ಇಂದಿನಿಂದ ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್-2ನಿಂದ ವಿಮಾನಗಳ ಹಾರಾಟ ಶುರು, ಏನೆಲ್ಲ ವಿಶೇಷತೆಗಳಿವೆ ಗೊತ್ತಾ?

ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿರುವ ಟರ್ಮಿನಲ್‌-2 ಇನ್ನು ಮುಂದೆ ಸಂಪೂರ್ಣ ಅಂತಾರಾಷ್ಟ್ರೀಯ ವಿಮಾನ ಸೇವೆಗೆ ಮೀಸಲಿಡಲಾಗಿದ್ದು, ಅದು ಇಂದಿನಿಂದ ಅಧಿಕೃತವಾಗಿ ಟರ್ಮಿನಲ್‌-2ನಿಂದ ವಿಮಾನಗಳು ಹಾರಾಟ ಮಾಡಲಿವೆ. ಆಗಮನ ಹಾಗೂ ನಿರ್ಗಮನ ಕಾರ್ಯಾಚರಣೆಯೂ ಟರ್ಮಿನಲ್‌-2 ರಿಂದಲೇ ನಡೆಯಲಿದೆ. ಇನ್ನು ಟರ್ಮಿನಲ್‌-2ನ ವಿಶೇಷತೆಗಳೇನು? ಏನೆಲ್ಲಾ ಸೌಲಭ್ಯಗಳನ್ನು ಹೊಂದಿದೆ ಎನ್ನುವ ಸಂಕ್ಷಿಪ್ತ ವಿವರ ಇಲ್ಲಿದೆ.

ಇಂದಿನಿಂದ ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್-2ನಿಂದ ವಿಮಾನಗಳ ಹಾರಾಟ ಶುರು, ಏನೆಲ್ಲ ವಿಶೇಷತೆಗಳಿವೆ ಗೊತ್ತಾ?
ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Sep 12, 2023 | 9:38 AM

ಬೆಂಗಳೂರು, (ಸೆಪ್ಟೆಂಬರ್ 12): ಬಹು ನಿರೀಕ್ಷಿತ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ (Kempegowda International airport) ಟರ್ಮಿನಲ್-2ನಿಂದ (Terminal 2)  ಅಂತಾರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ಸಜ್ಜಾಗಿದೆ. ಕೆಂಪೇಗೌಡ ಏರ್ಪೋಟ್ ಎಂಡಿ ಹರಿಮಾರನ್ ಅವರು ಇಂದಿನಿಂದ (ಸೆಪ್ಟೆಂಬರ್ 12) ಟರ್ಮಿನಲ್-2ನಿಂದ ವಿದೇಶಿ ವಿಮಾನಗಳ ಹಾರಾಟಕ್ಕೆ ಚಾಲನೆ ನೀಡಲಿದ್ದಾರೆ. ಇನ್ನು ಬೆಳಗ್ಗೆ 10.45ಕ್ಕೆ ಟರ್ಮಿನಲ್-2ಗೆ ಮೊದಲ ವಿದೇಶಿ ವಿಮಾನ ಬಂದಿಳಿಯಲಿದೆ. ಇನ್ನು ಹಳೆಯ ಟರ್ಮಿನಲ್-1 ದೇಶಿಯ ವಿಮಾನಗಳ‌ ಹಾರಾಟಕ್ಕೆ ಮೀಸಲಿಡಲಾಗಿದೆ.

ಅತ್ಯಾಧುನಿಕ ತಂತ್ರಜ್ಞಾನವುಳ್ಳ ಟರ್ಮಿನಲ್-2

ವಿವಿಧ ಜಾತಿಯ ಸಸ್ಯಗಳು ಮತ್ತು ಮರಗಳಿಂದ ಸುತ್ತುವರಿದಿರುವ ಈ ಟರ್ಮಿನಲ್ ಅನ್ನು ಟರ್ಮಿನಲ್ ಇನ್​ ದಿ ಗಾರ್ಡನ್ ಎಂದು ಕರೆಯಲಾಗುತ್ತಿದೆ. ಈ ಟರ್ಮಿನಲ್​​​ನಲ್ಲಿ 180 ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಜಾತಿಯ ಸಸ್ಯಗಳಿವೆ. 3,600 ಕ್ಕೂ ಹೆಚ್ಚು ಸಸ್ಯ ಪ್ರಭೇದಗಳು, ಬಿದಿರು, 620 ಸ್ಥಳೀಯ ಸಸ್ಯಗಳು, 7,700 ಕಸಿ ಮರಗಳು, 96 ಕಮಲ ಮತ್ತು ಇನ್ನೂ ಹೆಚ್ಚಿನ ಸಸ್ಯಗಳಿವೆ.

10 ಸಾವಿರ ಚದರ‌ ಮೀಟರ್ ಹಸಿರು ಗೋಡೆ, ಕೃತಕ ವಾಟರ್ ಫಾಲ್ಸ್​ ಜೊತೆ ನೂರಾರು ವರ್ಷಗಳ ಹಳೆಯ ಮರವನ್ನು ಟರ್ಮಿನಲ್-2 ಹೊಂದಿದೆ. ಇನ್ನು 2 ಲಕ್ಷ 55 ಸಾವಿರದ 661 ಚದರ್ ಮೀಟರ್​ನ ನೂತನ ಟರ್ಮಿನಲ್-2ನಲ್ಲಿ ಪ್ರತ್ಯೇಕ ವಿಮಾನ ಆಗಮ‌ನ ಹಾಗೂ ನಿರ್ಗಮನದ 2 ಹಂತಗಳನ್ನು ಹೊಂದಿದ್ದು, 5 ಜಿ ನೆಟ್ವರ್ಕ್ ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನದ ಚೆಕ್ ಇನ್, ಬ್ಯಾಗೇಜ್ ಡ್ರಾಪ್ ಕೌಂಟರ್ ವ್ಯವಸ್ಥೆ ಇದೆ.

ಕಳೆದ ವರ್ಷ ನವೆಂಬರ್​​ನಲ್ಲಿ ಪ್ರಧಾನಿ ಮೋದಿ 5 ಸಾವಿರ ಕೋಟಿ ‌ವೆಚ್ಚದಲ್ಲಿ‌ ನಿರ್ಮಾಣವಾಗಿರುವ ಗಾರ್ಡನ್ ಟರ್ಮಿನಲ್ 2 ಉದ್ಘಾಟಿಸಿದ್ದ,. ಆಗಸ್ಟ್‌ 31 ರಿಂದಲೇ ಟರ್ಮಿನಲ್‌-2ರಿಂದ ಅಂತರರಾಷ್ಟ್ರೀಯ ವಿಮಾನಯಾನ ಅಧಿಕೃತವಾಗಿ ಪ್ರಾರಂಭವಾಗಬೇಕಿತ್ತು. ಆದರೆ, ತಾಂತ್ರಿಕ ಅಡೆತಡೆ ಹಾಗೂ ಪ್ರಯಾಣಿಕರ ಸುರಕ್ಷತಾ ದೃಷ್ಟಿಯಿಂದ ವಿಮಾನ ನಿಲ್ದಾಣದ ನಿರ್ವಹಣಾ ಮಂಡಳಿ ಮುಂದೂಡಿತ್ತು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