ಕಬ್ಬಿಣದ ಅದಿರು ರಫ್ತಿಗೆ ಕೇಂದ್ರದಿಂದ ತಾತ್ವಿಕ ಒಪ್ಪಿಗೆ; ನಿಷೇಧ ತೆರವುಗೊಳಿಸುವಂತೆ ಸುಪ್ರೀಂಕೋರ್ಟ್​ಗೆ ಮೇಲ್ಮನವಿ

ಬುಧವಾರ ವಿಕಾಸಸೌಧದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಹಾಗೂ ಗಣಿ ಸಚಿವರಾದ ಪ್ರಹ್ಲಾದ್ ಜೋಶಿ ಅವರೊಂದಿಗೆ ವಚ್ಯು೯ಯಲ್ ಸಭೆ ನಡೆಸಿದ ನಂತರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ತಿಳಿಸಿದರು.

ಕಬ್ಬಿಣದ ಅದಿರು ರಫ್ತಿಗೆ ಕೇಂದ್ರದಿಂದ ತಾತ್ವಿಕ ಒಪ್ಪಿಗೆ; ನಿಷೇಧ ತೆರವುಗೊಳಿಸುವಂತೆ ಸುಪ್ರೀಂಕೋರ್ಟ್​ಗೆ ಮೇಲ್ಮನವಿ
ಮುರುಗೇಶ್ ನಿರಾಣಿ
Follow us
TV9 Web
| Updated By: ganapathi bhat

Updated on:Aug 21, 2021 | 9:43 AM

ಬೆಂಗಳೂರು: ರಾಜ್ಯದಿಂದ ವಿದೇಶಕ್ಕೆ ಕಬ್ಬಿಣದ ಅದಿರು ರಪ್ತು ಮಾಡಲು ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿರುವುದರಿಂದ ಸುಪ್ರೀಂಕೋರ್ಟ್​ನಲ್ಲಿ ವಿಧಿಸಿರುವ ನಿಷೇಧವನ್ನು ತೆರವುಗೊಳಿಸುವಂತೆ ಮೇಲ್ಮನವಿ ಅರ್ಜಿ ಹಾಕಲು ಗಣಿ ಮತ್ತು ಭೂವಿಜ್ಞಾನ ಇಲಾಖೆ ತೀರ್ಮಾನಿಸಿದೆ. ಉನ್ನತಧಿಕಾರಿಗಳ ಸಮಿತಿ (ಸಿಇಸಿ )ಯ ಅಭಿಪ್ರಾಯ ಪಡೆದು ಕಬ್ಬಿಣದ ಅದಿರು ರಪ್ತು ಮಾಡಲು ವಿಧಿಸಿರುವ ನಿಷೇಧವನ್ನು ತೆರವು ಮಾಡುವಂತೆ ಮನವಿ ಮಾಡಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರು ಹೇಳಿದರು.

ಬುಧವಾರ ವಿಕಾಸಸೌಧದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಹಾಗೂ ಗಣಿ ಸಚಿವರಾದ ಪ್ರಹ್ಲಾದ್ ಜೋಶಿ ಅವರೊಂದಿಗೆ ವಚ್ಯು೯ಯಲ್ ಸಭೆ ನಡೆಸಿದ ನಂತರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ತಿಳಿಸಿದರು.

