AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್-ಇರಾನ್ ಸಂಘರ್ಷ: ಬೆಂಗಳೂರಿನಲ್ಲಿ ಗಗನಕ್ಕೇರಲಿದೆ ಅಡುಗೆ ಎಣ್ಣೆ ದರ, ಮೊಟ್ಟೆ ಉದ್ಯಕ್ಕೆ ಭಾರೀ ನಷ್ಟ

ಮಧ್ಯಪ್ರಾಚ್ಯ ಯುದ್ಧದ ಭೀತಿಯಿಂದಾಗಿ ಕರ್ನಾಟಕದಲ್ಲಿಯೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಅಡುಗೆ ಎಣ್ಣೆ ದರ ಲೀಟರ್‌ಗೆ 5 ರೂ. ಏರಿಕೆಯಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ. ಮಧ್ಯಪ್ರಾಚ್ಯ ದೇಶಗಳಿಗೆ ಮೊಟ್ಟೆ ರಫ್ತು ಸಂಪೂರ್ಣ ಸ್ಥಗಿತಗೊಂಡಿದ್ದು, ಕರ್ನಾಟಕದ ಉತ್ಪಾದಕರು ನಷ್ಟ ಅನುಭವಿಸುತ್ತಿದ್ದಾರೆ.

ಇಸ್ರೇಲ್-ಇರಾನ್ ಸಂಘರ್ಷ: ಬೆಂಗಳೂರಿನಲ್ಲಿ ಗಗನಕ್ಕೇರಲಿದೆ ಅಡುಗೆ ಎಣ್ಣೆ ದರ, ಮೊಟ್ಟೆ ಉದ್ಯಕ್ಕೆ ಭಾರೀ ನಷ್ಟ
ಮೊಟ್ಟೆ ಉದ್ಯಕ್ಕೆ ಭಾರೀ ನಷ್ಟImage Credit source: tv9
ಗಣಪತಿ ಶರ್ಮಾ
|

Updated on: Mar 05, 2026 | 2:19 PM

Share

ಬೆಂಗಳೂರು, ಮಾರ್ಚ್ 5: ಇಸ್ರೇಲ್-ಇರಾನ್ ಸಂಘರ್ಷದಿಂದ (Israel-Iran Conflict) ಉಂಟಾಗಿರುವ ಗಲ್ಫ್ ಯುದ್ಧದ ಭೀತಿಯು ಜಾಗತಿಕವಾಗಿ ತಲ್ಲಣ ಸೃಷ್ಟಿಸಿದೆ. ಇದರ ಪರಿಣಾಮ ಭಾರತದ, ಅದರಲ್ಲೂ ಕರ್ನಾಟಕದ ಜನಸಾಮಾನ್ಯರ ಮೇಲೆ ನೇರವಾಗಿ ಬೀರಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ವಿಶೇಷವಾಗಿ ಅಡುಗೆ ಎಣ್ಣೆ ಮತ್ತು ಮೊಟ್ಟೆ ಉದ್ಯಮಕ್ಕೆ ಭಾರಿ ನಷ್ಟ ಉಂಟಾಗಿದೆ. ಬೆಂಗಳೂರಿನಲ್ಲಿ (Bangalore) ಅಡುಗೆ ಎಣ್ಣೆಯ ದರ (Cooking Oil Prices) ಲೀಟರ್‌ಗೆ 5 ರೂಪಾಯಿ ಏರಿಕೆಯಾಗಿದೆ. ತರಗುಪೇಟೆಯ ಅಡುಗೆ ಎಣ್ಣೆ ವರ್ತಕ ಸತೀಶ್ ಪ್ರಕಾರ, ಕಳೆದ ಮೂರ್ನಾಲ್ಕು ದಿನಗಳಿಂದ ಬೇಡಿಕೆಗೆ ತಕ್ಕಂತೆ ಎಣ್ಣೆ ಸರಬರಾಜು ಆಗುತ್ತಿಲ್ಲ.

ಮುಂದಿನ 10 ದಿನಗಳಲ್ಲಿ ಇದೇ ಪರಿಸ್ಥಿತಿ ಮುಂದುವರೆದರೆ ಎಣ್ಣೆ ಲಭ್ಯವಾಗುವುದು ಕಷ್ಟ ಎಂದು ಕಂಪನಿಗಳು ಕೂಡ ಹೇಳಿವೆ. ಜಾಗತಿಕ ಯುದ್ಧಗಳಿಂದಾಗಿ ಪೂರೈಕೆ ಸರಪಳಿಗೆ ಅಡ್ಡಿಯಾಗಿದ್ದು, ಹಡಗುಗಳ ಸಂಚಾರಕ್ಕೆ ಸಮಸ್ಯೆಯಾಗಿದೆ. ಕೆಂಪು ಸಮುದ್ರದಲ್ಲಿನ ದಾಳಿಗಳಿಂದಾಗಿ, ಹಡಗುಗಳು ಆಫ್ರಿಕಾ ಮೂಲಕ 45 ದಿನಗಳ ಹೆಚ್ಚುವರಿ ಪ್ರಯಾಣವನ್ನು ಕೈಗೊಳ್ಳಬೇಕಾಗಿದೆ. ಈ ವಿಳಂಬದಿಂದಾಗಿ ದೇಶದಲ್ಲಿ ಮುಂದಿನ ದಿನಗಳಲ್ಲಿ ಅಡುಗೆ ಎಣ್ಣೆಯ ಬೆಲೆ ಲೀಟರ್‌ಗೆ 200 ರಿಂದ 250 ರೂಪಾಯಿ ತಲುಪುವ ಸಾಧ್ಯತೆಯಿದೆ ಎಂದು ವರ್ತಕರು ಆತಂಕ ವ್ಯಕ್ತಪಡಿಸಿದ್ದಾರೆ. ಈಗಿನ ಪರಿಸ್ಥಿತಿ ಮುಂದುವರೆದರೆ, ದಾಸ್ತಾನು ಕೊರತೆಯಿಂದ ಜನಸಾಮಾನ್ಯರು ಹೆಚ್ಚಿನ ಬೆಲೆ ತೆರಬೇಕಾಗಲಿದೆ.

