ದರ್ಶನ್ ಕಾಂಗ್ರೆಸ್ ಪರ ಕೆಲಸ ಮಾಡಿದರೆಂದು ಶಾಮಿಯಾನ ಹಾಕಿ ರಕ್ಷಣೆ ಮಾಡುತ್ತಿದ್ದಾರಾ: ಶೋಭಾ ಕರಂದ್ಲಾಜೆ ಪ್ರಶ್ನೆ

| Updated By: ಗಣಪತಿ ಶರ್ಮ

Updated on: Jun 14, 2024 | 1:54 PM

ನಟ ದರ್ಶನ್ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ ಮಾಡಿದ್ದರು. ಇದನ್ನೇ ಮುಂದಿಟ್ಟುಕೊಂಡು ಇದೀಗ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪರ ಕೆಲಸ ಮಾಡಿದ್ದಕ್ಕೆ ದರ್ಶನ್​ರನ್ನು ರಕ್ಷಣೆ ಮಾಡಲಾಗುತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ.

ದರ್ಶನ್ ಕಾಂಗ್ರೆಸ್ ಪರ ಕೆಲಸ ಮಾಡಿದರೆಂದು ಶಾಮಿಯಾನ ಹಾಕಿ ರಕ್ಷಣೆ ಮಾಡುತ್ತಿದ್ದಾರಾ: ಶೋಭಾ ಕರಂದ್ಲಾಜೆ ಪ್ರಶ್ನೆ
ಶೋಭಾ ಕರಂದ್ಲಾಜೆ
Follow us on

ಬೆಂಗಳೂರು, ಜೂನ್ 14: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ (Congress Givernment) ಅಸ್ತಿತ್ವಕ್ಕೆ ಬಂದ ಮೇಲೆ ಯಾರಿಗೂ ರಕ್ಷಣೆ ಇಲ್ಲದಂತಾಗಿದೆ. ಸರ್ಕಾರ ಕೊಲೆಗಡುಕರ ಪರ ಇದೆ. ಕೊಲೆಗಡುಕರಿಗೆ ರಾಜ್ಯದಲ್ಲಿ ಭಯ ಇಲ್ಲ. ನಟ ದರ್ಶನ್ (Darshan) ಕಾಂಗ್ರೆಸ್ ಪರ ಚುನಾವಣೆಯಲ್ಲಿ ಕೆಲಸ ಮಾಡಿದರು ಎಂದು ಅವರನ್ನು ಶಾಮಿಯಾನ ಹಾಕಿ ರಕ್ಷಣೆ ಮಾಡುತ್ತಿದ್ದಾರಾ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಪ್ರಶ್ನಿಸಿದರು. ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಬೆಂಗಳೂರಿಗೆ ಬಂದ ಸಂದರ್ಭದಲ್ಲಿ ಮಾತನಾಡಿದ ಅವರು, ದರ್ಶನ್ ಇರುವ ಠಾಣೆಗೆ ರಕ್ಷಣೆ ಕೊಡಲಾಗಿದೆ. ಜನರಿಗೊಂದು ಕಾನೂನು, ದೊಡ್ಡವರಿಗೊಂದು ಕಾನೂನು, ಕಾಂಗ್ರೆಸ್ ಕಾರ್ಯಕರ್ತರಿಗೊಂದು ಕಾನೂನು ಎಂಬ ಸಂದೇಶವನ್ನು ಸರ್ಕಾರ ರವಾನಿಸಿದೆ ಎಂದರು.

ಕಾನೂನು ರೀತಿಯಲ್ಲಿ ಸರ್ಕಾರ ಕ್ರಮ ವಹಿಸಲಿ. ಕೊಲೆಗಡುಕರ ರಕ್ಷಣೆಯನ್ನು ಸರ್ಕಾರ, ಪೊಲೀಸರು ಮಾಡಬಾರದು ಎಂದು ಶೋಭಾ ಹೇಳಿದರು.

ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ವಿಚಾರವಾಗಿ ಪ್ರತಿಕ್ರಿಯಿಸಿ, ಈ ಕೇಸಿನ ಮಾಹಿತಿ ಗೊತ್ತಿಲ್ಲ. ಮಾಧ್ಯಮದ ಮೂಲಕ ಅಷ್ಟೇ ನೋಡಿದ್ದೇನೆ. ಯಡಿಯೂರಪ್ಪ ಅವರ ಸುದೀರ್ಘವಾದ ರಾಜಕಾರಣ ನೋಡಿದ್ದೇನೆ. ಇದರಲ್ಲಿ ಸರ್ಕಾರದ ಪಾತ್ರದ ಬಗ್ಗೆ ಗೊತ್ತಿಲ್ಲ. ನ್ಯಾಯಾಲಯ ನೆಲದ ಕಾನೂನು ಎತ್ತಿ ಹಿಡಿಯಲಿದೆ. ಯಡಿಯೂರಪ್ಪ ವಿರುದ್ಧದ ಪ್ರಕರಣ ಜನ ಗಮನಿಸುತ್ತಿದ್ದಾರೆ ಎಂದರು.

ಇದನ್ನೂ ಓದಿ: ಯಡಿಯೂರಪ್ಪ ಬೇಗ ಬಂದರೆ ಒಳ್ಳೆಯದು; ಪರಮೇಶ್ವರ್ ಹೀಗಂದಿದ್ಯಾಕೆ? ವಿಡಿಯೋ ನೋಡಿ

ಈ ತರಹದ ಆರೋಪಗಳು ಯಡಿಯೂರಪ್ಪ ವಿರುದ್ಧ ಈ ಹಿಂದೆ ಯಾವತ್ತೂ ಕೇಳಿ ಬಂದಿರಲಿಲ್ಲ. ಈಗ ಯಾಕೆ ಅವರ ಬಗ್ಗೆ ಈ ತರಹ ಆರೋಪಗಳು ಬರುತ್ತಿವೆ ಎಂಬುದನ್ನು ಜನ ಗಮನಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಎಲ್ಲರ ಮೇಲೆ ಕೇಸ್ ಹಾಕುವಂತಹ ಪ್ರಕರಣಗಳನ್ನು ಕೂಡಾ ಜನ ಗಮನಿಸುತ್ತಿದ್ದಾರೆ ಎಂದು ಶೋಭಾ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