AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Yoga Day: ಹಂಪಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ; 5 ಸಾವಿರ ಜನರು ಭಾಗಿಯಾಗುವ ನಿರೀಕ್ಷೆ

ವಿಶ್ವಪಾರಂಪರಿಕ ತಾಣವಾಗಿರುವ ಐತಿಹಾಸಿಕ ಹಂಪಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21ರಂದು ಆಚರಿಸಲು ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರ ಅಧ್ಯಕ್ಷತೆಯಲ್ಲಿ ಇಂದು (ಜೂನ್​ 13) ರಂದು ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ನಿರ್ಧರಿಸಲಾಗಿದೆ.

International Yoga Day: ಹಂಪಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ; 5 ಸಾವಿರ ಜನರು ಭಾಗಿಯಾಗುವ ನಿರೀಕ್ಷೆ
ಹಂಪಿ
TV9 Web
| Updated By: ವಿವೇಕ ಬಿರಾದಾರ|

Updated on:Jun 13, 2022 | 8:21 PM

Share

ಹೊಸಪೇಟ: ವಿಶ್ವಪಾರಂಪರಿಕ ತಾಣವಾಗಿರುವ ಐತಿಹಾಸಿಕ ಹಂಪಿಯಲ್ಲಿ (Hampi) ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು (International Yoga Day) ಜೂನ್ 21ರಂದು ಆಚರಿಸಲು ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರ ಅಧ್ಯಕ್ಷತೆಯಲ್ಲಿ ಇಂದು (ಜೂನ್​ 13) ರಂದು ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ನಿರ್ಧರಿಸಲಾಗಿದೆ.

ಹಂಪಿಯ ವಿರೂಪಾಕ್ಷೇಶ್ವರ ದೇವಸ್ಥಾನದ ಮುಂಭಾಗದ ವಿಶಾಲ ಆವರಣ ಅಥವಾ ಕಮಲ ಮಹಲ್‍ನ ವಿಶಾಲ ಮೈದಾನದಲ್ಲಿ ಯೋಗ ದಿನವನ್ನು ವಿಜೃಂಭಣೆಯಿಂದ ಆಚರಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. 5 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆಯಿದ್ದು, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಕನ್ನಡದ ಖ್ಯಾತ ನಟ ಅಜಯರಾವ್, ಪದ್ಮಶ್ರೀ ಮಂಜಮ್ಮ ಜೋಗತಿ, ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಆನಂದಸಿಂಗ್, ಮುಜರಾಯಿ,ಹಜ್ ಮತ್ತು ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ ಸೇರಿದಂತೆ ಅನೇಕರು ಪಾಲ್ಗೊಳ್ಳಲಿದ್ದಾರೆ.

ಇದನ್ನು ಓದಿ: ಸೋಂಕಿನ ದರ ಹೆಚ್ಚಾಗ್ತಿದೆ, 4ನೇ ಅಲೆ ಆಗಸ್ಟ್​ವರೆಗೆ ಇರಬಹುದು, ಜನ ಕಡ್ಡಾಯವಾಗಿ ಲಸಿಕೆ ಪಡೆಯಬೇಕು: ಆರೋಗ್ಯ ಸಚಿವ ಸುಧಾಕರ್

ಕಾರ್ಯಕ್ರಮ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತವು ವಿವಿಧ ಸಮಿತಿಗಳನ್ನು ರಚಿಸಿದ್ದು ರಚಿಸಲಾಗಿರುವ ವಿವಿಧ ಸಮಿತಿಗಳ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ಸೂಚನೆ ನೀಡಿದರು.

ಜೂ.21ರಂದು ಬೆಳಗ್ಗೆ 6ಕ್ಕೆ ಯೋಗ ಕಾರ್ಯಕ್ರಮಗಳು ಆರಂಭವಾಗಲಿದ್ದು, 6:40ರವರೆಗೆ ಯೋಗ ಸಂಬಂಧಿತ ವೇದಿಕೆ ಕಾರ್ಯಕ್ರಮಗಳು ನಡೆಯಲಿದ್ದು, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಆನಂದಸಿಂಗ್, ಮುಜರಾಯಿ,ಹಜ್ ಮತ್ತು ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ ಅವರು ಮಾತನಾಡಲಿದ್ದಾರೆ. ಬೆಳಗ್ಗೆ 6:40ರಿಂದ 7ರವರೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೈಸೂರಿನ ಅರಮನೆ ಎದುರುಗಡೆಯಲ್ಲಿ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಲಿರುವ ಕಾರ್ಯಕ್ರಮದ ನೇರಪ್ರಸಾರವಾಗಲಿದೆ. 7ಕ್ಕೆ ಯೋಗ ಕಾರ್ಯಕ್ರಮ ಆರಂಭವಾಗಲಿದೆ ಎಂದು ಅವರು ತಿಳಿಸಿದರು.