ವಿದೇಶಕ್ಕೆ ರಪ್ತು ಮಾಡುವ ಸಂಬಂಧ ಅಭಿಪ್ರಾಯವನ್ನು ಕೇಳಲಾಗಿತ್ತು. ಕರ್ನಾಟಕದಿಂದ ಕಬ್ಬಿಣದ ಅದಿರನ್ನು ವಿದೇಶಕ್ಕೆ ರಪ್ತು ಮಾಡುವ ವಿಚಾರದಲ್ಲಿ ಕೇಂದ್ರದಿಂದ ಯಾವುದೇ ತಕರಾರು ಇಲ್ಲ ಎಂದು ಸ್ಪಷ್ಟಪಡಿಸಿದರು. ದೇಶದ ಯಾವುದೇ ರಾಜ್ಯಗಳಲ್ಲೂ ವಿದೇಶಕ್ಕೆ ಕಬ್ಬಿಣದ ಅದಿರು ರಪ್ತು ಮಾಡಲು ನಿಷೇಧ ಹೇರಿಲ್ಲ. ಕರ್ನಾಟಕದಲ್ಲಿ ಮಾತ್ರ ಇರುವುದರಿಂದ ಸರ್ಕಾರದ ಬೊಕ್ಕಸಕ್ಕೆ ಬರುತ್ತಿದ್ದ ವರಮಾನವು ನಿಂತು ಹೋಗಿದೆ ಎಂದು ಹೇಳಿದರು.

ಕೇಂದ್ರ ಸರಕಾರವೂ ನಮಗೆ ಸಂಪೂರ್ಣವಾದ ಸಹಕಾರವನ್ನು ನೀಡುತ್ತಿದೆ. ನ್ಯಾಯಾಲಯದಲ್ಲಿ ಕಾನೂನಿನ ನೆರವು ನೀಡುವುದಾಗಿ ಸಚಿವರಾದ ಪ್ರಹ್ಲಾದ್ ಜೋಶಿ ಅವರು ಹೇಳಿದ್ದಾರೆ. ನಮ್ಮ ನಿಲುವನ್ನು ಸುಪ್ರೀಂಕೋರ್ಟ್ ಒಪ್ಪಿಕೊಳ್ಳಲು ಸಾಧ್ಯತೆ ಇದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಸರ್ಕಾರಕ್ಕೆ ಹೆಚ್ಚಿನ ವರಮಾನ ತಂದುಕೊಡುವ ಪ್ರಮುಖ ಮೂಲವು ಇದಾಗಿದೆ. ಈ ಎಲ್ಲಾ ಅಂಶಗಳನ್ನು ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರಿಗೆ ಮನವರಿಕೆ ಮಾಡಿಕೊಟ್ಡೆವು. ರಾಜ್ಯದ ನಿಲುವಿಗೆ ಕೇಂದ್ರ ಸರಕಾರ ಸಮ್ಮತಿಸಿದೆ ಎಂದು ಮಾಹಿತಿ ನೀಡಿದರು. ಅದಿರು ರಪ್ತು ಮಾಡುವ ಸರಕಾರದ ನಿಲುವನ್ನು ಸಿಇಸಿಯವರೆಗೂ ಮನವರಿಕೆ ಮಾಡಿಕೊಡಲಾಗುವುದು. ಕಾನೂನಿನ ಇತಿಮಿತಿಯಲ್ಲೇ ಮಾಡಲಿದ್ದೇವೆ ಎಂದು ಪುನರುಚ್ಚರಿಸಿದರು.

ದಿನದ 24 ಗಂಟೆಯವರೆಗೆ ಮೈನಿಂಗ್ ಅವಕಾಶ ಇದೆ. ಸಾಗಾಣಿಕೆಗೆ ಮಾತ್ರ 12 ಗಂಟೆ ಇದೆ. ಇದರಿಂದ ನಮ್ಮ ಕಾರ್ಖಾನೆಯವರಿಗೆ ಸಮಸ್ಯೆಯಾಗಿದೆ ಎಂದು ಮನವಿ ಬಂದಿದೆ. ಈ ಬಗ್ಗೆ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ವಿವರಣೆ ನೀಡಿದರು.

