ಭಾರತ ಗ್ರೀನ್ ಹೈಡ್ರೋಜನ್​ ಹಬ್ ಆಗಬೇಕಿದೆ: ಪ್ರಲ್ಹಾದ್ ಜೋಶಿ

ಭೂಮಿಯ ಸುರಕ್ಷತೆ ವಿಚಾರದಲ್ಲಿ ಭಾರತ ಜಾಗತಿಕ ನಾಯಕನಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಗ್ರೀನ್​ ಹೈಡ್ರೋಜನ್​ ಮಿಷನ್​​​​ ಅಂತಾರಾಷ್ಟ್ರೀಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಮ್ಮೇಳನದ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ, ಮಾಧ್ಯಮ ಪ್ರತಿನಿಧಿಗಳ ಜತೆ ಕರ್ನಾಟಕ ರಾಜಕೀಯಕ್ಕೆ ಸಂಬಂಧಿಸಿಯೂ ಮಾತನಾಡಿದರು.

ಭಾರತ ಗ್ರೀನ್ ಹೈಡ್ರೋಜನ್​ ಹಬ್ ಆಗಬೇಕಿದೆ: ಪ್ರಲ್ಹಾದ್ ಜೋಶಿ
ಪ್ರಲ್ಹಾದ್ ಜೋಶಿ
Edited By:

Updated on: Sep 04, 2024 | 12:46 PM

ನವದೆಹಲಿ, ಸೆಪ್ಟೆಂಬರ್ 4: ಭಾರತ ಗ್ರೀನ್ ಹೈಡ್ರೋಜನ್​ ಹಬ್ ಆಗಬೇಕಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ದೆಹಲಿಯಲ್ಲಿ ಸೆಪ್ಟೆಂಬರ್ 11ರಿಂದ 13ರ ವರೆಗೆ ನಡೆಯಲಿರುವ ಗ್ರೀನ್​ ಹೈಡ್ರೋಜನ್​ ಮಿಷನ್​​​​ ಅಂತಾರಾಷ್ಟ್ರೀಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಗ್ರೀನ್ ಹೈಡ್ರೋಜನ್​ ಹಬ್​​ನಿಂದ ಸುಸ್ಥಿರ ಭವಿಷ್ಯ ನಿರ್ಮಾಣ ಸಾಧ್ಯ. ಭೂಮಂಡಲ ಸುರಕ್ಷತೆ ವಿಚಾರದಲ್ಲಿ ಭಾರತ ಜಾಗತಿಕ ನಾಯಕನಾಗುತ್ತಿದೆ. ಅಭಿವೃದ್ಧಿ ಹೊಂದಿದ ದೇಶಗಳಂತೆ ಭಾರತವೂ ಹೊಸ ಆವಿಷ್ಕಾರ ಶುರುಮಾಡಿದೆ ಎಂದರು.

ಗ್ರೀನ್​ ಹೈಡ್ರೋಜನ್​ ಮಿಷನ್​​​​ ಅಂತಾರಾಷ್ಟ್ರೀಯ ಸಮ್ಮೇಳನದ ಉತ್ಪನ್ನ ಮತ್ತು ತಂತ್ರಜ್ಞಾನದ ಪ್ರದರ್ಶನದಲ್ಲಿ 120 ಕ್ಕೂ ಹೆಚ್ಚು ಮಳಿಗೆಗಳು ಇರಲಿವೆ. 150ಕ್ಕೂ ಹೆಚ್ಚು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಭಾಷಿಕರು ಭಾಗವಹಿಸಲಿದ್ದಾರೆ.

ಗ್ರೀನ್​ ಹೈಡ್ರೋಜನ್ ಸಂಬಂಧ ಯುರೋಪಿಯನ್ ಯೂನಿಯನ್, ಆಸ್ಟ್ರೇಲಿಯಾ, ಸಿಂಗಾಪುರ್ ಮತ್ತು ನೆದರ್ಲ್ಯಾಂಡ್ಸ್ ಬಗ್ಗೆ ಅಧಿವೇಶನಗಳಲ್ಲಿ ಚರ್ಚೆ ನಡೆಯಲಿದೆ.