 5 ಸಾವಿರ ಜನರು ಸೇರುವ ನಿರೀಕ್ಷೆ

ಶಾಲಾ-ಕಾಲೇಜು ವಿದ್ಯಾರ್ಥಿಗಳು, ಪತಂಜಲಿ, ಆರ್ಟ್ ಆಫ್ ಲಿವಿಂಗ್, ಬ್ರಹ್ಮಕುಮಾರಿ ಸಂಸ್ಥೆ, ಹಾಸ್ಟೆಲ್ ವಿದ್ಯಾರ್ಥಿಗಳು, ಆಶಾ-ಅಂಗನವಾಡಿ ಕಾರ್ಯಕರ್ತೆಯರು, ಸಾರ್ವಜನಿಕರು ಸೇರಿದಂತೆ 5 ಸಾವಿರಕ್ಕೂ ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಜಿಲ್ಲೆಯ ಪ್ರತಿ ತಾಲೂಕಿನಿಂದ ಜನರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ದೃಷ್ಟಿಯಿಂದ ಖಾಸಗಿ ಬಸ್‍ಗಳು ಹೊರತುಪಡಿಸಿ 60ಕ್ಕೂ ಹೆಚ್ಚು ಬಸ್‍ಗಳ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಡಿಸಿ ಅನಿರುದ್ಧ ಶ್ರವಣ್ ಅವರು ತಿಳಿಸಿದರು.

ಯೋಗ ಕಾರ್ಯಕ್ರಮಕ್ಕೆ ಆಗಮಿಸುವ ವಾಹನಗಳಿಗೆ ಅಗತ್ಯ ಪಾರ್ಕಿಂಗ್ ವ್ಯವಸ್ಥೆ ಮತ್ತು ಭದ್ರತಾ ವ್ಯವಸ್ಥೆ ಕೈಗೊಳ್ಳಿ ಮತ್ತು ಯಾವುದೇ ರೀತಿಯ ಸಮಸ್ಯೆಗಳಾಗದಂತೆ ನೋಡಿಕೊಳ್ಳಿ ಎಂದು ಅವರು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಲಘು ಉಪಾಹಾರ ಮತ್ತು ನೀರಿನ ವ್ಯವಸ್ಥೆ, ಯೋಗಾಸನಕ್ಕೆ ಗ್ರೀನ್ ಮ್ಯಾಟ್ ವ್ಯವಸ್ಥೆ, ವೇದಿಕೆ, ಧ್ವನಿವರ್ಧಕ ವ್ಯವಸ್ಥೆ, ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಅಗತ್ಯ ತಾತ್ಕಾಲಿಕ ಶೌಚಾಲಯ ವ್ಯವಸ್ಥೆ ಹಾಗೂ ಸಂಪೂರ್ಣ ಸ್ವಚ್ಛತೆಯನ್ನು ಕೈಗೊಳ್ಳಬೇಕು ಎಂದು ಡಿಸಿ ಅನಿರುದ್ಧ ಶ್ರವಣ್ ಅವರು ಸೂಚನೆ ನೀಡಿದರು.

ಇದನ್ನು ಓದಿ: ದೇಶದ ಪ್ರಮುಖ ನಗರಗಳಲ್ಲಿ ಜೂನ್ 13ರ ಸೋಮವಾರದ ಚಿನ್ನ- ಬೆಳ್ಳಿ ದರ ಇಲ್ಲಿದೆ

ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರಿಗೂ ಟೀ ಶರ್ಟ್ ಮತ್ತು ಕ್ಯಾಪ್‍ಗಳ ವ್ಯವಸ್ಥೆ ಮಾಡಿ ಎಂದು ತಿಳಿಸಿದ ಡಿಸಿ ಅವರು ಎಲ್ಲ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಸೂಚಿಸಿದರು. ಯೋಗ ದಿನಾಚರಣೆ ಅಂಗವಾಗಿ ಯೋಗದ ಮಹತ್ವ ಸಾರುವ ಉದ್ದೇಶದಿಂದ ಜೂ.19ರಂದು ನಗರದಲ್ಲಿ ಬೃಹತ್ ಯೋಗ ಜಾಥಾ ನಡೆಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಜಿಪಂ ಸಿಇಒ ಹರ್ಷಲ್ ಭೋಯರ್ ನಾರಾಯಣರಾವ್, ಅಪರ ಜಿಲ್ಲಾಧಿಕಾರಿ ಮಹೇಶಬಾಬು, ಸಹಾಯಕ ಆಯುಕ್ತ ಸಿದ್ದರಾಮೇಶ್ವರ, ಆಯುಷ್ ಇಲಾಖೆಯ ಜಿಲ್ಲಾ ಅಧಿಕಾರಿ ಡಾ.ಸುಜಾತಾ ಪಾಟೀಲ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

ರಾಜ್ಯದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:19 pm, Mon, 13 June 22

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?