IAS vs IPS: ಡಿ ರೂಪಾ ಹಾಗೂ ರೋಹಿಣಿ ಸಿಂಧೂರಿ ವರ್ಗಾವಣೆ ಮಾಡಿದ ಸರ್ಕಾರ

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ನಡುವಣ ಸಂಘರ್ಷಕ್ಕೆ ಸಂಬಂಧಿಸಿ ಮಹತ್ವದ ನಿರ್ಧಾರ ಕೈಗೊಂಡಿರುವ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಜತೆಗೆ ಐಎಎಸ್​ ಅಧಿಕಾರಿ ಮುನೀಶ್ ಮೌದ್ಗಿಲ್ ಅವರನ್ನೂ ವರ್ಗಾವಣೆ ಮಾಡಲಾಗಿದೆ.

IAS vs IPS: ಡಿ ರೂಪಾ ಹಾಗೂ ರೋಹಿಣಿ ಸಿಂಧೂರಿ ವರ್ಗಾವಣೆ ಮಾಡಿದ ಸರ್ಕಾರ
ಡಿ ರೂಪಾ (ಎಡಚಿತ್ರ) ರೋಹಿಣಿ ಸಿಂಧೂರಿ (ಬಲಚಿತ್ರ)
Follow us
Ganapathi Sharma
|

Updated on:Feb 21, 2023 | 2:42 PM

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ (D Roopa Moudgil) ನಡುವಣ ಸಂಘರ್ಷಕ್ಕೆ ಸಂಬಂಧಿಸಿ ಮಹತ್ವದ ನಿರ್ಧಾರ ಕೈಗೊಂಡಿರುವ ರಾಜ್ಯ ಸರ್ಕಾರ ಇಬ್ಬರನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಆದರೆ, ಯಾವ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ ಎಂಬುದನ್ನು ತಿಳಿಸಿಲ್ಲ. ಜತೆಗೆ ಐಎಎಸ್​ ಅಧಿಕಾರಿ, ರೂಪಾ ಅವರ ಪತಿ ಮುನೀಶ್ ಮೌದ್ಗಿಲ್ ಅವರನ್ನೂ ವರ್ಗಾವಣೆ ಮಾಡಲಾಗಿದೆ. ಇವರನ್ನು ಡಿಪಿಆರ್ (Department of Personnel and Administrative Reforms) ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಕಳೆದ ಕೆಲವು ದಿನಗಳಿಂದ ಇಬ್ಬರು ಅಧಿಕಾರಿಗಳ ನಡುವಣ ಸಂಘರ್ಷ ತಾರಕಕ್ಕೇರಿತ್ತು. ರೋಹಿಣಿ ಸಿಂಧೂರಿ ಅವರು ಜೆಡಿಎಸ್ ಶಾಸಕ ಸಾರಾ ಮಹೇಶ್ ಜತೆ ಸಂಧಾನಕ್ಕೆ ತೆರಳಿದ್ದರು ಎಂಬ ಬಗ್ಗೆ ವರದಿಯಾದ ಬೆನ್ನಲ್ಲೇ ಅವರ ವಿರುದ್ಧ ಡಿ ರೂಪಾ ಆರೋಪಗಳ ಸುರಿಮಳೆಯನ್ನೇ ಮಾಡಿದ್ದರು. ನಂತರ ಪ್ರಕರಣ ರಾಜಕೀಯ ವಲಯದಲ್ಲಿಯೂ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಪ್ರಕರಣದ ಬಗ್ಗೆ ಸರ್ಕಾರ ತನಿಖೆ ನಡೆಸಲಿದೆ; ಆರಗ ಜ್ಞಾನೇಂದ್ರ

ಐಪಿಎಸ್ ಡಿ.ರೂಪಾ ಹಾಗೂ ಐಎಎಸ್ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಉನ್ನತ ಹುದ್ದೆಯ ಅಧಿಕಾರಿಗಳು ಹೀಗೆ ಕಿತ್ತಾಡುವುದು ಸರಿಯಲ್ಲ. ಹೀಗಾಗಿ ಅಧಿಕಾರಿಗಳ ವಿರುದ್ಧ ಸರ್ಕಾರ ಕ್ರಮಕೈಗೊಂಡಿದೆ. ಪ್ರಕರಣದ ಬಗ್ಗೆ ಸರ್ಕಾರ ತನಿಖೆ ನಡೆಸಲಿದೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಟಿವಿ9ಗೆ ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರ ಡಿ ರೂಪಾ, ರೋಹಿಣಿ ಸಿಂಧೂರಿ ಮತ್ತು ಮುನೀಷ್​ ಮೌದ್ಗಿಲ್​ ವರ್ಗಾವಣೆಗೊಳಿಸಿದ ಆದೇಶ ಪ್ರತಿ