ಸೌದಿ ಅರೇಬಿಯಾ, ಓಮನ್ ಮತ್ತು ಕತಾರ್‌ಗೆ ಮೊಟ್ಟೆ ರಫ್ತು ಸ್ಥಗಿತ

ಯುದ್ಧದ ಪರಿಣಾಮ ಮೊಟ್ಟೆ ಉದ್ಯಮದ ಮೇಲೂ ಬೀರಿದೆ. ಭಾರತದಿಂದ ಮಧ್ಯಪ್ರಾಚ್ಯ ದೇಶಗಳಾದ ಸೌದಿ ಅರೇಬಿಯಾ, ಓಮನ್ ಮತ್ತು ಕತಾರ್‌ಗೆ ಪ್ರತಿತಿಂಗಳು ಒಂದು ಕೋಟಿಗೂ ಹೆಚ್ಚು ಮೊಟ್ಟೆಗಳು ರಫ್ತಾಗುತ್ತಿದ್ದವು. ಆದರೆ, ಪ್ರಸ್ತುತ ಯುದ್ಧದ ಭೀತಿಯಿಂದ ಈ ರಫ್ತು ಸಂಪೂರ್ಣ ಸ್ಥಗಿತಗೊಂಡಿದೆ. ಇರಾನ್‌ನಿಂದ ಗಲ್ಫ್ ರಾಷ್ಟ್ರಗಳ ಮೇಲಿನ ದಾಳಿಗಳು ಮತ್ತು ಹಾರ್ಮುಜ್ ಜಲಸಂಧಿಯಲ್ಲಿನ ಸಂಘರ್ಷಗಳಿಂದಾಗಿ ಸಾಗಣೆ ದೊಡ್ಡ ಸವಾಲಾಗಿದೆ. ರಫ್ತು ನಿಲುಗಡೆಯಿಂದಾಗಿ ಉತ್ಪಾದನೆಯಾದ ಮೊಟ್ಟೆ ಇಲ್ಲೇ ಉಳಿದುಕೊಂಡಿದೆ. ಇದು ಉತ್ಪಾದಕರಿಗೆ ಭಾರಿ ನಷ್ಟವನ್ನುಂಟು ಮಾಡಿದೆ. ಬೇಸಿಗೆಯಲ್ಲಿ ಮೊಟ್ಟೆಗಳ ಬಳಕೆ ಕಡಿಮೆಯಾಗುವುದರಿಂದ ಈಗಾಗಲೇ ದಾಸ್ತಾನು ಹೆಚ್ಚಾಗಿರುತ್ತದೆ. ಯುದ್ಧದ ಪರಿಣಾಮದಿಂದ ರಫ್ತು ಕೂಡ ನಿಂತುಹೋಗಿರುವುದು ಸಮಸ್ಯೆಗಳನ್ನು ಇನ್ನಷ್ಟು ಹೆಚ್ಚಿಸಿದೆ.

ಮೊಟ್ಟೆ ಬೆಲೆ ಕುಸಿತ ಸಾಧ್ಯತೆ

ಮುಂದಿನ ದಿನಗಳಲ್ಲಿ ಮೊಟ್ಟೆಯ ಬೆಲೆ ಕುಸಿಯುವ ಸಾಧ್ಯತೆಯಿದೆ. ಯುದ್ಧ ಮುಂದುವರೆದರೆ, ಉತ್ಪಾದನಾ ವೆಚ್ಚಕ್ಕಿಂತಲೂ ಕಡಿಮೆ ಬೆಲೆಗೆ ಮೊಟ್ಟೆಗಳನ್ನು ಮಾರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿ ಇನ್ನಷ್ಟು ನಷ್ಟ ಉಂಟಾಗುವ ಭೀತಿಯಿದೆ.

ಇದನ್ನೂ ಓದಿ: ಇರಾನ್ ನಾಯಕ ಅಲಿ ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ: ಕಾಂಗ್ರೆಸ್ ಶಾಸಕ ಎನ್​ಎ ಹ್ಯಾರಿಸ್​ಗೆ ಎದುರಾಯ್ತು ಸಂಕಷ್ಟ

ಒಟ್ಟಾರೆ, ಜಾಗತಿಕ ಸಂಘರ್ಷಗಳು ಕರ್ನಾಟಕವೂ ಸೇರಿದಂತೆ ಭಾರತದ ವಿವಿಧ ರಾಜ್ಯಗಳ ಆರ್ಥಿಕತೆ ಮತ್ತು ಜನಸಾಮಾನ್ಯರ ದೈನಂದಿನ ಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ.

ವರದಿ: ಲಕ್ಷ್ಮೀ ನರಸಿಂಹ, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ಎರಡೂ ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ
ಎರಡೂ ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಾಯ
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಾಯ