AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Iran Israel War: ಯುದ್ಧಪೀಡಿತ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಯೇ ಆದ್ಯತೆ; ಸಿಎಂ ಸಿದ್ದರಾಮಯ್ಯ

ಇರಾನ್ ಮತ್ತು ಇಸ್ರೇಲ್ ನಡುವಣ ಯುದ್ಧದಿಂದಾಗಿ ವಿಮಾನ ಸಂಚಾರ ರದ್ದಾಗಿ ದುಬೈ ಸೇರಿದಂತೆ ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಸಿಎಂ ಸಿದ್ದರಾಮಯ್ಯ ಆದ್ಯತೆ ನೀಡಿದ್ದಾರೆ. ಕನ್ನಡಿಗರ ಸುರಕ್ಷತೆಗೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿ, ದೆಹಲಿ ನಿವಾಸಿ ಆಯುಕ್ತರ ಜೊತೆ ಸಮಾಲೋಚಿಸಿದ್ದಾರೆ. ಯುದ್ಧಪೀಡಿತ ಪ್ರದೇಶಗಳಲ್ಲಿ ಸಿಕ್ಕಿಬಿದ್ದಿರುವವರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಮನವಿ ಮಾಡಿದ್ದಾರೆ.

Iran Israel War: ಯುದ್ಧಪೀಡಿತ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಯೇ ಆದ್ಯತೆ; ಸಿಎಂ ಸಿದ್ದರಾಮಯ್ಯ
ಯುದ್ಧಪೀಡಿತ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಯೇ ಆದ್ಯತೆ; ಸಿಎಂ ಸಿದ್ದರಾಮಯ್ಯImage Credit source: tv9
ಗಣಪತಿ ಶರ್ಮಾ
|

Updated on: Mar 01, 2026 | 7:18 AM

Share

ಬೆಂಗಳೂರು, ಮಾರ್ಚ್ 1: ಇರಾನ್ ಮತ್ತು ಇಸ್ರೇಲ್ ನಡುವಣ ಯುದ್ಧದಿಂದಾಗಿ (Iran–Israel War) ವಿಮಾನ ಸಂಚಾರ ರದ್ದಾಗಿದ್ದರಿಂದ ದುಬೈನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆ ವಿಚಾರವಾಗಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದ್ದಾರೆ. ಕನ್ನಡಿಗರ ಸುರಕ್ಷತೆಗೆ ಎಲ್ಲ ರೀತಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ಎಕ್ಸ್ ಸಂದೇಶದ ಮೂಲಕ ತಿಳಿಸಿದ್ದಾರೆ. ಈ ಬಗ್ಗೆ ದೆಹಲಿಯ ನಿವಾಸಿ ಆಯುಕ್ತರ ಜೊತೆ ಸಮಾಲೋಚನೆ ನಡೆಸಿರುವುದಾಗಿಯೂ ತಿಳಿಸಿದ್ದಾರೆ.

ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದಿಂದಾಗಿ ಇಸ್ರೇಲ್, ಯುಎಇ, ಇರಾನ್, ಖತಾರ್ ಸೇರಿದಂತೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರ ಸುರಕ್ಷತೆಯನ್ನು ನಾವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ದೆಹಲಿಯ ನಿವಾಸಿ ಆಯುಕ್ತರ ಜೊತೆ ಸಮಾಲೋಚನೆ ನಡೆಸಿ, ಅವರ ಸುರಕ್ಷತೆಗೆ ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ. ಮಧ್ಯಪ್ರಾಚ್ಯ ದೇಶಗಳಲ್ಲಿ ವಿಮಾನ ಸಂಚಾರ ಸ್ಥಗಿತಗೊಂಡಿರುವ ಕಾರಣ ನಾಡಿಗೆ ಮರಳಲು ಸಾಧ್ಯವಾಗದೆ ಯುದ್ಧಪೀಡಿತ ರಾಷ್ಟ್ರಗಳಲ್ಲಿ ಸಿಲುಕಿರುವವರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನವಿ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ. ಸಹಾಯವಾಣಿಯನ್ನು ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಯುದ್ಧಪೀಡಿತ ದೇಶಗಳಲ್ಲಿ ನೆಲೆಸಿರುವ ಕುಟುಂಬ ಸದಸ್ಯರು ಸಂಪರ್ಕಕ್ಕೆ ಸಿಗದೆ ಇದ್ದಲ್ಲಿ ಯಾರೂ ಕೂಡ ಆತಂಕಕ್ಕೆ ಒಳಗಾಗುವುದು ಬೇಡ. ಪ್ರತಿಯೊಬ್ಬ ಕನ್ನಡಿಗನ ಸುರಕ್ಷತೆ ನಮ್ಮ‌ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದೇವೆ ಎಂದು ಅವರು ಉಲ್ಲೇಖಿಸಿದ್ದಾರೆ.

ಸಿದ್ದರಾಮಯ್ಯ ಎಕ್ಸ್ ಸಂದೇಶ

ಬಳ್ಳಾರಿ ಮೂಲದ 32 ಮಂದಿ ದುಬೈನಲ್ಲಿ ಸಿಲುಕಿರುವ ಬಗ್ಗೆ ಮಾಜಿ ಸಚಿವರಾದ ನಾಗೇಂದ್ರ ಅವರು ನನಗೆ ಮಾಹಿತಿ ನೀಡಿದ್ದು, ಅವರ ಸುರಕ್ಷತೆಯ ಬಗ್ಗೆಯೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ತಿಳಿಸಿದ್ದಾರೆ.

ಇದನ್ನೂ ಓದಿ: ಇರಾನ್-ಇಸ್ರೇಲ್ ಯುದ್ಧ, ದುಬೈನಲ್ಲಿ 50ಕ್ಕೂ ಹೆಚ್ಚು ಕನ್ನಡಿಗರ ಸಂಕಷ್ಟ

ವಿಮಾನ ಸಂಚಾರ ರದ್ದಾದ ಕಾರಣ ದುಬೈನಲ್ಲಿ ಐವತ್ತಕ್ಕೂ ಹೆಚ್ಚು ಕನ್ನಡಿಗರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಲಾಗಿದೆ. ಇದರಲ್ಲಿ ಬಳ್ಳಾರಿ ಮತ್ತು ದಾವಣಗೆರೆಯ ಪ್ರವಾಸಿಗರು ಇದ್ದಾರೆ. ತಮ್ಮನ್ನು ಹೇಗಾದರೂ ಮಾಡಿ ಸಂದೇಶಕ್ಕೆ ಕರೆಸಿಕೊಳ್ಳುವಂತೆ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು