AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPS ಅಧಿಕಾರಿಗಳ ಕಿತ್ತಾಟ: ವರ್ತಿಕಾ ವರ್ಗಾವಣೆ ಬೆನ್ನಲ್ಲೇ ರೂಪಾ ಮೌದ್ಗಿಲ್ ಎತ್ತಂಗಡಿ

ಕರ್ನಾಟಕ ಗೃಹ ಇಲಾಖೆಯ ಐಪಿಎಸ್​ ಅಧಿಕಾರಿಗಳು ಕಿತ್ತಾಟ ಮುಂದುವರಿದಿದೆ. ಐಪಿಎಸ್​ ವರ್ತಿಕಾ ಕಟಿಯರ್ ವರ್ಗಾವಣೆ ಬೆನ್ನಲ್ಲೇ ಇದೀಗ ಆಂತರಿಕ ಭದ್ರತಾ ವಿಭಾಗದ ಐಜಿಪಿ ಆಗಿದ್ದ ಡಿ.ರೂಪಾ ಮೌದ್ಗಿಲ್ ಅವರನ್ನು ಸಹ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಏನಿದು ಗಲಾಟೆ? ಇಬ್ಬರು ಐಪಿಎಸ್​ ಅಧಿಕಾರಿಗಳನ್ಜು ಬೇರೆ ಬೇರೆ ಕಡೆ ವರ್ಗಾವಣೆ ಮಾಡಿದ್ಯಾಕೆ ಎನ್ನುವ ವಿವರ ಇಲ್ಲಿದೆ.

IPS ಅಧಿಕಾರಿಗಳ ಕಿತ್ತಾಟ: ವರ್ತಿಕಾ ವರ್ಗಾವಣೆ ಬೆನ್ನಲ್ಲೇ ರೂಪಾ ಮೌದ್ಗಿಲ್ ಎತ್ತಂಗಡಿ
Roopa And Vartika Katiyar
ರಮೇಶ್ ಬಿ. ಜವಳಗೇರಾ
|

Updated on:Mar 05, 2025 | 3:00 PM

Share

ಬೆಂಗಳೂರು, (ಮಾರ್ಚ್​ 05): ಐಪಿಎಸ್ ಅಧಿಕಾರಿಗಳಾದ​ ಡಿ ರೂಪಾ ಮೌದ್ಗಿಲ್​  (D Roopa Moudgil) ಹಾಗೂ ​ ವರ್ತಿಕಾ ಕಟಿಯರ್  (Vartika Katiyar)ನಡುವಿನ ಗುದ್ದಾಟ ಶುರುವಾಗಿದ್ದು, ಈ ಇಬ್ಬರ ಗಲಾಟೆ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಕಚೇರಿವರೆಗೂ ಹೋಗಿ ತಲುಪಿದೆ. ಇದರ ಬೆನ್ನಲ್ಲೇ ಇದೀಗ ಡಿ ರೂಪಾ ಮೌದ್ಗಿಲ್ ಹಾಗೂ ವರ್ತಿಕಾ ಕಟಿಯರ್ ಇಬ್ಬರನ್ನೂ ಸಹ ಬೇರೆ ಕಡೆಗೆ ವರ್ಗಾವಣೆ ಮಾಡಲಾಗಿದೆ. ಆಂತರಿಕ ಭದ್ರತಾ ವಿಭಾಗದ ಡಿಐಜಿಯಾಗಿದ್ದ ವರ್ತಿಕಾ ಕಟಿಯಾರ್ ಅವರನ್ನು ಸಿವಿ ಡಿಫೆನ್ಸ್ ಮತ್ತು ಹೋಮ್ ಗಾರ್ಡ್ ವಿಭಾಗಕ್ಕೆ ವರ್ಗಾವಣೆ ಮಾಡಿದ್ದರೆ, ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿದ್ದ ರೂಪಾ ಅವರನ್ನು ಇಂದು (ಮಾರ್ಚ್​ 05) ಕರ್ನಾಟಕ ಸಿಲ್ಕ್ ಮಾರ್ಕೆಟಿಂಗ್ ಬೋರ್ಡ್ ಎಂಡಿ ಆಗಿ ವರ್ಗಾವಣೆ ಮಾಡಲಾಗಿದೆ.

