ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ನಡೆದಿರವುದು ತಿಳಿದಿದೆ: ಸತ್ಯ ಒಪ್ಪಿಕೊಂಡ ಗೃಹ ಸಚಿವ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿ ನಟ ದರ್ಶನ್​​ಗೆ ರಾಜಾತಿಥ್ಯ ಫೋಟೋ ವೈರಲ್​ ಬಳಿಕ ಪರಪ್ಪನ ಅಗ್ರಹಾರ ಜೈಲಿಗೆ ಗೃಹಸಚಿವ ಡಾ.ಪರಮೇಶ್ವರ್ ಭೇಟೆ ಮಾಡಿ ಅಧಿಕಾರಿಗಳನ್ನು ತೀವ್ರ ತರಾಟೆ ತೆಗೆದುಕೊಂಡಿದ್ದಾರೆ. ಬಳಿಕ ಪ್ರತಿಕ್ರಿಯಿಸಿರುವ ಅವರು, ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ನಡೆದಿರೋದು ನಿಮಗೆ ತಿಳಿದಿದೆ ಎಂದಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ನಡೆದಿರವುದು ತಿಳಿದಿದೆ: ಸತ್ಯ ಒಪ್ಪಿಕೊಂಡ ಗೃಹ ಸಚಿವ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ನಡೆದಿರವುದು ತಿಳಿದಿದೆ: ಸತ್ಯ ಒಪ್ಪಿಕೊಂಡ ಗೃಹ ಸಚಿವ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Aug 26, 2024 | 5:01 PM

ಆನೇಕಲ್​, ಆಗಸ್ಟ್​ 26: ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿ ನಟ ದರ್ಶನ್​​ಗೆ (Darshan) ರಾಜಾತಿಥ್ಯ ವಿಚಾರವಾಗಿ ಬಹಿರಂಗವಾಗುತ್ತಿದ್ದಂತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿದ ಗೃಹಸಚಿವ ಡಾ.ಪರಮೇಶ್ವರ್​ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ನಡೆದಿರೋದು ನಿಮಗೆ ತಿಳಿದಿದೆ ಎಂದು ಹೇಳಿದ್ದಾರೆ.

ತನಿಖೆ ಮಾಡಿ ಈಗಾಗಲೇ 7 ಸಿಬ್ಬಂದಿ ಅಮಾನತು ಮಾಡಲಾಗಿದೆ. ಜೈಲಿಗೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಅಧೀಕ್ಷಕರಾದ ಮಲ್ಲಿಕಾರ್ಜುನಸ್ವಾಮಿ, ಶೇಷಮೂರ್ತಿಯಿಂದ ಲೋಪವಾಗಿದೆ. ಈ ಇಬ್ಬರು ಜೈಲು​ ಅಧಿಕಾರಿಗಳನ್ನೂ ಸಹ ಅಮಾನತು ಮಾಡಿದ್ದೇವೆ. ಸಿಬ್ಬಂದಿ ಮಾತ್ರವಲ್ಲ ಅಧಿಕಾರಿಗಳನ್ನೂ ಸಹ ಸಸ್ಪೆಂಡ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ದರ್ಶನ್​​ಗೆ ರಾಜಾತಿಥ್ಯ: 7 ಜನರ ಸಸ್ಪೆಂಡ್ ಆದೇಶ ಬೆನ್ನಲ್ಲೇ ವೈರಲ್ ಆಯ್ತು ಅದೊಂದು ಆದೇಶ ಪತ್ರ

ಸಿಗರೇಟ್, ಟೀ, ಕುರ್ಚಿ ಯಾರು ತಂದು ಕೊಟ್ಟಿದ್ದೆಂದು ತನಿಖೆ ಆಗುತ್ತಿದೆ. ಈ ಸಂಬಂಧ ಈಗಾಗಲೇ ಜೈಲಿನ ವಾರ್ಡರ್ ಸೇರಿದಂತೆ ಹಲವರ ವಿರುದ್ಧ ಮೂರು ಎಫ್ಐಆರ್ ದಾಖಲಿಸಲಾಗಿದೆ. ಪರಪ್ಪನ ಅಗ್ರಹಾರ ಜೈಲಿನ ಎಲ್ಲಾ ಕಡೆ ಸಿಸಿಕ್ಯಾಮರಾ ಅಳವಡಿಸಲಾಗಿದೆ. ಇನ್ನೂ ಕೆಲವೆಡೆ ಸಿಸಿಕ್ಯಾಮರಾ ಹಾಕಲಾಗುವುದು. ಐಪಿಎಸ್ ಅಧಿಕಾರಿಗಳ ತಂಡ ರಚನೆ ಮಾಡಿ ತನಿಖೆ ಮಾಡುತ್ತೇವೆ ಎಂದಿದ್ದಾರೆ.