ಗಣಿ ಕಂಪನಿಗಳಿಂದ ಸಂಗ್ರಹಣೆ ಮಾಡಿರುವ ರಾಯಲ್ಟಿ ಹಣವೂ ಸುಪ್ರೀಂಕೋರ್ಟ್ ನಲ್ಲಿದೆ. ಇದನ್ನು ಬಳಸಿಕೊಂಡು ವಿವಿಧ ಸಾಮಾಜಿಕ ಚಟುವಟಿಕೆಗಳನ್ನು ನಡೆಸಬಹುದು. ಇದನ್ನು ರಾಜ್ಯಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡುವುದಾಗಿ ಹೇಳಿದರು. ಪ್ರಸ್ತುತ ರಾಜ್ಯದಲ್ಲಿ 35 ದಶಲಕ್ಷ ಮೆಟ್ರಿಕ್ ಟನ್ ಕಬ್ಬಿಣದ ಅದಿರು ಉತ್ಪಾದನೆಯಾಗುತ್ತದೆ. 2030 ರ ವೇಳೆಗೆ ಇದನ್ನು 70 ದಶಲಕ್ಷ ಮೆಟ್ರಿಕ್ ಟನ್ ಗೆ ಕೊಂಡೊಯ್ಯುವ ಗುರಿ ಹಾಕಿಕೊಳ್ಳಲಾಗಿದೆ ಎಂದು ಸಚಿವ ನಿರಾಣಿ ತಿಳಿಸಿದರು.

100 ಮೈನಿಂಗ್ ಹೊಸದಾಗಿ ಮಾಡುವ ಬಗ್ಗೆ ಗುರಿಹೊಂದಲಾಗಿದೆ. 3 ಸಾವಿರ ಅಜಿ೯ಗಳು ಬಂದಿವೆ. ಅದನ್ನು ತ್ವರಿತವಾಗಿ ವಿಲೇವಾರಿ ಮಾಡಲು ನಿರ್ಧಾರ ಮಾಡಲಾಗಿದೆ ಎಂದರು. ಆತ್ಮ ನಿರ್ಭರ್ ಅಡಿಯಲ್ಲಿ 500 ಮೈನಿಂಗ್ ಮಾಡಲು ನಿರ್ದೇಶನ ಮಾಡಲಾಗಿದೆ. ಎರಡು ವರ್ಷದಲ್ಲಿ 100 ಮೈನಿಂಗ್ ಮಾಡಲು ಶ್ರಮ ವಹಿಸುತ್ತೇವೆ. ರಾಜ್ಯದಲ್ಲಿ ಮೈನಿಂಗ್ ಸಂಪನ್ಮೂಲ ಚೆನ್ನಾಗಿದೆ. ಗೋಲ್ಡ್ ಮೈನಿಂಗ್ ರಾಜ್ಯದಲ್ಲಿ ಚೆನ್ನಾಗಿದೆ. ಖನಿಜ ಸಂಪತ್ತನ್ನು ಉಪಯೋಗಿಸಿಕೊಳ್ಳಲು ಸಲಹೆ ಬಂದಿದೆ ಎಂದರು.

ಜಾಗತಿಕ ಟೆಂಡರ್ ರಾಜ್ಯದಲ್ಲಿ ಒಟ್ಟು ಎಷ್ಟು ಪ್ರಮಾಣದಲ್ಲಿ ಅದಿರು ಇದೆ ಎಂಬುದು ಯಾರಿಗೂ ಸರಿಯಾಗಿ ತಿಳಿಯುತ್ತಿಲ್ಲ. ಹೀಗಾಗಿ ಇದನ್ನು ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಲು ಇಲಾಖೆ ತೀಮಾ೯ನಿಸಿದೆ ಎಂದು ಹೇಳಿದರು. ಎಲ್ಲಿ ಎಷ್ಟು ಪ್ರಮಾಣದಲ್ಲಿದೆ? ಇದರ ಗುಣಮಟ್ಟ ಇತ್ಯಾದಿಗಳ ಬಗ್ಗೆ ಸರಿಯಾದ ಮಾಹಿತಿ ಇಲದ ಕಾರಣ ಸಮೀಕ್ಷೆ ನಡೆಸುತ್ತೇವೆ ಎಂದು ತಿಳಿಸಿದರು.

