AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಸ್ ಅಧಿಕಾರಿ ಡಿ.ರೂಪಾಗೆ ಶೂನ್ಯಪೀಠ ಅಕ್ಕನಾಗಮ್ಮ ಪ್ರಶಸ್ತಿ ಪ್ರದಾನ

D.Roopa: ಕುವೆಂಪು ವಿಶ್ವವಿದ್ಯಾಲಯದಲ್ಲಿ ಬಿಎ ಪದವಿಯನ್ನು ಪಡೆದ ಡಿ.ರೂಪಾ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಮನಃಶಾಸ್ತ್ರ ವಿಭಾಗದಲ್ಲಿ ಎಂಎ ಪದವಿಯನ್ನು ಪಡೆದರು. ಐಪಿಎಸ್ ಅಧಿಕಾರಿ ಡಿ.ರೂಪಾರವರು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಮತ್ತು ಭರತನಾಟ್ಯದ ತರಬೇತಿಯನ್ನು ಪಡೆದಿದ್ದಾರೆ.

ಐಪಿಎಸ್ ಅಧಿಕಾರಿ ಡಿ.ರೂಪಾಗೆ ಶೂನ್ಯಪೀಠ ಅಕ್ಕನಾಗಮ್ಮ ಪ್ರಶಸ್ತಿ ಪ್ರದಾನ
ಡಿ.ರೂಪಾ
sandhya thejappa
| Edited By: |

Updated on:Feb 25, 2021 | 7:48 PM

Share

ದಾವಣಗೆರೆ: ಇದೇ 28 ರಂದು ದಾವಣಗೆರೆ ನಗರದ ಶಿವಯೋಗಿ ಮಂದಿರದಲ್ಲಿ ನಡೆಯುವ ಶರಣ ಸಂಸ್ಕೃತಿ ಉತ್ಸವದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಡಿ.ರೂಪಾ ಅವರಿಗೆ ಶೂನ್ಯಪೀಠ ಅಕ್ಕನಾಗಮ್ಮ ಪ್ರಶಸ್ತಿಯನ್ನು ನೀಡಲಾಗುತ್ತದೆ. ಜೊತೆಗೆ ಹಿರಿಯ ಸಾಹಿತಿ ಕೆ.ಮರುಳಸಿದ್ದಪ್ಪ ಅವರಿಗೆ ಜಯದೇವಶ್ರೀ, ಪ್ರೊ.ಎಚ್.ಲಿಂಗಪ್ಪಗೆ ಶೂನ್ಯಪೀಠ ಚನ್ನಬಸವಣ್ಣ ಹಾಗೂ ಪತ್ರಕರ್ತ ಬಸವರಾಜಸ್ವಾಮಿ ಅವರಿಗೆ ಶೂನ್ಯಪೀಠ ಅಲ್ಲಮ ಪ್ರಭು ಪ್ರಶಸ್ತಿಯನ್ನು ನೀಡಲಾಗುತ್ತದೆ ಎಂದು ಚಿತ್ರದುರ್ಗ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರು ತಿಳಿಸಿದ್ದಾರೆ.

ಡಿ.ರೂಪಾ ಬಗ್ಗೆ ಡಿ.ರೂಪಾ ಕರ್ನಾಟಕದ ಮೊದಲ ಮಹಿಳಾ ಐಪಿಎಸ್ ಅಧಿಕಾರಿಯಾಗಿದ್ದಾರೆ. ಇವರ ಹುಟ್ಟೂರು ದಾವಣಗೆರೆ. ತಂದೆಯ ಹೆಸರು ಜೆ.ಹೆಚ್.ದಿವಾಕರ್ ಮತ್ತು ತಾಯಿ ಹೇಮಾವತಿ. ಕುವೆಂಪು ವಿಶ್ವವಿದ್ಯಾಲಯದಲ್ಲಿ ಬಿಎ ಪದವಿಯನ್ನು ಪಡೆದ ಡಿ.ರೂಪಾ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಮನಃಶಾಸ್ತ್ರ ವಿಭಾಗದಲ್ಲಿ ಎಂಎ ಪದವಿಯನ್ನು ಪಡೆದರು. ಐಪಿಎಸ್ ಅಧಿಕಾರಿ ಡಿ.ರೂಪಾರವರು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಮತ್ತು ಭರತನಾಟ್ಯದ ತರಬೇತಿಯನ್ನು ಪಡೆದಿದ್ದಾರೆ.

