ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಗುಪ್ತಗಾಮಿನಿಯಂತೆ ಎಲ್ಲೆಡೆ ಹರಡುತ್ತಿದೆ. ಈಗ ರಾಜ್ಯದಲ್ಲಿ ಐಪಿಎಸ್ ಅಧಿಕಾರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಕೆಎಸ್‌ಆರ್‌ಪಿಯಲ್ಲಿ ಕಮಾಂಡೆಂಟ್‌ಗೆ ಆಗಿ ಕಾರ್ಯನಿರ್ವಹಿಸುತ್ತಿದ್ದ 46 ವರ್ಷದ ಐಪಿಎಸ್ ಅಧಿಕಾರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಅವರನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸೋಂಕಿತ ಐಪಿಎಸ್ ಅಧಿಕಾರಿ ಜತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಕಚೇರಿ ಸಿಬ್ಬಂದಿ ಹಾಗೂ ಕುಟುಂಬಸ್ಥರನ್ನು ಕ್ವಾರಂಟೈನ್ ಮಾಡಲಾಗಿದೆ. ಉಳಿದ ಅವರ ಸಂಪರ್ಕದಲ್ಲಿದ್ದ ಅಧಿಕಾರಿಗಳಿಗಾಗಿ ಮಾಹಿತಿ ಕಲೆ ಹಾಕಲಾಗುತ್ತಿದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಐಪಿಎಸ್ ಅಧಿಕಾರಿಯೊಬ್ಬರಿಗೆ ಸೋಂಕು ತಗುಲಿದೆ .
Published On - 2:17 pm, Wed, 24 June 20