ಐಪಿಎಸ್​ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮತ್ತೊಮ್ಮೆ​ ವರ್ಗಾವಣೆ

ನಿರ್ಭಯಾ ನಿಧಿ ಗುತ್ತಿಗೆ ಯೋಜನೆ ಟೆಂಡರ್ ಪ್ರಕ್ರಿಯೆಯಲ್ಲಿ ನಿಂಬಾಳ್ಕರ್ ಪಾತ್ರದ ಬಗ್ಗೆ ಅಂದಿನ ಗೃಹ ಕಾರ್ಯದರ್ಶಿ ಡಿ.ರೂಪಾ ಆಕ್ಷೇಪ ವ್ಯಕ್ತಪಡಿಸಿದ್ದರು. ಇಬ್ಬರೂ ಐಪಿಎಸ್​ ಅಧಿಕಾರಿಗಳ ನಡುವೆ ಹೇಳಿಕೆ-ಪ್ರತಿಹೇಳಿಕೆಗಳು ಕೆಲ ಸಮಯ ಹರಿದಾಡಿದ್ದವು.

ಐಪಿಎಸ್​ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮತ್ತೊಮ್ಮೆ​ ವರ್ಗಾವಣೆ
ಐಜಿಪಿ ಹೇಮಂತ್ ನಿಂಬಾಳ್ಕರ್
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on:Jan 11, 2021 | 11:19 PM

ಬೆಂಗಳೂರು: ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಐಜಿಪಿಯಾಗಿ ವರ್ಗಾವಣೆ ಮಾಡಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ಡಿ.31ರಂದು 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದ ಸರ್ಕಾರವು, ಹೇಮಂತ್ ನಿಂಬಾಳ್ಕರ್ ಅವರನ್ನು ಆಂತರಿಕ ಭದ್ರತೆ ವಿಭಾಗದ ಐಜಿಪಿಯಾಗಿ ವರ್ಗಾವಣೆ ಮಾಡಿತ್ತು.

ನಿರ್ಭಯಾ ನಿಧಿ ಗುತ್ತಿಗೆ ಯೋಜನೆ ಟೆಂಡರ್ ಪ್ರಕ್ರಿಯೆಯಲ್ಲಿ ನಿಂಬಾಳ್ಕರ್ ಪಾತ್ರದ ಬಗ್ಗೆ ಅಂದಿನ ಗೃಹ ಕಾರ್ಯದರ್ಶಿ ಡಿ.ರೂಪಾ ಆಕ್ಷೇಪ ವ್ಯಕ್ತಪಡಿಸಿದ್ದರು. ಇಬ್ಬರೂ ಐಪಿಎಸ್​ ಅಧಿಕಾರಿಗಳ ನಡುವೆ ಹೇಳಿಕೆ-ಪ್ರತಿಹೇಳಿಕೆಗಳು ಕೆಲ ಸಮಯ ಹರಿದಾಡಿದ್ದವು. ನಂತರ ಇಬ್ಬರನ್ನೂ ವರ್ಗಾವಣೆ ಮಾಡಿ ಸರ್ಕಾರ ವಿವಾದಕ್ಕೆ ಇತಿಶ್ರೀ ಹಾಡಲು ಮುಂದಾಗಿತ್ತು.

ರೂಪಾ ಅವರನ್ನು ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಮತ್ತು ಹೇಮಂತ್ ನಿಂಬಾಳ್ಕರ್ ಅವರನ್ನು ಆಂತರಿಕ ಭದ್ರತೆ ವಿಭಾಗದ ಐಜಿಪಿಯನ್ನಾಗಿ ಸರ್ಕಾರ ವರ್ಗಾವಣೆ ಮಾಡಿತ್ತು. ತಮ್ಮನ್ನು ವರ್ಗಾವಣೆ ಮಾಡಿರುವುಕ್ಕೆ ರೂಪಾ ಬೇಸರ ವ್ಯಕ್ತಪಡಿಸಿದ್ದರು. ‘ಈ ವರ್ಗಾವಣೆಯು ನನ್ನನ್ನೂ, ದೋಷಾರೋಪಣೆ ಎದುರಿಸುತ್ತಿರುವ ಅಧಿಕಾರಿಯನ್ನೂ ಒಂದೇ ತಕ್ಕಡಿಯಲ್ಲಿ ಅಳೆದಂತೆ’ ಎಂದು ಆಕ್ಷೇಪಿಸಿದ್ದರು.

ಆಂತರಿಕ ಭದ್ರತೆ ವಿಭಾಗದ ಐಜಿಪಿಯನ್ನಾಗಿ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಿದ ಕೇವಲ 11 ದಿನಗಳಲ್ಲಿ ಮತ್ತೊಮ್ಮೆ ವರ್ಗಾವಣೆ ಮಾಡಲಾಗಿದೆ. ಹೇಮಂತ್ ನಿಂಬಾಳ್ಕರ್ ಅವರ ಸೇವಾರ್ಹತೆಗೆ ಅನುಗುಣವಾಗಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಐಜಿಪಿ ಹುದ್ದೆಯನ್ನು ಉನ್ನತೀಕರಿಸಲಾಗಿದೆ.

ವಿವಾದಿತ ಹಿರಿಯ IPS ಅಧಿಕಾರಿಗಳ ವರ್ಗಾವಣೆ: ಡಿ. ರೂಪಾ ಮತ್ತು ಹೇಮಂತ್ ನಿಂಬಾಳ್ಕರ್ ಎತ್ತಂಗಡಿ

ಇದು ನನ್ನನ್ನೂ ದೋಷಾರೋಪಣೆ ಎದುರಿಸುತ್ತಿರುವ ಅಧಿಕಾರಿಯನ್ನೂ ಒಂದೇ ತಕ್ಕಡಿಯಲ್ಲಿ ಅಳೆದಂತೆ: ಡಿ.ರೂಪಾ

Published On - 10:58 pm, Mon, 11 January 21

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್