ಅಧಿಕಾರಿಗಳಿಗೆ ಪರಮೇಶ್ವರ್ ತೀವ್ರ ತರಾಟೆ

ಕೈದಿಗಳ ದೈನಂದಿನ ಚಟುವಟಿಕೆ ಮೇಲೆ ನಿಗಾವಹಿಸದಿರುವುದು. ಪ್ರಮುಖ‌ ಪ್ರಕರಣಗಳ ಆರೋಪಿಗಳ ಭೇಟಿ ಮಾಡಿ ಹೋದ ನಂತರ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸದಿರುವುದು ಹೀಗೆ ಹಲವು ವಿಚಾರಗಳಿಗೆ ಜೈಲಿನ ಚೀಫ್ ಸೂಪರಿಂಟ್‌ಡೆಂಡ್, ಸೂಪರಿಡೆಂಟ್ ಹಾಗೂ ಮತ್ತಿತರ ಜೈಲು ಅಧಿಕಾರಿಗಳಿಗೆ ಪರಮೇಶ್ವರ್ ತೀವ್ರ ತರಾಟೆ ತೆಗೆದುಕೊಂಡಿದ್ದಾರೆ.

ನಿಯಮಗಳನ್ನು ಮೀರಿ ಆರೋಪಿಗಳಿಗೆ ಟೀ, ಸಿಗರೇಟ್ ಮತ್ತಿತರ ಸವಲತ್ತುಗಳನ್ನು ಪೂರೈಕೆಯಾಗಿದೆ.‌ ದಿನದ 24 ಗಂಟೆಯೂ ವಾರ್ಡರ್‌ಗಳು ಕರ್ತವ್ಯದಲ್ಲಿರುತ್ತಾರೆ. ಘಟನೆ ಎಲ್ಲರ ಕಣ್ತಪ್ಪಿ ನಡೆಯಲು ಹೇಗೆ ಸಾಧ್ಯ  ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ. ಸಿಸಿಬಿ ಪೊಲೀಸರು ದಾಳಿ ನಡೆಸಿದಾಗ ಯಾವ ವಸ್ತುಗಳು ಪತ್ತೆಯಾಗಿಲ್ಲ. ಜೈಲಿನಲ್ಲಿ ಮೊಬೈಲ್ ಬಳಕೆಯಾಗುತ್ತಿದೆ ಎಂಬುದು ಕಂಡು ಬಂದಿದೆ. ಹೈ ಫ್ರಿಕ್ವೆನ್ಸಿ ಜಾಮರ್, ಅತ್ಯುತ್ತಮ ಗುಣಮಟ್ಟದ ಮೆಟಲ್ ಡಿಟೆಕ್ಟರ್ ಯಂತ್ರ, ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಇಷ್ಟೆಲ್ಲ ಬಂದೋಬಸ್ತ್,‌ ಪರಿಶೀಲನೆ ನಡುವೆಯೂ ಕಾರಾಗೃಹದೊಳಗೆ ಸಿಗರೇಟ್, ಮೊಬೈಲ್ ತಲುಪಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದರ್ಶನ್ ಸಲುವಾಗಿ ಜೈಲು ಅಧಿಕಾರಿಗಳ ಕರ್ತವ್ಯ ಲೋಪ; ಗೃಹ ಸಚಿವರಿಗೆ ಪ್ರಶ್ನೆಗಳ ಸುರಿಮಳೆ

ರಾಜ್ಯದ ಎಲ್ಲ ಬಂಧಿಖಾನೆಗಳಲ್ಲಿ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ‌ ಪೊಲೀಸ್​ ಮಹಾನಿರ್ದೇಶಕ ಅಲೋಕ್ ಮೋಹನ್, ಕಾರಾಗೃಹ ಮತ್ತು ಸುಧಾರಣಾ‌ ಸೇವೆ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರಿಗೆ ಸೂಚನೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
Daily Devotional: ಎಕ್ಕದ ಗಣಪತಿಯ ಮಹತ್ವ ತಿಳಿಯಿರಿ
Daily Devotional: ಎಕ್ಕದ ಗಣಪತಿಯ ಮಹತ್ವ ತಿಳಿಯಿರಿ
Nithya Bhavishya: ಈ ರಾಶಿಯವರಿಗೆ ಆಸ್ತಿ ಖರೀದಿಯ ಯೋಜನೆ ಯಶಸ್ವಿಯಾಗಬಹುದು
Nithya Bhavishya: ಈ ರಾಶಿಯವರಿಗೆ ಆಸ್ತಿ ಖರೀದಿಯ ಯೋಜನೆ ಯಶಸ್ವಿಯಾಗಬಹುದು