ಸರ್ಕಾರದ ನಿರ್ಧಾರ ಖಂಡಿಸಿ ನಾಳೆ ಕರುನಾಡು ಬಂದ್ ಆಗುತ್ತಾ? ಬಂದ್ ಆದ್ರೆ ಏನಿರುತ್ತೆ..? ಏನಿರಲ್ಲ..? ಕಂಪ್ಲೀಟ್ ಡಿಟೇಲ್ಸ್

ನಾಳೆ ಕರ್ನಾಟಕ ಬಂದ್​ಗೆ ಕನ್ನಡ ಸಂಘಟನೆಗಳು ಕರೆ ಕೊಟ್ಟಿವೆ. ಮರಾಠ ನಿಗಮ ಸ್ಥಾಪನೆ ವಿರೋಧಿಸಿ ನೀಡಿರೋ ಈ ಬಂದ್​ ಉಸ್ತುವಾರಿಯನ್ನ ಹೊತ್ತಿರೋ ವಾಟಾಳ್ ನಾಗರಾಜ್, ಹೇಗಾದ್ರೂ ಮಾಡಿ ನಾಳಿನ ಬಂದ್ ಯಶಸ್ವಿಗೊಳಿಸಲೇಬೇಕು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ನಾಳಿನ ಬಂದ್ ಹೇಗಿರುತ್ತೆ? ಕರ್ನಾಟಕ ಕಂಪ್ಲೀಟ್ ಬಂದ್ ಆಗುತ್ತಾ? ಬಂದ್ ಆದ್ರೆ ಏನಿರುತ್ತೆ..? ಏನಿರಲ್ಲ..? ಅನ್ನೋದನ್ನ ಡಿಟೇಲಾಗಿ ಇಲ್ಲಿ ಓದಿ.

ಸರ್ಕಾರದ ನಿರ್ಧಾರ ಖಂಡಿಸಿ ನಾಳೆ ಕರುನಾಡು ಬಂದ್ ಆಗುತ್ತಾ? ಬಂದ್ ಆದ್ರೆ ಏನಿರುತ್ತೆ..? ಏನಿರಲ್ಲ..? ಕಂಪ್ಲೀಟ್ ಡಿಟೇಲ್ಸ್
ಪ್ರಾತಿನಿಧಿಕ ಚಿತ್ರ
Follow us
ಆಯೇಷಾ ಬಾನು
|

Updated on: Dec 04, 2020 | 7:25 AM

ಬೆಂಗಳೂರು: ಡಿಸೆಂಬರ್ 5ರಂದು ಬಂದ್.. ಬಂದ್.. ಬಂದ್.. ಕರ್ನಾಟಕದ, ಕನ್ನಡದ, ಕನ್ನಡಿಗರ ಹಿತರಕ್ಷಣೆಗೆ ನಾವು ಬದ್ಧ. ಸರ್ಕಾರದ ಯಾವುದೇ ಬೆದರಿಕೆಗೆ ನಾವು ಬಗ್ಗಲ್ಲ. ಸರ್ಕಾರ ನಮ್ಮ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿದ್ರೂ ನಾವು ಸುಮ್ಮನಿರಲ್ಲ. ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆಗೆ ನಮ್ಮ ವಿರೋಧವಿದೆ. ಹೀಗಾಗಿ ನಾವು ಬಂದ್ ಮಾಡೇ ಮಾಡ್ತೀವಿ ಅಂತಾ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಗುಡುಗಿದ್ದು, ನಾಳೆ ಕರ್ನಾಟಕ ಕಂಪ್ಲೀಟ್ ಬಂದ್ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಇದಕ್ಕೆ ಹಲವು ಕನ್ನಡ ಸಂಘಟನೆಗಳು ಸಾಥ್ ನೀಡಿವೆ. ಹೀಗಾಗಿ ನಾಳೆ ಕರ್ನಾಟಕ ಸಂಪೂರ್ಣ ಸ್ತಬ್ಧವಾಗೋದ್ರಲ್ಲಿ ಯಾವುದೇ ಅನುಮಾನವಿಲ್ಲ.