ಕೆಳಹಂತದ ಸಿಬ್ಬಂದಿಗಳನ್ನು ಬಳಸಿಕೊಂಡು ದಾಖಲೆ ಕಳುವು ಮಾಡಿಸಿದ್ದು, ನನ್ನ ವಿರುದ್ಧ ಷಡ್ಯಂತ್ರ ನಡೆಯುವ ಸಾಧ್ಯತೆ ಇದೆ ಎಂದು ಡಿಐಜಿ ವರ್ತಿಕಾ ಕಟಿಯಾರ್ ಅವರು ರೂಪ ಮೌದ್ಗಿಲ್ ವಿರುದ್ದ ಆರೋಪಿಸಿದ್ದು, ಈ ಸಂಬಂಧ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ದೂರು ನೀಡಿದ್ದರು. ಇದರ ಬೆನ್ನಲ್ಲೇ ಸರ್ಕಾರ ಮೊನ್ನೆ ವರ್ತಿಕಾ ಕಟಿಯಾರ್ ಅವರನ್ನು ವರ್ಗಾವಣೆ ಮಾಡಿತ್ತು. ಇದರ ಬೆನ್ನಲ್ಲೇ ದೂರು ನೀಡಿದವರನ್ನೇ ವರ್ಗಾವಣೆ ಮಾಡಲಾಗಿದೆ ಎನ್ನುವ ಚರ್ಚೆಗಳು ಶುರುವಾಗಿದ್ದವು. ಇದೀಗ ರೂಪ ಅವರನ್ನೂ ಸಹ ಸರ್ಕಾರ ವರ್ಗಾವಣೆ ಮಾಡಿದೆ.

ಇದನ್ನೂ ಓದಿ: ಐಪಿಎಸ್​ ಡಿ ರೂಪಾ ವಿರುದ್ಧ ದೂರು ನೀಡಿದ್ದ ಡಿಐಜಿ ವರ್ತಿಕಾ ಕಟಿಯಾರ್​ಗೆ ವರ್ಗಾವಣೆ ಭಾಗ್ಯ!

ರೂಪ ವಿರುದ್ಧ ವರ್ತಿಕಾ ನೀಡಿದ ದೂರಿನಲ್ಲೇನಿದೆ?

ಫೆಬ್ರವರಿ 20 ರಂದು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ವರ್ತಿಕಾ ದೂರು ದಾಖಲಿಸಿದ್ದರು. ಸೆಪ್ಟೆಂಬರ್ 6, 2024 ರಂದು ರೂಪಾ ಅವರ ಆದೇಶದ ಮೇರೆಗೆ ಹೆಡ್ ಕಾನ್ಸ್‌ಟೇಬಲ್ ಮಂಜುನಾಥ್ ಮತ್ತು ಗೃಹರಕ್ಷಕ ದಳದ ಮಲ್ಲಿಕಾರ್ಜುನ್ ಅನುಮತಿಯಿಲ್ಲದೆ ನನ್ನ ಕೊಠಡಿಗೆ ಪ್ರವೇಶಿಸಿದ್ದು, ದಾಖಲೆಗಳನ್ನು ಕಳವು ಮಾಡಿದ್ದಾರೆ. ಮಲ್ಲಿಕಾರ್ಜುನ್ ಅವರು ನಿಯಂತ್ರಣ ಕೊಠಡಿಯಿಂದ ಕೀಲಿಯನ್ನು ತೆಗೆದುಕೊಂಡು ಕೊಠಡಿಯನ್ನು ತೆರೆದರೆ, ಮಂಜುನಾಥ್ ಫೈಲ್‌ಗಳ ಛಾಯಾಚಿತ್ರಗಳನ್ನು ತೆಗೆದುಕೊಂಡು ವಾಟ್ಸಾಪ್ ಮೂಲಕ ಐಜಿಪಿಗೆ ಕಳುಹಿಸಿದ್ದಾರೆ.

ಇದನ್ನೂ ಓದಿ
Image
ಐಪಿಎಸ್​ ಡಿ ರೂಪಾ ವಿರುದ್ಧ ದೂರು ನೀಡಿದ್ದ ಡಿಐಜಿ ವರ್ತಿಕಾ ವರ್ಗಾವಣೆ
Image
ಐಎಎಸ್​ ವರ್ಸಸ್ ಐಪಿಎಸ್​: ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್
Image
One Minute Apology ಪುಸ್ತಕ ಓದುವಂತೆ ರೂಪಾ-ರೋಹಿಣಿಗೆ ಕೋರ್ಟ್​ ಸಲಹೆ