ಡಿ.ರೂಪಾ ಮತ್ತು ಹೇಮಂತ್ ನಿಂಬಾಳ್ಕರ್ ತಿಕ್ಕಾಟ ನಿರ್ಭಯಾ ಸೇಫ್ ಸಿಟಿ ಯೋಜನೆ ಟೆಂಡರ್ ವಿಚಾರಕ್ಕೆ ಸಂಬಂಧಿಸಿ ಐಪಿಎಸ್ ಅಧಿಕಾರಿಗಳಾದ ಡಿ.ರೂಪಾ ಹಾಗೂ ಹೇಮಂತ್ ನಿಂಬಾಳ್ಕರ್ ನಡುವೆ ತಿಕ್ಕಾಟ ಶುರುವಾಗಿತ್ತು. ಇವರ ನಡುವಿನ ಗಲಾಟೆ ಬೆನ್ನಲ್ಲೆ ರಾಜ್ಯ ಸರ್ಕಾರ ಇವರಿಬ್ಬರನ್ನು ವರ್ಗಾವಣೆ ಮಾಡಿತ್ತು. ಆದರೆ ಆದೇಶಕ್ಕೆ ಅನುಗುಣವಾಗಿ ಹೇಮಂತ್ ನಿಂಬಾಳ್ಕರ್​ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು (2020 ರ ಡಿಸೆಂಬರ್ 31) ಡಿ.ರೂಪಾ ಟ್ವಿಟರ್​ನಲ್ಲಿ ಪ್ರಶ್ನಿಸಿದ್ದರು. ಇದು ದೊಡ್ಡ ಸುದ್ದಿಯಾಗಿತ್ತು.

ನನ್ನ ವರ್ಗಾವಣೆ ಬಂದಿದೆ. ಕರಕುಶಲ ನಿಗಮದ ಎಂಡಿ ಎಂದು. ಸಿಬಿಐ ಈಗಾಗಲೇ ದೋಷಾರೋಪಣೆ ಸಲ್ಲಿಸಿ ನಿಂಬಾಳ್ಕರ್ ಮೇಲೆ ಶಿಸ್ತುಕ್ರಮ ತೆಗೆದುಕೊಳ್ಳಿ ಎಂದು ಕಳೆದ ಡಿಸೆಂಬರ್ (1 ವರ್ಷದ ಹಿಂದೆ) ಶಿಫಾರಸ್ಸು ಮಾಡಿದ್ದರು. ಆದರೆ ಶಿಸ್ತುಕ್ರಮ ತೆಗೆದುಕೊಂಡಿಲ್ಲ. ಈ ವರ್ಗಾವಣೆ ನನ್ನನ್ನೂ ದೋಷಾರೊಪಣೆ ಎದುರಿಸುತ್ತಿರುವ ಅಧಿಕಾರಿಯನ್ನು ಒಂದೆ ತಕ್ಕಡಿಯಲ್ಲಿ ಅಳೆದಂತೆ ಎಂದು ಅಭಿಪ್ರಾಯಪಟ್ಟಿದ್ದರು.

ಡಿ.ರೂಪಾ ಮತ್ತು ಹೇಮಂತ್ ನಿಂಬಾಳ್ಕರ್ ತಿಕ್ಕಾಟಕ್ಕೆ ಕಾರಣ? ನಿರ್ಭಯಾ ಸೇಫ್ ಸಿಟಿ ಯೋಜನೆ ಟೆಂಡರ್​ನಲ್ಲಿ ಅವ್ಯವಹಾರ ನಡೆದಿದೆ ಎಂದು ಗೃಹ ಇಲಾಖೆಯ ಕಾರ್ಯದರ್ಶಿಯಾಗಿದ್ದ ಡಿ.ರೂಪಾ ಮಾಡಿದ್ದರು. ಆದರೆ ಈ ಆರೋಪಕ್ಕೆ ಹೇಮಂತ್ ನಿಂಬಾಳ್ಕರ್ ನಿರಾಕರಿಸಿದ್ದರು.

ಸಾಹಿತಿ ಡಾ.ಕೆ.ಮರುಳಸಿದ್ದಪ್ಪ ಪರಿಚಯ ಸಾಹಿತಿ ಡಾ.ಕೆ.ಮರುಳಸಿದ್ದಪ್ಪ ಕನ್ನಡದ ಖ್ಯಾತ ವಿಮರ್ಶಕರು. ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರೂ ಆಗಿದ್ದರು. ಕರ್ನಾಟಕ ನಾಟಕ ಅಕಾಡೆಮಿ ಹಾಗೂ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದರು.

ಇದನ್ನೂ ಓದಿ

ಕಾವೇರಿ ಎಂಪೋರಿಯಂ ಕರಕುಶಲ ವಸ್ತುಗಳು ಇನ್ಮುಂದೆ ಆನ್​ಲೈನ್ ಮಾರುಕಟ್ಟೆಯಲ್ಲೂ ಲಭ್ಯ -ಡಿ.ರೂಪಾ

ಇದು ನನ್ನನ್ನೂ ದೋಷಾರೋಪಣೆ ಎದುರಿಸುತ್ತಿರುವ ಅಧಿಕಾರಿಯನ್ನೂ ಒಂದೇ ತಕ್ಕಡಿಯಲ್ಲಿ ಅಳೆದಂತೆ: ಡಿ.ರೂಪಾ

Published On - 7:47 pm, Thu, 25 February 21

24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!