ಯಡಿಯೂರಪ್ಪ ನಮ್ಮ ನಾಯಕರು ನಾಯಕತ್ವ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು,ಇದು ನನಗೆ ಗೊತ್ತಿಲ್ಲ. ಯಡಿಯೂರಪ್ಪ ಇಳಿ ವಯಸ್ಸಿನಲ್ಲಿಯೂ ಎಲ್ಲರನ್ನೂ ‌ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು. ಇಳಿ ವಯಸ್ಸಿನಲ್ಲಿ ಇಷ್ಟು ಕೆಲಸ ಮಾಡುತ್ತಿದ್ದಾರೆ. ಅವರ ಅನುಭವವನ್ನು ರಾಜ್ಯಕ್ಕೆ ಧಾರೆ ಎರೆದಿದ್ದಾರೆ. ಮುಂದಿನ‌ ಎರಡು ವರ್ಷದವರೆಗೆ ಅವರೇ ಮುಂದುವರೆಯಬೇಕು ಎಂದು ಅಭಿಪ್ರಾಯಪಟ್ಟರು.

ಅವರ ನೇತೃತ್ವದಲ್ಲಿ ಮುಂದಿನ ಚುನಾವಣೆ ಎದುರಿಸುತ್ತೇವೆ. ಸಿಎಂ ಸೀಟು ಖಾಲಿ ಇಲ್ಲ ಇದ್ದಿದ್ದರೆ ಮಾತನಾಡಬಹುದಿತ್ತು. ಆದರೆ ಬಿಎಸ್ ವೈ ಇದ್ದಾರೆ ಆ ಸ್ಥಾನದಲ್ಲಿ ಇದ್ದಾರೆ ಎನ್ನುವ ಮೂಲಕ ನಾಯಕತ್ವ ಬದಲಾವಣೆಯನ್ನು ತಳ್ಳಿಹಾಕಿದರು. ನಾನು ಕೊರೊನಾ ಸಂಬಂಧ ನಮ್ಮ ಇಲಾಖೆ ಬಗ್ಗೆ ತಲೆಕೆಡಿಸಿಕೊಳ್ಳುತ್ತೇವೆ. ಹೈ ಕಮಾಂಡ್ ಯಾವ ನಿರ್ಧಾರ ತೆಗೆದುಕೊಂಡರೂ ನಾವು ಅದಕ್ಕೆ ಬದ್ಧ ಎಂದು ಗೊಂದಲಗಳಿಗೆ ತೆರೆಎಳೆದರು. ಮುಂದಿನ ಚುನಾವಣೆಯಲ್ಲಿ ಎಮ್​ಎಲ್​ಎ ಸೀಟ್ ಕೊಡದೇ ಇಲ್ಲ ಎಂದು ಪಕ್ಷ ತೀಮಾ೯ನ ಮಾಡಿದರೂ ನಾವು ಅದಕ್ಕೂ ಬದ್ಧ. ನಮ್ಮ ಪಕ್ಷ ಏನೇ ಹೇಳಿದರೂ ಕೇಳುತ್ತೇವೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳ; ಗ್ರಾಮ ಪಂಚಾಯತಿ ಅಧಿಕಾರಿಗಳ ಜೊತೆ ಬಿ.ಎಸ್. ಯಡಿಯೂರಪ್ಪ ಸಂವಾದ

ಸಂಸ್ಕರಿಸಿದ ಹಾಗೂ ಸಾವಯವ ಪ್ರಮಾಣೀಕೃತ ಹಲಸಿನ ಹಣ್ಣು ಬೆಂಗಳೂರಿನಿಂದ ಜರ್ಮನಿಗೆ ರಫ್ತು

Published On - 11:08 pm, Wed, 26 May 21

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