AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಕ್ಕೆ ಹಂಚಲಾಗಿರುವ ಆಕ್ಸಿಜನ್ ಸಾಲುತ್ತಿದೆಯೇ? ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ

Karnataka High Court: ಹೈಕೋರ್ಟ್ ಸೂಚನೆಯಂತೆ ಕೇಂದ್ರ ಸರ್ಕಾರ 1200 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆಗೆ ಕ್ರಮ ಕೈಗೊಂಡಿದ್ದು, ನಾಳೆ ಈ ಸಂಬಂಧ ಅಡ್ವೊಕೆಟ್ ಜನರಲ್ ರೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸುವುದಾಗಿ ಕೇಂದ್ರ ಸರ್ಕಾರದ ಎಎಸ್‌ಜಿ ಎಂ.ಬಿ.ನರಗುಂದ್ ಹೈಕೋರ್ಟ್ ಗೆ ತಿಳಿಸಿದ್ದಾರೆ.

ರಾಜ್ಯಕ್ಕೆ ಹಂಚಲಾಗಿರುವ ಆಕ್ಸಿಜನ್ ಸಾಲುತ್ತಿದೆಯೇ? ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ
ಕರ್ನಾಟಕ ಹೈಕೋರ್ಟ್
guruganesh bhat
|

Updated on:May 11, 2021 | 6:03 PM

Share

ಬೆಂಗಳೂರು: ಹೈಕೋರ್ಟ್ ಆದೇಶದ ನಂತರ ರಾಜ್ಯಕ್ಕೆ 1135 ಮೆಟ್ರಿಕ್ ಟನ್‌  ಆಕ್ಸಿಜನ್ ಪೂರೈಕೆಯಾಗುತ್ತಿದೆ ಎಂದು ಹೈಕೋರ್ಟ್​ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಜಿಲ್ಲಾವಾರು ಆಕ್ಸಿಜನ್ ಹಂಚಿಕೆಗೂ ಮಾರ್ಗಸೂಚಿ ರೂಪಿಸಲಾಗಿದೆ ಎಂದು ಹೈಕೋರ್ಟ್​ಗೆ ತಿಳಿಸಿದೆ.  ಹೈಕೋರ್ಟ್ ಸೂಚನೆಯಂತೆ ಕೇಂದ್ರ ಸರ್ಕಾರ 1200 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆಗೆ ಕ್ರಮ ಕೈಗೊಂಡಿದ್ದು, ನಾಳೆ ಈ ಸಂಬಂಧ ಅಡ್ವೊಕೆಟ್ ಜನರಲ್ ರೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸುವುದಾಗಿ ಕೇಂದ್ರ ಸರ್ಕಾರದ ಎಎಸ್‌ಜಿ ಎಂ.ಬಿ.ನರಗುಂದ್ ಹೈಕೋರ್ಟ್ ಗೆ ತಿಳಿಸಿದ್ದಾರೆ.

ಸರ್ಕಾರದ ಈ ಪ್ರತಿಕ್ರಿಯೆಯನ್ನು ಆಲಿಸಿದ ಕೋರ್ಟ್, ಹಂಚಲಾಗಿರುವ ಆಕ್ಸಿಜನ್ ಪ್ರಮಾಣ ಸಾಕಾಗುತ್ತಿದೆಯೇ?  ಮುಂದಿನ ಒಂದು ವಾರದ ಬೇಡಿಕೆ ಲೆಕ್ಕಾಚಾರ ಮಾಡಿದ್ದೀರಾ? ಎಂದು ಸರ್ಕಾರವನ್ನು ಪ್ರಶ್ನಿಸಿದೆ. ಈ ಬಗ್ಗೆ ಅಂಕಿ ಅಂಶ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಸಿಜೆ ಎ.ಎಸ್.ಒಕಾ, ನ್ಯಾ.ಅರವಿಂದ ಕುಮಾರ್​ರವರಿದ್ದ ಪೀಠ ಸರ್ಕಾರಕ್ಕೆ ಈ ಸೂಚನೆ ನೀಡಿದೆ.