ಇದನ್ನೂ ಓದಿ: D Roopa Moudgil: ಯಾರು ಡಿ ರೂಪಾ ಮೌದ್ಗಿಲ್? ರೋಹಿಣಿ ಸಿಂಧೂರಿ ಜತೆ ಕದನಕ್ಕೆ ಕಾರಣವೇನು? ಇಲ್ಲಿದೆ ವಿವರ

ರೋಹಿಣಿ ಸಿಂಧೂರಿ ಅವರು ಕೆಲವು ಐಎಎಸ್‌ ಅಧಿಕಾರಿಗಳಿಗೆ ಕಳುಹಿಸಿದ್ದಾರೆ ಎನ್ನಲಾದ ಕೆಲವು ಚಿತ್ರಗಳನ್ನು ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ನಲ್ಲಿ ಇತ್ತೀಚೆಗೆ ರೂಪಾ ಪ್ರಕಟಿಸಿದ್ದರು. ಜತೆಗೆ, ಐಎಎಸ್ ಅಧಿಕಾರಿ ಆಗಿ ರಾಜಕಾರಣಿಗಳ ಬಳಿ ಸಂಧಾನಕ್ಕೆ ಯಾಕೆ ಹೋಗಬೇಕು? ದೇಶದ ಇತಿಹಾಸದಲ್ಲಿ ಮೊದಲ ಬಾರಿ ಐಎಎಸ್ ರಾಜಕಾರಣಿ ಬಳಿ ಸಂಧಾನಕ್ಕೆ ಹೋಗಿದ್ದಾರೆ. ರಾಜಕಾರಣಿ ಬಳಿ ಐಎಎಸ್ ಅಧಿಕಾರಿ ಹೋಗಿರುವುದು ಖೇದ ಅನಿಸುತ್ತಿದೆ ಎಂದು ಹೇಳಿದ್ದರು. ಇದು ತೀವ್ರ ಚರ್ಚಗೆ ಗ್ರಾಸವಾಗಿತ್ತು. ಏತನ್ಮಧ್ಯೆ, ರೋಹಿಣಿ ವಿರುದ್ಧ ರೂಪಾ. ಮಾಡಿರುವ ಆರೋಪಗಳ ಬಗ್ಗೆ ತನಿಖೆ ನಡೆಸಬೇಕು ಎಂದು ಸಾಮಾಜಿಕ ಹೋರಾಟಗಾರ ದಿನೇಶ್‌ ಕಲ್ಲಹಳ್ಳಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ದೂರು ನೀಡಿದ್ದರು. ಇದರ ಬೆನ್ನಲ್ಲೇ ಇಬ್ಬರೂ ಅಧಿಕಾರಿಗಳಿಗೆ ನೋಟಿಸ್‌ ನೀಡಿದ್ದ ಮುಖ್ಯ ಕಾರ್ಯದರ್ಶಿ ಪ೦ದಿತಾ ಶರ್ಮ ವಿವರಣೆ ಕೇಳಿದ್ದರು.

ಸೋಮವಾರ ವಿಧಾನಸಭೆ ಅಧಿವೇಶನದಲ್ಲಿಯೂ ಐಎಎಸ್ – ಐಪಿಎಸ್ ಅಧಿಕಾರಿಗಳ ನಡುವಣ ಸಂಘರ್ಷದ ಬಗ್ಗೆ ಚರ್ಚೆಯಾಗಿತ್ತು. ಸೋಮವಾರ ಸಂಜೆ ನಡೆದ ಸಚಿವ ಸಂಪುಟ ಸಭೆಯಲ್ಲಿಯೂ ವಿಚಾರ ಪ್ರಸ್ತಾಪವಾಗಿತ್ತು. ಇದರ ಬೆನ್ನಲ್ಲೇ ಅಧಿಕಾರಿಗಳಿಬ್ಬರನ್ನೂ ವರ್ಗಾವಣೆ ಅಥವಾ ಕಡ್ಡಾಯ ರಜೆ ಮೇಲೆ ಕಳುಹಿಸುವ ಸಾಧ್ಯತೆ ಇದೆ ಎಂದು ಉನ್ನತ ಮೂಲಗಳು ತಿಳಿಸಿದ್ದವು. ಇದೀಗ ಸರ್ಕಾರ ಅದೇ ಕ್ರಮ ಕೈಗೊಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:03 pm, Tue, 21 February 23

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್