Sign In

By signing in or creating an account, you agree with Associated Broadcasting Company's Terms & Conditions and Privacy Policy.

IPS Transfer: ರವಿ ಡಿ. ಚನ್ನಣ್ಣನವರ್ ಸೇರಿ ಕರ್ನಾಟಕದ 9 ಐಪಿಎಸ್​ ಅಧಿಕಾರಿಗಳ ವರ್ಗಾವಣೆ

ಸಿಐಡಿ ಎಸ್​ಪಿ ಆಗಿದ್ದ ರವಿ ಡಿ. ಚನ್ನಣ್ಣನವರ್ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ನಿಗಮದ ಎಂಡಿಯಾಗಿ ವರ್ಗಾವಣೆಗೊಂಡಿದ್ದಾರೆ.

IPS Transfer: ರವಿ ಡಿ. ಚನ್ನಣ್ಣನವರ್ ಸೇರಿ ಕರ್ನಾಟಕದ 9 ಐಪಿಎಸ್​ ಅಧಿಕಾರಿಗಳ ವರ್ಗಾವಣೆ
ಐಪಿಎಸ್​ ಅಧಿಕಾರಿ ರವಿ ಚನ್ನಣ್ಣನವರ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jan 27, 2022 | 5:51 PM

ಬೆಂಗಳೂರು: ಕರ್ನಾಟಕದಲ್ಲಿ ರವಿ ಡಿ. ಚನ್ನಣ್ಣನವರ್ (Ravi D Channannavar) ಸೇರಿದಂತೆ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರದಿಂದ (Karnataka Government) ಆದೇಶ ಹೊರಡಿಸಲಾಗಿದೆ. ಸಿಐಡಿ ಎಸ್​ಪಿ ಆಗಿದ್ದ ರವಿ ಡಿ. ಚನ್ನಣ್ಣನವರ್ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾವಣೆಗೊಂಡಿದ್ದಾರೆ. ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ರವಿ ಚನ್ನಣ್ಣನವರ್ ನೇಮಕವಾಗಿದ್ದಾರೆ. 2 ದಿನಗಳ ಹಿಂದಷ್ಟೇ 19 ಉನ್ನತ ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ಬಸವರಾಜ ಬೊಮ್ಮಾಯಿ ಸರ್ಕಾರ ಇದೀಗ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಆದೇಶ ಹೊರಡಿಸಿದೆ. 

ಉಳಿದಂತೆ ಭೀಮಾಶಂಕರ ಗುಳೇದ್- ಡಿಸಿಪಿ, ಬೆಂಗಳೂರು ಪೂರ್ವ, ಡಿ. ಕಿಶೋರ್ ಬಾಬು- ಬೀದರ್ ಪೊಲೀಸ್ ವರಿಷ್ಠಾಧಿಕಾರಿ, ಅರುಣಾಂಗ್ಶು ಗಿರಿ- ಕೊಪ್ಪಳ ಪೊಲೀಸ್ ವರಿಷ್ಠಾಧಿಕಾರಿ, ಡಿ.ಎಲ್. ನಾಗೇಶ್- ಸಿಐಡಿ ಎಸ್‌ಪಿ, ಅಬ್ದುಲ್ ಅಹಾದ್- ಕೆಎಸ್‌ಆರ್‌ಟಿಸಿ ನಿರ್ದೇಶಕ, ಟಿ. ಶ್ರೀಧರ್- ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಎಸ್​ಪಿ, ಟಿ.ಪಿ. ಶಿವಕುಮಾರ್- ಚಾಮರಾಜನಗರ ಎಸ್‌ಪಿ ಹಾಗೂ ದಿವ್ಯಸಾರ ಥಾಮಸ್- ಪೊಲೀಸ್ ಅಕಾಡೆಮಿ ಉಪ ನಿರ್ದೇಶಕರಾಗಿ ವರ್ಗಾವಣೆಗೊಂಡಿದ್ದಾರೆ.

ಸಿಐಡಿ ಎಸ್​​ಪಿ ಹುದ್ದೆಯಿಂದ ಕರ್ನಾಟಕ ಮಹರ್ಷಿ ವಾಲ್ಮೀಕಿ ಶಡ್ಯೂಲ್ ಟ್ರೈಬ್ ಡೆವಲಪ್ಮೆಂಟ್ ಕಾರ್ಪೊರೇಷನ್ ಎಂಡಿ ಆಗಿ ರವಿ ಡಿ. ಚನ್ನಣ್ಣನವರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಸಿಐಡಿ ಎಸ್​ಪಿಯಾಗಿದ್ದ ಐಪಿಎಸ್ ಅಧಿಕಾರಿ ಭೀಮಾಶಂಕರ ಗುಳೇದ್ ಅವರನ್ನು ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ ಅಗಿ ವರ್ಗಾವಣೆ ಮಾಡಲಾಗಿದೆ. ಅಬ್ದುಲ್ ಅಹಾದ್ ಅವರನ್ನು ಎಸಿಬಿ ಎಸ್​ಪಿಯಿಂದ ಕೆಎಸ್​ಆರ್​​ಟಿಸಿ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ. ಟಿ ಶ್ರೀಧರ್ ಅವರನ್ನು ಕೊಪ್ಪಳ ಎಸ್​ಪಿ ಹುದ್ದೆಯಿಂದ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಎಸ್​ಪಿಯಾಗಿ ವರ್ಗಾಯಿಸಲಾಗಿದೆ.

ಟಿ.ಪಿ ಶಿವಕುಮಾರ್ ಅವರನ್ನು ಬಂಧೀಖಾನೆ ಎಸ್​ಪಿಯಿಂದ ಚಾಮರಾಜನಗರ ಎಸ್​ಪಿಯಾಗಿ, ದಿವ್ಯಸಾರ ಥಾಮಸ್ ಅವರನ್ನು ಚಾಮರಾಜನಗರ ಎಸ್​ಪಿಯಿಂದ ಕರ್ನಾಟಕ ಪೊಲೀಸ್ ಅಕಾಡೆಮಿ ಉಪ ನಿರ್ದೇಶಕರಾಗಿ, ಡೆಕ್ಕಾ ಕಿಶೋರ್ ಬಾಬು ಅವರನ್ನು ಬೀದರ್ ಎಸ್​ಪಿ ಆಗಿ ವರ್ಗಾವಣೆ ಮಾಡಲಾಗಿದೆ. ಅರುಣಾಂಗ್ಶು ಗಿರಿ ಅವರನ್ನು ಎಸಿಬಿ ಎಸ್ ಪಿಯಿಂದ ಕೊಪ್ಪಳ ಎಸ್ ಪಿ ಆಗಿ ವರ್ಗಾವಣೆ ಮಾಡಲಾಗಿದೆ. ಡಿ.ಎಲ್. ನಾಗೇಶ್ ಅವರನ್ನು ಬೀದರ್ ಎಸ್​ಪಿಯಿಂದ ಸಿಐಡಿ ಎಸ್​ಪಿ ಆಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಇದನ್ನೂ ಓದಿ: 19 ಮಂದಿ ಉನ್ನತ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ಬಸವರಾಜ ಬೊಮ್ಮಾಯಿ ಸರ್ಕಾರ

IPS Transfer: ಹಲವು ಐಪಿಎಸ್ ಅಧಿಕಾರಿಗಳಿಗೆ ಬಡ್ತಿ, ವರ್ಗಾವಣೆ, ವಿವಿಧ ಸ್ಥಾನಗಳಿಗೆ ನಿಯುಕ್ತಿ

Published On - 5:51 pm, Thu, 27 January 22

ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!