ಲಸಿಕೆ ವಿತರಣೆ ಕುರಿತೂ ಕೋರ್ಟ್ ಸೂಚನೆ ರಾಜ್ಯದಲ್ಲಿ 2ನೇ ಡೋಸ್ ವ್ಯಾಕ್ಸಿನ್ ಕೊರತೆ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿರುವ ಹೈಕೋರ್ಟ್ ತಕ್ಷಣ ಕ್ರಮ ಕೈಗೊಳ್ಳುವಂತೆ ಕೇಂದ್ರ, ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ರಾಜ್ಯದಲ್ಲಿ 2ನೇ ಡೋಸ್ ವ್ಯಾಕ್ಸಿನ್ ಕೊರತೆ ಎದುರಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 2ನೇ ಡೋಸ್ ವ್ಯಾಕ್ಸಿನ್‌ ಪಡೆಯಬೇಕಾದ 26 ಲಕ್ಷ ಜನರಿಗೆ ವ್ಯಾಕ್ಸಿನ್ ಸಿಕ್ತಿಲ್ಲ. ರಾಜ್ಯ ಸರ್ಕಾರ ಸಲ್ಲಿಸಿದ ಅಂಕಿ ಅಂಶ ಪರಿಶೀಲಿಸಿದ ಹೈಕೋರ್ಟ್ ರಾಜ್ಯದಲ್ಲಿ ತಕ್ಷಣಕ್ಕೆ 26 ಲಕ್ಷ ಜನರಿಗೆ 2ನೇ ಡೋಸ್ ಲಸಿಕೆ ನೀಡಬೇಕಿದೆ. ಹೀಗಾಗಿ ಲಸಿಕೆ ಪೂರೈಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 1ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದ 28 ದಿನಗಳಲ್ಲಿ 2ನೇ ಡೋಸ್ ಲಸಿಕೆ ಪಡೆಯಬೇಕಿದೆ. 1ನೇ ಡೋಸ್ ಕೋವಿಶೀಲ್ಡ್‌ ಲಸಿಕೆ ಪಡೆದ 4 ರಿಂ 6 ವಾರಗಳೊಳಗೆ 2ನೇ ಡೋಸ್ ಪಡೆಯಬೇಕಿದೆ. ಆದರೆ ಸದ್ಯಕ್ಕೆ 26 ಲಕ್ಷ ಜನರಿಗೆ ನಿಗದಿತ ಅವಧಿಯೊಳಗೆ ಲಸಿಕೆ ಹಾಕಲು ಸಾಧ್ಯವಾಗದ ಬಗ್ಗೆ ಹೈಕೋರ್ಟ್ ಆತಂಕ ವ್ಯಕ್ತಪಡಿಸಿದೆ. ಕರ್ನಾಟಕದಲ್ಲಿ ಕೊವಿಡ್ ಲಸಿಕೆ ವಿತರಣೆ ಸಂಬಂಧ ಹೈಕೋರ್ಟ್​ ಅಸಮಾಧಾನ ವ್ಯಕ್ತಪಡಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಡಿಸಿಎಂ ಡಾ.ಅಶ್ವತ್ಥ ನಾರಾಯಣ, ‘ಹೈಕೋರ್ಟ್​ ಸೂಚನೆಯನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ಎಂದು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಕರ್ನಾಟಕ ಮೊದಲ ಡೋಸ್​ ಲಸಿಕೆ ಪಡೆದವರಿಗೆ 2ನೇ ಡೋಸ್​ ಲಸಿಕೆ ನೀಡಲು ಸರ್ಕಾರ ಆದ್ಯತೆ ನೀಡಲಿದೆ. ಯಾವುದೇ ಲೋಪ ಆಗದಂತೆ ಎಲ್ಲರಿಗೂ ಲಸಿಕೆ ಹಾಕುತ್ತೇವೆ. 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವಲ್ಲಿ ಲೋಪವಾಗಲ್ಲ. ಉತ್ಪಾದನೆ, ಪೂರೈಕೆಗೆ ಅನುಗುಣವಾಗಿ ಲಸಿಕೆ ಹಾಕಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಜನರ ಮೇಲೆ ಲಾಠಿ ಎತ್ತಬೇಡಿ: ಕರ್ನಾಟಕ ಹೈಕೋರ್ಟ್

ಆಹಾರ ಭದ್ರತೆ ಒದಗಿಸಲು ಹೈಕೋರ್ಟ್ ಸೂಚನೆ; ಮೇ 24ರವರೆಗೆ ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತ ಊಟ

(Is the oxygen allocated to the Karnataka is sufficient High Court Question to Govt)

Published On - 5:46 pm, Tue, 11 May 21