ನಾಳೆ ಸಂಪೂರ್ಣ ಸ್ತಬ್ಧವಾಗಲಿದೆ ಕರ್ನಾಟಕ! ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಘೋಷಣೆ ಮಾಡ್ತಿದ್ದಂತೆ, ಕನ್ನಡ ಪರ ಸಂಘಟನೆಗಳು ಸಿಡಿದೆದಿದ್ವು. ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸಿದ್ರೆ, ಕನ್ನಡಿಗರ ಹಕ್ಕುಗಳಿಗೆ ಧಕ್ಕೆಯಾಗುತ್ತೆ ಅಂತಾ ವಾದ ಮಂಡಿಸಿದ್ವು. ಇದೇ ಕಾರಣಕ್ಕೆ ಬಹುತೇಕ ಕನ್ನಡ ಸಂಘಟನೆಗಳು ಬಂದ್​ಗೆ ಬೆಂಬಲ ವ್ಯಕ್ತಪಡಿಸಿವೆ. ಕರವೇ ನಾರಾಯಣಗೌಡ ಬಣ, ಕರವೇ ಪ್ರವೀಣ್ ಶೆಟ್ಟಿ ಬಣ, ರಾಜ್​ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ಮುಖ್ಯಮಂತ್ರಿ ಚಂದ್ರು, ಬಿ.ಟಿ.ಲಲಿತಾನಾಯಕ್ ಸೇರಿ ಹಲವು ಸಾಹಿತಿಗಳು ಬಂದ್​ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಬಹುತೇಕ ಕನ್ನಡ ಸಂಘಟನೆಗಳು ಬಂದ್​ಗೆ ಬೆಂಬಲ ವ್ಯಕ್ತಪಡಿಸಿರೋದ್ರಿಂದ ನಾಳೆ ರಾಜ್ಯ ಕಂಪ್ಲೀಟ್ ಬಂದ್ ಆಗೋ ಸಾಧ್ಯತೆ ಇದೆ.

ನಾಳೆ ಏನಿರುತ್ತೆ..? ನಾಳೆ ಕರ್ನಾಟಕ ಬಂದ್​ ಆದ್ರೂ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು, ವೈದ್ಯಕೀಯ ಸೇವೆ, ಮೆಡಿಕಲ್ ಸ್ಟೋರ್​ಗಳು, ವೈದ್ಯಕೀಯ ತುರ್ತು ಸೇವೆಗಳು, ಹಾಲು, ಹಣ್ಣು-ತರಕಾರಿ, ದಿನಸಿ ವಸ್ತುಗಳ ಮಾರಾಟ ಎಂದಿನಂತೆ ಇರಲಿವೆ. ರೈಲು ಸೇವೆ, ಮೆಟ್ರೋ ಸಂಚಾರ, ಬಸ್​ ಸಂಚಾರದಲ್ಲಿ ಯಾವುದೇ ವ್ಯತ್ಯಯವಾಗೋ ಸಾಧ್ಯತೆ ಇಲ್ಲ. ಓಲಾ, ಉಬರ್, ಟ್ಯಾಕ್ಸಿ, ಕ್ಯಾಬ್​ಗಳು ಸಹ ಎಂದಿನಂತೆ ಸಂಚರಿಸಲಿವೆ. ಲಾರಿ ಮಾಲೀಕರ ಸಂಘದಿಂದ ಬಂದ್​ಗೆ ಬೆಂಬಲ ವ್ಯಕ್ತವಾಗದೇ ಇರೋದ್ರಿಂದ ಲಾರಿಗಳು ಎಂದಿನಂತೆ ಸಂಚರಿಸಲಿವೆ. ಬಾರ್ & ರೆಸ್ಟೋರೆಂಟ್, ಥಿಯೇಟರ್​, ಮಲ್ಟಿಪ್ಲೆಕ್ಸ್​ಗಳು, ಮಾಲ್​ಗಳು ಸಹ ಎಂದಿನಂತೆ ಕಾರ್ಯ ನಿರ್ವಹಿಸಲಿವೆ.

ನಾಳೆ ಏನಿರಲ್ಲ..? ನಾಳೆಯ ಕರ್ನಾಟಕ ಬಂದ್​ಗೆ ಆಟೋ ಮಾಲೀಕರ ಸಂಘ ಬೆಂಬಲ ಸೂಚಿಸಿರೋದ್ರಿಂದ ನಾಳೆ ಬೆಳಗ್ಗೆಯಿಂದ ಸಂಜೆಯವರೆಗೆ ಆಟೋಗಳು ರಸ್ತೆಗಿಳಿಯಲ್ಲ. ಬಹುತೇಕ ಕಾರ್ಮಿಕ ಸಂಘಟನೆಗಳು ಬಂದ್​ಗೆ ಬೆಂಬಲ ಸೂಚಿಸಿರೋದ್ರಿಂದ ಗಾರ್ಮೆಂಟ್ಸ್​ಗಳು, ಕೈಗಾರಿಕಾ ಪ್ರದೇಶಗಳಲ್ಲಿ ಕಾರ್ಯ ಸ್ಥಗಿತವಾಗಲಿದೆ. ಬೀದಿ ಬದಿ ವ್ಯಾಪಾರಿಗಳು ಬೆಂಬಲ ನೀಡಿರೋದ್ರಿಂದ ಬೀದಿ ಬದಿ ವ್ಯಾಪಾರ ಇರಲ್ಲ. ಇದೇ ರೀತಿ ನಾಳೆಯ ಬಂದ್​ಗೆ ಸರ್ಕಾರಿ ನೌಕರರು ಬೆಂಬಲ ಸೂಚಿಸಿದ್ದಾರೆ.

