AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಬಿಜೆಪಿಗೆ Surprise ನೀಡಿದ ಬಿಜೆಪಿ ಹೈಕಮಾಂಡ್, ಇಬ್ಬರ ಹೆಸರು ಘೋಷಣೆ

ಬೆಂಗಳೂರು: ರಾಜ್ಯಸಭೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಐದಾರು ಪ್ರಮುಖ ಹೆಸರುಗಳು ಬಿಜೆಪಿ ಅಂಗಳದಲ್ಲಿ ಸರಿದಾಗಿತ್ತು. ಕೊನೆಗೆ ರಾಜ್ಯ ನಾಯಕರು ಎರಡು ಸ್ಥಾನಕ್ಕೆ ಮೂವರ ಹೆಸರನ್ನು ಸೂಚಿಸಿ ಪಕ್ಷದ ಹೈಕಮಾಂಡ್​ಗೆ ಕಳುಹಿಸಿದ್ದರು. ಈ ಮೂವರಲ್ಲಿ ಇಬ್ಬರಂತೂ ಫೈನಲ್ ಆಗ್ತಾರೆ ಎಂದು ರಾಜ್ಯದ ಬಿಜೆಪಿ ನಾಯಕರು ಅಂದುಕೊಂಡಿದ್ದರು. ಆದರೆ ಬಿಜೆಪಿ ಹೈಕಮಾಂಡ್, ರಾಜ್ಯದ ನಾಯಕರನ್ನು ಬೆಚ್ಚಿ ಬೀಳಿಸುವಂತೆ ಮಾತಕತೆಯಲ್ಲಿ ಇಲ್ಲದ ಇಬ್ಬರು ನಾಯಕರನ್ನು ಘೋಷಿಸಿದೆ. ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದ್ದು, ಉತ್ತರ ಕರ್ನಾಟಕ ಹಾಗೂ ಹೈದರಾಬಾದ್ ಕರ್ನಾಟಕಕ್ಕೆ ಅವಕಾಶ […]

ರಾಜ್ಯ ಬಿಜೆಪಿಗೆ Surprise ನೀಡಿದ ಬಿಜೆಪಿ ಹೈಕಮಾಂಡ್, ಇಬ್ಬರ ಹೆಸರು ಘೋಷಣೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jun 08, 2020 | 2:43 PM

Share

ಬೆಂಗಳೂರು: ರಾಜ್ಯಸಭೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಐದಾರು ಪ್ರಮುಖ ಹೆಸರುಗಳು ಬಿಜೆಪಿ ಅಂಗಳದಲ್ಲಿ ಸರಿದಾಗಿತ್ತು. ಕೊನೆಗೆ ರಾಜ್ಯ ನಾಯಕರು ಎರಡು ಸ್ಥಾನಕ್ಕೆ ಮೂವರ ಹೆಸರನ್ನು ಸೂಚಿಸಿ ಪಕ್ಷದ ಹೈಕಮಾಂಡ್​ಗೆ ಕಳುಹಿಸಿದ್ದರು. ಈ ಮೂವರಲ್ಲಿ ಇಬ್ಬರಂತೂ ಫೈನಲ್ ಆಗ್ತಾರೆ ಎಂದು ರಾಜ್ಯದ ಬಿಜೆಪಿ ನಾಯಕರು ಅಂದುಕೊಂಡಿದ್ದರು. ಆದರೆ ಬಿಜೆಪಿ ಹೈಕಮಾಂಡ್, ರಾಜ್ಯದ ನಾಯಕರನ್ನು ಬೆಚ್ಚಿ ಬೀಳಿಸುವಂತೆ ಮಾತಕತೆಯಲ್ಲಿ ಇಲ್ಲದ ಇಬ್ಬರು ನಾಯಕರನ್ನು ಘೋಷಿಸಿದೆ.

ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದ್ದು, ಉತ್ತರ ಕರ್ನಾಟಕ ಹಾಗೂ ಹೈದರಾಬಾದ್ ಕರ್ನಾಟಕಕ್ಕೆ ಅವಕಾಶ ಕೊಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ವಿಭಾಗೀಯ ಪ್ರಭಾರಿ ಈರಣ್ಣ ಕಡಾಡಿ ಮತ್ತು ರಾಯಚೂರಿನ ಕಲ್ಯಾಣ ಕರ್ನಾಟಕ ವಿಭಾಗೀಯ ಉಸ್ತುವಾರಿ ಅಶೋಕ್ ಗಸ್ತಿಗೆ ಟಿಕೆಟ್ ಘೋಷಣೆ ಮಾಡಿದ್ದಾರೆ.

ಕೋರೆಗೆ ತಪ್ಪಿದ ಟಿಕೆಟ್​: ಅಭ್ಯರ್ಥಿಗಳ ಆಯ್ಕೆಯಲ್ಲಿ ಮೆಗಾ ಟ್ವಿಸ್ಟ್ ಪಡೆದುಕೊಂಡಿದೆ. ಎರಡು ಸ್ಥಾನಗಳಿಗೆ ಅಚ್ಚರಿಯ ಹೆಸರುಗಳನ್ನು ಬಿಜೆಪಿ ಹೈಕಮಾಂಡ್ ಘೋಷಣೆ ಮಾಡಿದೆ. ಈ ಮೂಲಕ ಹಾಲಿ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ, ರಮೇಶ್ ಕತ್ತಿ ಹಾಗೂ ಪ್ರಕಾಶ್​ ಶೆಟ್ಟಿಗೆ ಬಿಜೆಪಿ ಟಿಕೆಟ್ ಕೈತಪ್ಪಿದೆ.

ಕಾರಟಗಿಯಲ್ಲಿ ಗಸ್ತಿಗೆ ಅಭಿನಂದನೆ ಸಲ್ಲಿಸಿದ ಕಟೀಲ್: ರಾಜ್ಯಸಭಾ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಅಶೋಕ್ ಗಸ್ತಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್  ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ. ನಳೀನ್ ಕುಮಾರ್ ಕಟೀಲ್ ಮತ್ತು ಅಶೋಕ್ ಗಸ್ತಿ ಕಾರಟಗಿಯಲ್ಲಿ ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Published On - 12:59 pm, Mon, 8 June 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು