AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Invest Karnataka 2022: ಉದ್ಯೋಗ ಸೃಷ್ಟಿಯಲ್ಲಿ ಕರ್ನಾಟಕ ಪ್ರಥಮ ಸ್ಥಾನದಲ್ಲಿದೆ; ಸಿಎಂ ಬೊಮ್ಮಾಯಿ

ಉದ್ಯೋಗ ಸೃಷ್ಟಿಯಲ್ಲಿ ಕರ್ನಾಟಕ ರಾಜ್ಯ ಪ್ರಥಮ ಸ್ಥಾನದಲ್ಲಿದೆ. ಜಾಗತಿಕ ಹೂಡಿಕೆದಾರರ ಮೂಲಕ ರಾಜ್ಯದಲ್ಲಿ ಇನ್ನಷ್ಟು ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Invest Karnataka 2022: ಉದ್ಯೋಗ ಸೃಷ್ಟಿಯಲ್ಲಿ ಕರ್ನಾಟಕ ಪ್ರಥಮ ಸ್ಥಾನದಲ್ಲಿದೆ; ಸಿಎಂ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಗಳು
Follow us
TV9 Web
| Updated By: Ganapathi Sharma

Updated on: Nov 02, 2022 | 2:17 PM

ಬೆಂಗಳೂರು: ಉದ್ಯೋಗ ಸೃಷ್ಟಿಯಲ್ಲಿ ಕರ್ನಾಟಕ ರಾಜ್ಯ ಪ್ರಥಮ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು. ಬೆಂಗಳೂರಿನ (Bengaluru) ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ‘ಇನ್ವೆಸ್ಟ್ ಕರ್ನಾಟಕ (Invest Karnataka)’ ಸಂದರ್ಭದಲ್ಲಿ ‘ಟಿವಿ9’ ಜತೆ ಮಾತನಾಡಿದ ಅವರು, ಅಂಕಿ-ಅಂಶ ತಿಳಿದುಕೊಳ್ಳದೆ ನಿರುದ್ಯೋಗದ ಬಗ್ಗೆ ಮಾತನಾಡುತ್ತಾರೆ. ಆದರೆ, ಕರ್ನಾಟಕ ಉದ್ಯೋಗ ಸೃಷ್ಟಿಯಲ್ಲಿ ಮುಂಚೂಣಿಯಲ್ಲಿದೆ ಎಂದು ಪ್ರತಿಪಕ್ಷಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಕೋವಿಡ್-19 ಸಾಂಕ್ರಾಮಿಕದ ಸಂದರ್ಭ ಭಾರತದಲ್ಲಿ ಆರ್ಥಿಕ ಹಿಂಜರಿಕೆ ಇತ್ತು. ಆದರೆ, ಕಳೆದ 6 ತಿಂಗಳಿನಲ್ಲಿ ದೇಶದ ಆರ್ಥಿಕತೆ ಮತ್ತೆ ಮುಂಚೂಣಿಗೆ ಬಂದಿದೆ. ಅಮೆರಿಕ, ಕೆನಡಾ, ಯುರೋಪ್​ ರಾಷ್ಟ್ರಗಳಲ್ಲಿ ಹಣದುಬ್ಬರ ಏರಿಕೆಯಾಗುತ್ತಿದ್ದರೆ ಭಾರತದಲ್ಲಿ ನಿಯಂತ್ರಣಕ್ಕೆ ಬರುತ್ತಿದೆ. ಇದೀಗ ಎಲ್ಲ ದೇಶಗಳ ದೃಷ್ಟಿ ಭಾರತದ ಮೇಲಿದೆ ಎಂದು ಬೊಮ್ಮಾಯಿ ಹೇಳಿದರು.

‘ಮುಂದಿನ ದಿನಗಳಲ್ಲಿ ಇನ್ನಷ್ಟು ಉದ್ಯೋಗ ಸೃಷ್ಟಿ’