ಡಿಐಜಿ ಅವರ ಅರಿವಿಲ್ಲದೆ ಕೊಠಡಿಯನ್ನು ತೆರೆಯದಂತೆ ವರ್ತಿಕಾ ಅವರ ಆಪ್ತ ಸಹಾಯಕ ಕಿರಣ್ ಕುಮಾರ್ ಎಚ್ ಮಂಜುನಾಥ್ ಅವರಿಗೆ ಸೂಚಿಸಿದ್ದರು. ಆದರೆ, ಐಜಿಪಿ ಆದೇಶದ ಮೇರೆಗೆ ಕಾರ್ಯನಿರ್ವಹಿಸುತ್ತಿದ್ದ ಮಂಜುನಾಥ್, ಫೈಲ್‌ಗಳ ಫೋಟೋಗಳನ್ನು ತೆಗೆದಿದ್ದಾರೆ. ಈ ವಿಷಯದ ಬಗ್ಗೆ ನನಗೆ ಇತ್ತೀಚೆಗಷ್ಟೇ ತಿಳಿದುಬಂದಿತ್ತು. ಬಳಿಕ ಕಿರಣ್, ಮಂಜುನಾಥ್ ಮತ್ತು ಮಲ್ಲಿಕಾರ್ಜುನ್ ಅವರನ್ನು ಪ್ರಶ್ನಿಸಿದಾಗ, ರೂಪಾ ಅವರ ಸೂಚನೆಯ ಮೇರೆಗೆ ಫೈಲ್‌ಗಳನ್ನು ತೆಗೆದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ.

ನನ್ನ ಕೊಠಡಿಯಲ್ಲಿ ಗೌಪ್ಯ ದಾಖಲೆಗಳು ಮತ್ತು ಅಧಿಕೃತ ದಾಖಲೆಗಳಿವೆ. ಕೆಲಸದ ಸಮಯದ ನಂತರ, ಸಂಬಂಧಪಟ್ಟ ಅಧಿಕಾರಿಗಳ ಅನುಪಸ್ಥಿತಿಯಲ್ಲಿ ಮತ್ತು ಅವರ ಅನುಮತಿಯಿಲ್ಲದೆ ಕೊಠಡಿಗೆ ಪ್ರವೇಶ ಮಾಡುವುದು ಗಂಭೀರ ಮತ್ತು ಅಕ್ಷಮ್ಯ ಅಪರಾಧ. ಈ ಹಿಂದೆ ಕೂಡ ಇದೇ ರೀತಿಯ ಘಟನೆಗಳು ನಡೆದಿರಬಹುದು. ಆದರೆ, ಇದೀಗ ನನ್ನ ಗಮನಕ್ಕೆ ಬಂದಿದೆ. ದಾಖಲೆಗಳ ಮೂಲಕ ರೂಪಾ ಅವರು ನನ್ನ ವಿರುದ್ಧ ಸೇಡು ತೀರಿಸಿಕೊಳ್ಳುವ ಸಾಧ್ಯತೆಗಳಿವೆ. ಈ ಹಿಂದೆ ರೂಪಾ ನನ್ನ ವಾರ್ಷಿಕ ವರದಿಯನ್ನು ಹಾಳುಮಾಡುವುದಾಗಿ ಬೆದರಿಕೆ ಹಾಕಿದ್ದರು. ಡಿಐಜಿಗೆ ಡಿಜಿ ಮತ್ತು ಐಜಿಪಿ ಹುದ್ದೆಗೆ ಬಡ್ತಿ ನೀಡಿದಾಗ ನೋಡಿಕೊಳ್ಳುತ್ತೇನೆಂದು ಎಚ್ಚರಿಸಿದ್ದರು. ಇದೀಗ ನನ್ನ ಕೊಠಡಿಯಲ್ಲಿನ ದಾಖಲೆಗಳನ್ನು ಕಳವು ಮಾಡಿದ್ದು, ಯಾವುದೇ ರೀತಿಯ ಸಮಸ್ಯೆಗಳು ಎದುರಾದರೆ ಅದಕ್ಕೆ ರೂಪಾ ಅವರೇ ಹೊಣೆಗಾರರಾಗಿರುತ್ತಾರೆ. ಭವಿಷ್ಯದಲ್ಲಿಯೂ ಈ ರೀತಿಯ ಘಟನೆಗಳು ನಡೆಯುವ ಸಾಧ್ಯತೆಗಳಿದ್ದು, ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳುವಂತೆ ವರ್ತಿಕಾ ಅವರು ದೂರಿನಲ್ಲಿ ಮನವಿ ಮಾಡಿದ್ದರು.

ವರದಿ: ಪ್ರದೀಪ್ ಚಿಕ್ಕಾಟೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:58 pm, Wed, 5 March 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!