AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆದರಿಕೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸಂಕಷ್ಟ: ಬಿ ರಿಪೋರ್ಟ್ ತಿರಸ್ಕರಿಸಿದ ಹೈಕೋರ್ಟ್

ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರು ಜಾಮೀನಿನ ಮೇಲೆ ಹೊರಗಿದ್ದಾರೆ. ಆದರೆ ಸಾಕ್ಷಿ ಗುರುನಾಥಗೌಡ ಅವರಿಗೆ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ಪೊಲೀಸರು ವಿನಯ್ ಕುಲಕರ್ಣಿ ಪರ ಸಲ್ಲಿಸಿದ್ದ ಬಿ ರಿಪೋರ್ಟ್ ಅವರನ್ನು ಹೈಕೋರ್ಟ್ ತಿರಸ್ಕರಿಸಿದೆ.

ಬೆದರಿಕೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸಂಕಷ್ಟ: ಬಿ ರಿಪೋರ್ಟ್ ತಿರಸ್ಕರಿಸಿದ ಹೈಕೋರ್ಟ್
ವಿನಯ್ ಕುಲಕರ್ಣಿ ಮತ್ತು ಕರ್ನಾಟಕ ಹೈಕೋರ್ಟ್
Ramesha M
| Updated By: Rakesh Nayak Manchi|

Updated on: Sep 29, 2023 | 3:57 PM

Share

ಬೆಂಗಳೂರು, ಸೆ.29: ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ (Vinay Kulkarni) ಅವರಿಗೆ ಸಂಕಷ್ಟ ಎದುರಾಗಿದೆ. ಪ್ರಕರಣದ ಸಾಕ್ಷಿ ಗುರುನಾಥ್ ಅವರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಪೊಲೀಸರು ವಿನಯ್ ಕುಲಕರ್ಣಿ ಪರ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಕರ್ನಾಟಕ ಹೈಕೋರ್ಟ್ (Karnataka High Court) ತಿರಸ್ಕರಿಸಿ ತನಿಖೆ ಮುಂದುವರಿಸುವಂತೆ ಆದೇಶಿಸಿದೆ.

ಅಸಮರ್ಪಕ ತನಿಖೆ ನಡೆಸಿದ‌ ಧಾರವಾಡ ಸಬ್ ಅರ್ಬನ್ ಠಾಣೆ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್, ತನಿಖೆ ಮುಂದುವರಿಸುವಂತೆ ಸೂಚಿಸಿದೆ. ದೂರುದಾರ ಗುರುನಾಥಗೌಡ ಸಾಕ್ಷ್ಯವಾಗಿ ಸಿಡಿ ನೀಡಿದ್ದರೂ ಪೊಲೀಸರು ಪರಿಗಣಿಸಿಲ್ಲ ಎಂಬುದನ್ನು ಕೋರ್ಟ್ ಬೊಟ್ಟು ಮಾಡಿದೆ.

ಡಿಜಿಟಲ್ ಸಾಕ್ಷ್ಯ ಪರಿಗಣಿಸದೇ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ, ಆರೋಪಿಗಳನ್ನು ತನಿಖೆಗೆ ಒಳಪಡಿಸದೇ ಬೇಜವಾಬ್ದಾರಿ ತೋರಿದ್ದಾರೆ. ತನಿಖೆಗೆ ಸರ್ಕಾರದ ಪೂರ್ವಾನುಮತಿ ಬೇಕೆಂದು ತಪ್ಪು ಮಾಹಿತಿ ನೀಡಲಾಗಿದೆ. ತನಿಖಾಧಿಕಾರಿ ಕಾನೂನು ಅರಿಯಲು ವಿಫಲರಾಗಿದ್ದಾರೆ. ಹೀಗಾಗಿ ಪ್ರಕರಣದ ಮರುತನಿಖೆ ನಡೆಸುವಂತೆ ನ್ಯಾಯಾಧೀಶೆ ಜೆ.ಪ್ರೀತ್ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಅಧ್ಯಕ್ಷರ ನೇಮಕವಾಗುವವರೆಗೂ ಜಿಲ್ಲಾ ನ್ಯಾಯಾದೀಶರೇ ಚಿತ್ರದುರ್ಗ ಮುರುಘಾಮಠದ ಆಡಳಿತಾಧಿಕಾರಿಯಾಗಿ ಮುಂದುವರಿಕೆ: ಹೈಕೋರ್ಟ್

ಕೊಲೆ ಪ್ರಕರಣ ಸಂಬಂಧ ಸಾಕ್ಷಿ ನಾಶಗೊಳಿಸುವ ಸಾಧ್ಯತೆ ಹಿನ್ನೆಲೆ ವಿನಯ್ ಕುಲಕರ್ಣಿ ಅವರಿಗೆ ಧಾರವಾಡ ಪ್ರವೇಶ ನಿರ್ಬಂಧಿಸಲಾಗಿದೆ. ಹಲವು ಬಾರಿ ಪ್ರವೇಶ ಕೋರಿ ಕೋರ್ಟ್​ಗೆ ಮನವಿ ಸಲ್ಲಿಸಿದ್ದ ಕುಲಕರ್ಣಿಗೆ ಅನುಮತಿ ಸಿಗುತ್ತಲೇ ಇಲ್ಲ. ಇತ್ತೀಚೆಗೆ ನಡೆದ ವಿಚಾರಣೆಯಲ್ಲಿ ಷರತ್ತು ಸಡಿಲಿಕೆ ಕೋರಿದ್ದ ಅರ್ಜಿಯನ್ನು ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿತ್ತು.

ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದಾಗಲೂ ಷರತ್ತು ಸಡಿಲಿಸಿಲ್ಲ. ಚುನಾವಣೆ ವೇಳೆಯೂ ಕ್ಷೇತ್ರ ಭೇಟಿಗೆ ಅನುಮತಿ ನಿರಾಕರಿಸಲಾಗಿದೆ. ಈಗಾಗಲೇ ಸಾಕ್ಷಿಗಳ ಮೇಲೆ ಪ್ರಭಾವ ಬೀರಿದ ಗುರುತರ ಆರೋಪ ಶಾಸಕ ವಿನಯ್ ಕುಲಕರ್ಣಿ ಮೇಲಿದ್ದು, ಪ್ರಮುಖ ಸಾಕ್ಷಿಗಳ ವಿಚಾರಣೆ ಇನ್ನೂ ಆರಂಭವಾಗಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!