ಇದನ್ನೂ ಓದಿ
Image
Petrol, Diesel Price Cut: ಪೆಟ್ರೋಲ್, ಡೀಸೆಲ್ ದರದಲ್ಲಿ ಮತ್ತೆ 2 ರೂ. ಇಳಿಕೆ ಸಾಧ್ಯತೆ: ವರದಿ
Image
Petrol Price on November 2: ಕಚ್ಚಾ ತೈಲದ ಬೆಲೆ ಏರಿಕೆ; ಇಂದಿನ ಪೆಟ್ರೋಲ್- ಡೀಸೆಲ್ ದರವೆಷ್ಟು?
Image
Gold Price Today: ಬೆಳ್ಳಿ ದರದಲ್ಲಿ ₹2,000 ಜಿಗಿತ, ಚಿನ್ನದ ದರ ತುಸು ಇಳಿಕೆ
Image
Stock Market Updates: 61000 ಗಡಿ ದಾಟಿದ ಸೆನ್ಸೆಕ್ಸ್, 9 ತಿಂಗಳ ಬಳಿಕ ಗರಿಷ್ಠ ಗಳಿಕೆ; ನಾಲ್ಕನೇ ದಿನವೂ ಮುಂದುವರಿದ ಓಟ

ಜಾಗತಿಕ ಹೂಡಿಕೆದಾರರ ಮೂಲಕ ರಾಜ್ಯದಲ್ಲಿ ಇನ್ನಷ್ಟು ಉದ್ಯೋಗ ಸೃಷ್ಟಿ ಮಾಡುತ್ತೇವೆ. ಬೆಂಗಳೂರು ಬಿಟ್ಟು ಇತರ ನಗರಗಳಲ್ಲಿಯೂ ಹೂಡಿಕೆ ಮಾಡುವಂತೆ ಉದ್ಯಮಿಗಳಿಗೆ ಆಹ್ವಾನ ನೀಡಲಾಗುವುದು. ಬೇರೆ ಕಡೆಗಳಿಗೂ ಬಂಡವಾಳ ಹರಿದು ಬರಲಿದೆ ಎಂಬ ನಿರೀಕ್ಷೆಯಿದೆ. ಈಗಾಗಲೇ 2.80 ಲಕ್ಷ ಕೋಟಿ ರೂ. ಹೂಡಿಕೆಗೆ ಅನುಮತಿ ಕೊಟ್ಟಿದ್ದೇವೆ. ಐಟಿಐ, ಇಂಜಿನಿಯರಿಂಗ್, ಕೌಶಲ್ಯಾಭಿವೃದ್ಧಿ ವಿದ್ಯಾರ್ಥಿಗಳಿಗೆ ಉದ್ಯೋಗ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ಇದನ್ನೂ ಓದಿ: Invest Karnataka 2022: ಕರ್ನಾಟಕದಲ್ಲಿ 1 ಲಕ್ಷ ಕೋಟಿ‌ ರೂ. ಹೂಡಿಕೆ, ಸಜ್ಜನ್ ಜಿಂದಾಲ್ ಘೋಷಣೆ

ಈ ಮಧ್ಯೆ, ರಾಜ್ಯದಲ್ಲಿ ಮುಂದಿನ ವರ್ಷಗಳಲ್ಲಿ 1 ಲಕ್ಷ ಕೋಟಿ‌ ರೂ. ಹೂಡಿಕೆ ಮಾಡುವುದಾಗಿ ಜೆಎಸ್​ಡಬ್ಲ್ಯೂ ಗ್ರೂಪ್ ಅಧ್ಯಕ್ಷ ಸಜ್ಜನ್ ಜಿಂದಾಲ್ ಘೋಷಿಸಿದ್ದಾರೆ. ಕರ್ನಾಟಕದಲ್ಲಿ ಮುಂದಿನ 7 ವರ್ಷಗಳಲ್ಲಿ 1 ಲಕ್ಷ ಕೋಟಿ ರೂ. ಹೂಡಿಕೆ ಮಾಡುವುದಾಗಿ ಅದಾನಿ ಗ್ರೂಪ್ ಕೂಡ ಹೇಳಿದೆ. ಸ್ಟರ್ಲೈಟ್ ಪವರ್ ಸೇರಿದಂತೆ ಅನೇಕ ಉದ್ಯಮ ಸಂಸ್ಥೆಗಳು ರಾಜ್ಯದಲ್ಲಿ ಹೂಡಿಕೆಗೆ ಆಸಕ್ತಿ ತೋರಿವೆ.

ಮೂರು ದಿನಗಳ ಕಾಲ ನಡೆಯುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಳಿಗ್ಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದರು. ಕರ್ನಾಟಕದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಹೂಡಿಕೆ ಮಾಡುವಂತೆ ಜಾಗತಿಕ ಉದ್ಯಮಿಗಳಲ್ಲಿ ಮನವಿ ಮಾಡಿದ್ದರು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