ಬಂದ್​ಗೆ ನೈತಿಕ ಬೆಂಬಲ..! ಕೊರೊನಾ ಹಿನ್ನೆಲೆಯಲ್ಲಿ ಈಗಾಗಲೇ ನಷ್ಟದಲ್ಲಿರೋದ್ರಿಂದ ಹೋಟೆಲ್ ಮಾಲೀಕರ ಸಂಘ ನೈತಿಕ ಬೆಂಬಲ ನೀಡಿದೆ. ಹೀಗಾಗಿ ಹೋಟೆಲ್ ಸೇವೆಯಲ್ಲಿ ಯಾವುದೇ ವ್ಯತ್ಯಯವಾಗಲ್ಲ. ಇದೇ ರೀತಿ ಪೆಟ್ರೋಲ್-ಡೀಸೆಲ್ ಬಂಕ್​ಗಳ ಮಾಲೀಕರ ಸಂಘವೂ ಬಂದ್​ಗೆ ನೈತಿಕ ಬೆಂಬಲ ವ್ಯಕ್ತಪಡಿಸಿದೆ. ಕೊರೊನಾ ಹಿನ್ನೆಲೆಯಲ್ಲಿ ಐಟಿ-ಬಿಟಿ ಉದ್ಯೋಗಿಗಳು ವರ್ಕ್​ಫ್ರಂ ಹೋಂ ಮಾಡ್ತಿದ್ದಾರೆ. ಇವರೂ ಸಹ ಬಂದ್​ಗೆ ನೈತಿಕ ಬೆಂಬಲ ನೀಡಿದ್ದಾರೆ.

ನಾಳೆ ಕನ್ನಡ ಸಂಘಟನೆಗಳು ಬಂದ್​ಗೆ ಕರೆ ನೀಡಿರೋದ್ರಿಂದ ಬೆಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶಿಸಿದ್ದಾರೆ. ಡಿಸೆಂಬರ್ 4ರ ಮಧ್ಯರಾತ್ರಿಯಿಂದಲೇ ಬೆಂಗಳೂರಿನಲ್ಲಿ ಬಿಗಿ ಭದ್ರತೆ ಕೈಗೊಳ್ಳಲು ಸೂಚಿಸಿದ್ದಾರೆ. ಡಿಸೆಂಬರ್ 5ರ ಮುಂಜಾನೆ 4.30ರಿಂದ ಹೊಯ್ಸಳ ಸಿಬ್ಬಂದಿ ಮೆಜೆಸ್ಟಿಕ್ ಬಸ್ ನಿಲ್ದಾಣ, ಮಾರ್ಕೆಟ್ ಬಸ್ ನಿಲ್ದಾಣ, ಮೆಟ್ರೋ ನಿಲ್ದಾಣಗಳಿಗೆ ಹೆಚ್ಚಿನ ಆದ್ಯತೆ ನೀಡಿ ಗಸ್ತು ತಿರುಗುವಂತೆ ಸೂಚಿಸಿದ್ದಾರೆ.

ಒಟ್ನಲ್ಲಿ ನಾಳೆಯ ಕರ್ನಾಟಕ ಬಂದ್ ಯಶಸ್ವಿಗೊಳಿಸಲು ಕನ್ನಡ ಸಂಘಟನೆಗಳು ಸಾಕಷ್ಟು ಸಿದ್ಧತೆಗಳನ್ನ ಮಾಡಿಕೊಂಡಿವೆ. ಇದೇ ರೀತಿ ಬಂದ್ ಶಾಂತಿಯುತವಾಗಿ ನಡೆಯಲು ಸರ್ಕಾರ ಮತ್ತು ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನ ಕೈಗೊಂಡಿವೆ. ಹೀಗಾಗಿ ನಾಳೆಯ ಬಂದ್ ಹೇಗಿರಲಿದೆ ಅನ್ನೋ ಕುತೂಹಲ ಈಗ ಉಳಿದಿದೆ.

ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