ಹೇಳಿದ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಹೆಚ್.ಕೆ ಸುರೇಶ್ ಪ್ರಮಾಣ!
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಹೆಚ್.ಕೆ ಸುರೇಶ್ ಪ್ರಮಾಣ!
ಎಲ್ಲರೂ ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವಂತೆ ನೋಡಿಕೊಳ್ಳಿ ಎಂದ ಡಿಕೆಶಿ!
ಎಲ್ಲರೂ ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವಂತೆ ನೋಡಿಕೊಳ್ಳಿ ಎಂದ ಡಿಕೆಶಿ!
ಬೆಂಗಳೂರಿನಲ್ಲಿ ಫುಟ್​ಪಾತ್ ಅತಿಕ್ರಮಣ ತೆರವಿಗೆ ಇಂದೇ ಗಡುವು
ಬೆಂಗಳೂರಿನಲ್ಲಿ ಫುಟ್​ಪಾತ್ ಅತಿಕ್ರಮಣ ತೆರವಿಗೆ ಇಂದೇ ಗಡುವು
ಮತದಾರರ ಪಟ್ಟಿ ಪರಿಷ್ಕರಣೆ: ಸಿಎಂ ಮನೆಯಿಂದಲೇ ಎಸ್​ಐಆರ್​ಗೆ ಚಾಲನೆ!
ಮತದಾರರ ಪಟ್ಟಿ ಪರಿಷ್ಕರಣೆ: ಸಿಎಂ ಮನೆಯಿಂದಲೇ ಎಸ್​ಐಆರ್​ಗೆ ಚಾಲನೆ!
ವಿವಾಹಿತೆ ಜೊತೆ ಪರಾರಿಯಾದ ಯುವಕನ ಮನೆ ಧ್ವಂಸ: ಕಮಿಷನರ್​​ ಏನಂದ್ರು?
ವಿವಾಹಿತೆ ಜೊತೆ ಪರಾರಿಯಾದ ಯುವಕನ ಮನೆ ಧ್ವಂಸ: ಕಮಿಷನರ್​​ ಏನಂದ್ರು?
ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ
ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ
ನೋಡಿ, ಎಂಥಾ ಅದ್ಭುತ ದೃಶ್ಯ! ಒಂದೇ ಮರದ ಮೇಲೆ ಕುಳಿತ ಎರಡು ಚಿರತೆಗಳು
ನೋಡಿ, ಎಂಥಾ ಅದ್ಭುತ ದೃಶ್ಯ! ಒಂದೇ ಮರದ ಮೇಲೆ ಕುಳಿತ ಎರಡು ಚಿರತೆಗಳು
ಅಡ್ಡಮತದಾನ ಮಾಡಿಲ್ಲ: ಬೇಲೂರು ಬಿಜೆಪಿ ಶಾಸಕ ಸುರೇಶ್ ಆಣೆ-ಪ್ರಮಾಣ
ಅಡ್ಡಮತದಾನ ಮಾಡಿಲ್ಲ: ಬೇಲೂರು ಬಿಜೆಪಿ ಶಾಸಕ ಸುರೇಶ್ ಆಣೆ-ಪ್ರಮಾಣ
ಕಾರವಾರದಲ್ಲಿ ಅಬ್ಬರಿಸಿದ ಮಳೆರಾಯ; ಹಲವೆಡೆ ರಸ್ತೆಗಳು ಜಲಾವೃತ!
ಕಾರವಾರದಲ್ಲಿ ಅಬ್ಬರಿಸಿದ ಮಳೆರಾಯ; ಹಲವೆಡೆ ರಸ್ತೆಗಳು ಜಲಾವೃತ!