ಕಾರ್ಯಕ್ರಮವನ್ನು ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯವು ಭಾರತ ಸರ್ಕಾರದ ಪ್ರಧಾನ ವಿಜ್ಞಾನಿಗಳ ಕಚೇರಿಯ ಸಹಯೋಗದೊಂದಿಗೆ ಆಯೋಜಿಸುತ್ತಿದೆ.

ಕಾಂಗ್ರೆಸ್ ಜತೆಗಿದ್ದಾಗ ಕತ್ತೆ ಕಾಯ್ತಿದ್ದರಾ: ಜೋಶಿ ಪ್ರಶ್ನೆ

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ನಾಯಕರು ಪ್ರಾಸಿಕ್ಯೂಷನ್​ಗೆ ಅನುಮತಿ ಕೇಳಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಎಲ್ಲಾ ವಿಚಾರಗಳನ್ನು ರಾಜ್ಯಪಾಲರು ಪರಿಶೀಲನೆ ಮಾಡುತ್ತಾರೆ ಎಂದರು. ನಾನು ಈಗಾಗಲೇ ಕೇಳಿರುವ ಪ್ರಶ್ನೆಗಳಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಉತ್ತರ ನೀಡಲಿ. ಕುಮಾರಸ್ವಾಮಿ ಪ್ರಕರಣ ನಡೆದಿರೋದು ಯಾವಾಗ? 2006ರಲ್ಲಿ ಹೆಚ್​​ಡಿಕೆ ಪ್ರಕರಣ ನಡೆದಿದೆ ಎಂದರು.
HD Kumaraswamy ಕಾಂಗ್ರೆಸ್ ಜೊತೆ ಇದ್ದಾಗ ನೀವೇನ್ ಕತ್ತೆ ಕಾಯ್ತಿದ್ರಾ ಎಂದ ಸಚಿವ ಜೋಶಿ | #TV9D
2013ರಲ್ಲಿ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದಿತ್ತು. 2018ರಲ್ಲಿ ಕುಮಾರಸ್ವಾಮಿ ಕೈ ಕಾಲು ಹಿಡಿದು ಸಿಎಂ ಮಾಡಿದ್ದರು. ಆಗ ಯಾಕೆ ಹೆಚ್​ಡಿಕೆ ವಿರುದ್ಧ ಪ್ರಾಸಿಕ್ಯೂಷನ್​​ಗೆ ಕೊಡಲಿಲ್ಲ. 8 ವರ್ಷಗಳ ಕಾಲ ಏನೂ ಮಾಡದೆ ಈಗ ಡ್ರಾಮಾ ಮಾಡ್ತಿದ್ದಾರೆ ಎಂದು ಜೋಶಿ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಕೆಐಎಡಿಬಿ ಅಕ್ರಮ ಆರೋಪ: ಛಲವಾದಿ ನಾರಾಯಣಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು

ಮಾಜಿ ಸಚಿವ ಮುರುಗೇಶ್​​ ನಿರಾಣಿ ಮೇಲಿನ ಆರೋಪ ಹಳೆಯದ್ದು. ಛಲವಾದಿ ನಾರಾಯಣಸ್ವಾಮಿ ಮೇಲಿನ ಆರೋಪ 2004ರದ್ದು. ಅಂದಿನಿಂದ ಇಂದಿನವರೆಗೂ ಕಾಂಗ್ರೆಸ್​ನವರು ಏನು ಮಾಡ್ತಿದ್ದರು? ಕಾಂಗ್ರೆಸ್​ನವರ ಡ್ರಾಮಾವನ್ನು ಜನರು ಅರ್ಥ ಮಾಡಿಕೊಳ್ತಾರೆ ಎಂದು ಜೋಶಿ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
Loading...
Unable to load recommendations.
Follow Us